ಬೆಳಗಾವಿ: ಕೋವಿಡ್-19 ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ನಿರತ ವೈದ್ಯರ ಜೊತೆ ವರ್ಚುವಲ್ ಸಭೆ ಮೂಲಕ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಾರ್ಯದ ಒತ್ತಡದ ಮಧ್ಯೆಯೂ ನಿರಂತರವಾಗಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ ಸೇರಿದಂತೆ ಎಲ್ಲ ವೈದ್ಯಕೀಯ ಸಿಬ್ಬಂದಿ ನಮ್ಮ ಅಮೂಲ್ಯ ಆಸ್ತಿ. ಇಂತಹ ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಸರ್ಕಾರ …
Read More »ನಕಲಿ ವೈದ್ಯರಿಂದ ಊರು ತುಂಬಾ ಹರಡಿತು ಕೊರೋನ ಸೋಂಕು!!!
ವಿಜಯನಗರ: ಕರೊನಾ ನಗರಗಳಿಗೆ ಮಾತ್ರ ಸೀಮಿತವಾಗದೆ ಹಳ್ಳಿ ಹಳ್ಳಿಗೂ ಹಬ್ಬಲಾರಂಭಿಸಿದೆ. ಇದನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ಕೆಲವರು ವೈದ್ಯರಂತೆ ನಾಟಕವಾಡಿ ಜನಸಾಮಾನ್ಯರಿಂದ ಹಣ ಲೂಟಿ ಮಾಡುವ ಕೆಲಸಕ್ಕೂ ಮುಂದಾಗಿದ್ದಾರೆ. ಅದೇ ರೀತಿಯ ಘಟನೆ ವಿಜಯನಗರ ಜಿಲ್ಲೆಯಲ್ಲೂ ನಡೆದಿದ್ದು, ಗ್ರಾಮವನ್ನೇ ಸೀಲ್ಡೌನ್ ಮಾಡುವಂತಹ ಸ್ಥಿತಿ ಬಂದೊದಗಿದೆ. ಹೌದು! ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಕೆಲ ನಕಲಿ ಡಾಕ್ಟರ್ಗಳು ಸೇರಿಕೊಂಡಿದ್ದಾರೆ ಎನ್ನಲಾಗಿದೆ. ಕರೊನಾ ಲಕ್ಷಣವಿರುವ …
Read More »ಮೂರು ಚಿತ್ರಗಳಿಗೆ ಸಂಬರಗಿ ಸಹಿ; ಬಿಗ್ ಬಾಸ್ ಮನೆಯಿಂದ ಬರುತ್ತಿದ್ದಂತೆ ಸಿನಿಮಾ ಅವಕಾಶ
ಬೆಂಗಳೂರು: ‘ಬಿಗ್ ಬಾಸ್ – ಸೀಸನ್ 8’ ರಿಯಾಲಿಟಿ ಶೋ ರದ್ದಾಗಿದೆ. ಎಲ್ಲ ಸ್ಪರ್ಧಿಗಳು ಅವರವರ ಮನೆ ತಲುಪಿದ್ದಾರೆ. ಒಂದಷ್ಟು ಮಂದಿ ಮನೆಯಿಂದ ಹೊರಬಂದು ಕೈಲಾದ ಸಹಾಯಕ್ಕೆ ಧುಮುಕಿದ್ದಾರೆ. ಇನ್ನು ಕೆಲವರು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಸಂಬರಗಿ ‘ಬಿಗ್ ಬಾಸ್’ನಿಂದ ಹೊರಬರುತ್ತಿದ್ದಂತೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರಂತೆ! ಈ ಪೈಕಿ ಮೊದಲನೆಯದು ಹಂಸಲೇಖ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದಲ್ಲದೆ, ರವಿ ಶ್ರೀವತ್ಸ ನಿರ್ದೇಶನದ ಮತ್ತೊಂದು ಚಿತ್ರ ಮತ್ತು ಎನ್ …
Read More »ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ.
ಬೆಳಗಾವಿ – ಬೆಳಗಾವಿ ಜಿಲ್ಲೆಯ ಸರಕಾರಿ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳನ್ನು ಸಧ್ಯ ಲಭ್ಯವಿರುವ ಬೆಡ್ ಗಳ ವಿವರ ಇಲ್ಲಿದೆ. ಜನರಲ್ ವಾರ್ಡ್, ವೆಂಟಿಲೇಟರ್ ಬೆಡ್, ಆಕ್ಸಿಜನ್ ರಹಿತ ಬೆಡ್, ಆಕ್ಸಿಜನ ಸಹಿತ ಬೆಡ್, ವ್ಯಾಕ್ಸಿನೇಶನ್ ವಿವರ ಎಲ್ಲವೂ ಇಲ್ಲಿ ಒಂದೇ ಕಡೆ ಲಭ್ಯವಿದೆ. ಈ ಕೆಳಗಿನ ಲಿಂಕ್ ಓಪನ್ ಮಾಡಿ ಎಲ್ಲ ಮಾಹಿತಿ ಪಡೆಯಬಹುದು. ಆಸ್ಪತ್ರೆಯಿಂದ ಆಸ್ಪತ್ರೆಗೆ ಸೋಂಕಿತರು ಸುತ್ತಾಡುವ ಬದಲು ಇಲ್ಲಿನ ಮಾಹಿತಿ ತಿಳಿದುಕೊಂಡು ಹೋಗುವುದು ಉತ್ತಮ. …
Read More »ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಏರಿಕೆ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಪೆಟ್ರೋಲ್-ಡೀಸೆಲ್ ದರ ಕೂಡ ಏರಿಕೆಯಾಗುತ್ತಿದ್ದು, ಇಂದು ಪ್ರತಿ ಲೀಟರ್ ಪೆಟ್ರೋಲ್ 22-24 ಪೈಸೆ ಹಾಗೂ ಡೀಸೆಲ್ 27-29 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೇಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 95.33 ರೂಪಾಯಿ ಹಾಗೂ ಡೀಸೆಲ್ ದರ 87.92 ರೂಪಾಯಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 92.58ರೂ ಹಾಗೂ ಡೀಸೆಲ್ ದರ 83.22 ರೂಪಾಯಿ ಆಗಿದೆ. ಮುಂಬೈನಲ್ಲಿ ಪೆಟ್ರೋಲ್-ಡೀಸೆಲ್ ದರ ಸಾರ್ವಕಾಲಿಕ ಗರಿಷ್ಠ ಏರಿಕೆ ಕಂಡಿದ್ದು, …
Read More »ಖಾನಾಪುರ ತಾಲೂಕಲ್ಲಿ ಅಜ್ಜಿ ಮೊಮ್ಮಗ ಸಾವು
ಬೆಳಗಾವಿ – ಭಾನುವಾರ ಮೇ.16ರಂದು ಮುಂಜಾನೆ 9 ಗಂಟೆ ಸಮಯದಲ್ಲಿ ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದ ಪರಿಣಾಮ ದೊಡ್ಡವ್ವ ರುದ್ರಪ್ಪ ಪಟ್ಟೆದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೆದ (3) ಮೃತಪಟ್ಟಿದ್ದಾರೆ. ಶನಿವಾರ ರಾತ್ರಿಯಿಂದ ಗ್ರಾಮದಲ್ಲಿ ಸುರಿಯುತ್ತಿರುವ ಮಳೆ-ಗಾಳಿಗೆ ಇವರು ವಾಸವಿದ್ದ ಮನೆಯ ಗೋಡೆ ಕುಸಿದು ಬಿದ್ದು ಮೃತಪಟ್ಟಿರುತ್ತಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂದಗಡ ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ …
Read More »ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿ ಆಯಂಬುಲೆನ್ಸ್‌ಗೆ ಕರೆ ಮಾಡಿದರೂ ಸ್ಥಳಕ್ಕೆ ಬಾರದ ಆಯಂಬುಲೆನ್ಸ್
ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …
Read More »ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!
ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …
Read More »ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!
ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ. ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ. ಜ್ವರ, ಕೆಮ್ಮು …
Read More »ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು
ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …
Read More »
Laxmi News 24×7