Breaking News

ಜಿಲ್ಲೆ

ಸೋಂಕಿತರು ಇನ್ನು ಮುಂದೆ ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿರಬೇಕು ; ಆರೋಗ್ಯ ಸಚಿವರು

ಬೆಂಗಳೂರು : ಸೋಂಕಿತರು ಇನ್ನು ಮುಂದೆ ಹೋಂ ಐಸೋಲೇಷನ್‌ ನಲ್ಲಿ ಇರುವಂತಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸ್ವ್ಯಾಬ್ ಪರೀಕ್ಷೆ ವರದಿ 24 ರಿಂದ 36 ಗಂಟೆಯ ಒಳಗಾಗಿ ಸಿಗುವಂತೆ ಕ್ರಮ …

Read More »

ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?

ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …

Read More »

ಅನುಮತಿ ಇಲ್ಲದೆ ವಿವಾಹ ಆಯೋಜನೆ- 25 ಸಾವಿರ ದಂಡ

ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. …

Read More »

ಮಕ್ಕಳ ಮನೆಗೇ ಬರಲಿದೆ ಪಠ್ಯಪುಸ್ತಕ : ಆಗಸ್ಟ್‌ ಅಂತ್ಯದ ವೇಳೆಗೆ ಶಾಲೆಗಳಿಂದ ರವಾನೆ

ಬೆಂಗಳೂರು : ಕೊರೊನಾ ದಿಂದಾಗಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಸ್ವಯಂ ಅಧ್ಯಯನಕ್ಕೆ ಅನುಕೂಲವಾಗುವಂತೆ ಆಗಸ್ಟ್‌ ಅಂತ್ಯದೊಳಗೆ ಪಠ್ಯಪುಸ್ತಕ ಪೂರೈಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ಪಠ್ಯಪುಸ್ತಕ ಮುದ್ರಣ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘವು ಎಲ್ಲ ಶಾಲೆಗಳಿಂದ ಈಗಾಗಲೇ ಪುಸ್ತಕದ ಮಾಹಿತಿ ಪಡೆದಿದೆ. ಪುಸ್ತಕ ಮುದ್ರಣ ಕ್ಕಾಗಿ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು, ಕಾರ್ಯಾದೇಶ ನೀಡಿದ 100 ದಿನಗಳೊಳಗೆ ಟೆಂಡರ್‌ ಪಡೆದ ಸಂಸ್ಥೆ ಪುಸ್ತಕಗಳನ್ನು ಮುದ್ರಿಸಿ, ಕರ್ನಾಟಕ …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ಬೆಳಗಾವಿ: ಸಂಪೂರ್ಣ ಲಾಕ್‌ಡೌನ್: ಜನರಿಂದ ಉತ್ತಮ ಸ್ಪಂದನೆ

ಬೆಳಗಾವಿ: ಕೊರೊನಾ ಸೋಂಕಿನ ಸರಪಳಿ ತುಂಡರಿಸುವ ಉದ್ದೇಶದಿಂದ ಜಿಲ್ಲಾಡಳಿತ ಘೋಷಿಸಿರುವ ಸಂಪೂರ್ಣ ಲಾಕ್‌ಡೌನ್‌ಗೆ ಮೊದಲ ದಿನವಾದ ಶನಿವಾರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶನಿವಾರ ಬೆಳಿಗ್ಗೆ 6ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅದರಂತೆ ಪೊಲೀಸರು ಅನುಷ್ಠಾನಕ್ಕೆ ಕ್ರಮ ಕೈಗೊಂಡರು. ಬ್ಯಾರಿಕೇಡ್‌ಗಳನ್ನು ಹೆಚ್ಚಿಸಿ ಸಂಚಾರ ನಿರ್ಬಂಧಿಸಿದರು. ಬಹುತೇಕರು ಮನೆಗಳಲ್ಲೇ ಉಳಿದು ಸಹಕರಿಸಿದ್ದರಿಂದ ಜಿಲ್ಲೆಯು ಸ್ತಬ್ಧವಾಗಿತ್ತು. ಆಸ್ಪತ್ರೆಗಳಿಗೆ, ಮೆಡಿಕಲ್ …

Read More »

ಮಂಡ್ಯ: ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಮಂಡ್ಯ: ಜಿಲ್ಲೆಯಾದ್ಯಂತ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ. ಭಾನುವಾರ, ಸೋಮವಾರ, ಗುರುವಾರ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಎಂದಿನಂತೆ ಅವಕಾಶ ಇರಲಿದೆ. ಉಳಿದಂತೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. ಅಂದು ಹೋಟೆಲ್ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಿದ್ದಾರೆ.

Read More »

ಕೋವಿಡ್ ಲಸಿಕೆಯ 2ನೇ ಡೋಸ್ ನೀಡಲು ತರ್ಕಬದ್ಧ ನೀತಿ ಜಾರಿಗೊಳಿಸಿ: ಹೈಕೋರ್ಟ್

ಬೆಂಗಳೂರು, ಮೇ 21: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲು ತರ್ಕಬದ್ಧ ನೀತಿಯನ್ನು ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠವು ಮೇ 25ರಂದು ತರ್ಕಬದ್ಧವಾದ ಲಸಿಕೆ ನೀತಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಕೋವಿಡ್‌ ಲಸಿಕೆಯ ವ್ಯಾಪಕ ಕೊರತೆಯಿದೆ ಎಂಬ ವಿಚಾರವನ್ನು ಮನಗಂಡ ಮೇಲೆ ನ್ಯಾಯಾಲಯವು …

Read More »

ಕೋವಿಡ್ ಕಾರಣಕ್ಕೆ ಎಲ್ಲಾ ತಪ್ಪಿಗೂ ಕ್ಷಮೆ ಸಿಗದು: ಹೈಕೋರ್ಟ್

ಬೆಂಗಳೂರು: ಎಲ್ಲಾ ಲೋಪಕ್ಕೂ ಕೋವಿಡ್ ಕಾರಣ ನೀಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ಆದೇಶದಲ್ಲಿದ್ದ ನಿರ್ಬಂಧ ಸಡಿಲಿಕೆ ಕೋರಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. 10 ದಿನಗಳಲ್ಲಿ ಪೊಲೀಸ್ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಮಂಡ್ಯ ನಿವಾಸಿ ದೇವರಾಜ್ ಎಂಬುವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸರು ಸ್ಪೋಟಕ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು 2019ರ ನವೆಂಬರ್‌ 4ರಂದು ದಾಖಲಿಸಿದ್ದರು. ಟೈಫಾಯಿಡ್‌ನಿಂದ ಬಳಲುತ್ತಿದ್ದ ಕಾರಣ ನೀಡಿದ್ದಕ್ಕಾಗಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿತ್ತು. …

Read More »

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ …

Read More »