Breaking News

ಜಿಲ್ಲೆ

ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿ: ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎರಡು ಗಂಟೆಯಲ್ಲಿ ನಾಲ್ವರು ರೋಗಿಗಳು ಕುಟುಂಬಸ್ಥರ ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ನಾಲ್ಕು ಗಂಟೆಗಳ ಹಿಂದೆ 56 ವರ್ಷ ವ್ಯಕ್ತಿಯನ್ನ ಬೆಳಗಾವಿಯ ಬಿಮ್ಸ್ ಗೆ ಕರೆತರಲಾಗಿತ್ತು. ಆಕ್ಸಿಜನ್ ಬೆಡ್ ನೀಡುವಂತೆ ರೋಗಿಯ ಸಂಬಂಧಿ ಆಸ್ಪತ್ರೆಯ ಸಿಬ್ಬಂದಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದರು. ಬೆಡ್ ಸಿಗುವ ವೇಳೆಗಾಗಲೇ ವ್ಯಕ್ತಿಯ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇದರಿಂದ …

Read More »

ಚುನಾವಣಾ ಪ್ರಚಾರದ ವೆಳೆ ಸಿಎಂ ಪ್ರಾಥಮಿಕ ಸಂಪರ್ಕದಲ್ಲಿದ್ದ ಹೋಟೆಲ್ ಸಿಬ್ಬಂದಿ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆ

ಬೆಳಗಾವಿ: ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಅಂದು ಸಿಎಂ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಬೆಳಗಾವಿಯ ಹೋಟೆಲ್ ನ 12 ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ.   ಏಪ್ರಿಲ್ 16ರಂದೆ ಈ ಸಿಬ್ಬಂದಿಗಳ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತಾದರೂ 20 ದಿನಗಳ ಬಳಿಕ ವರದಿ ಬಂದಿದ್ದು, ಇದೀಗ 12 ಜನರಲ್ಲಿ ಸೋಂಕು ದೃಢ್ಪಟ್ಟಿದೆ. …

Read More »

ಚಿತಾಗಾರಗಳ ಅಕ್ಕಪಕ್ಕದಲ್ಲಿ ಮೃತದೇಹಗಳ ಅವಶೇಷಗಳು..!

ಬೆಂಗಳೂರು,ಮೇ.5-ಕೊರೊನಾ ಸೋಂಕಿನಿಂದ ಮೃತಪಟ್ಟ ನಿಮ್ಮ ಕುಟುಂಬ ಸದಸ್ಯರ ಮೃತದೇಹಗಳ ಶವಸಂಸ್ಕಾರ ಸಮರ್ಪಕವಾಗುತ್ತಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲ ಅಂದರೆ ಮೃತದೇಹಗಳ ಅರೆಬೆಂದ ದೇಹದ ಭಾಗಗಳು ನಾಯಿ ನರಿ ಪಾಲಾಗಲಿದೆ.ಹೇಗೆ ಅಂತಿರಾ. ಹಾಗಾದರೆ ಈ ಸುದ್ದಿ ಓದಿ.. ನಗರದಲ್ಲಿ ದಿನೇ ದಿನೇ ನೂರಾರು ಮಂದಿ ಕೊರೊನಾ ಸೋಂಕಿನಿಂದ ಬಲಿಯಾಗುತ್ತಿದ್ದಾರೆ. ಸಾಯುತ್ತಿರುವವರ ಶವಗಳ ಸಂಸ್ಕಾರ ಮಾಡಲು ನಗರದಲ್ಲಿ ಸ್ಮಶಾನಗಳು ಸಾಕಾಗುತ್ತಿಲ್ಲ. ಹೀಗಾಗಿ ಪ್ರತಿನಿತ್ಯ ನೂರಾರು ಶವಗಳನ್ನು ಬೇಕಾಬಿಟ್ಟಿ ಸುಡಲಾಗುತ್ತಿದೆ. ಈಗಾಗಲೇ ಸುಮನಹಳ್ಳಿ ರುದ್ರಭೂಮಿಯಲ್ಲಿ ತಾಂತ್ರಿಕ …

Read More »

ಬೆಡ್ ಬ್ಲಾಕಿಂಗ್ ದಂಧೆಯ ಅತೀ ದೊಡ್ಡ ಜಾಲ – ಇಬ್ಬರು ವೈದ್ಯರು ಸೇರಿ 17 ಮಂದಿ ಅರೆಸ್ಟ್

ಬೆಂಗಳೂರು: ಸಿಲಿಕಾನ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದ್ದ ಕೋವಿಡ್ ಬೆಡ್ ಬ್ಲಾಕಿಂಗ್ ದಂಧೆ ಸುದ್ದಿ ಅಲ್ಲೋಲಕಲ್ಲೋಲ ಉಂಟು ಮಾಡಿತ್ತು. ಸಂಸದ ತೇಜಸ್ವಿ ಸೂರ್ಯ ಭೇಟಿ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಸೂಕ್ತ ತನಿಖೆಯ ಭರವಸೆ ನೀಡಿದ್ರು. ಅಲ್ಲದೇ ಪ್ರಕರಣವನ್ನು ಕಳೆದ ರಾತ್ರಿಯೇ ಸಿಸಿಬಿಗೆ ಕೂಡ ವರ್ಗಾಯಿಸಿದ್ರು. ಈ ಬೆನ್ನಲ್ಲೇ ತನಿಖೆ ಶುರು ಮಾಡಿದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಜಯನಗರ ಠಾಣೆಗೆ ಭೇಟಿ ಕೊಟ್ಟು, ಆರೋಪಿಗಳಾದ ರೋಹಿತ್, ನೇತ್ರಾ ವಿಚಾರಣೆ ನಡೆಸಿದ್ರು. …

Read More »

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಸಂಸದರು ಸಹ ಕೇಂದ್ರ ಸರ್ಕಾರದ ಮೇಲೆ ಈ ಕುರಿತು ಒತ್ತಡ ಹೇರಬೇಕು ಎಂದು ಅವರು ಹೇಳಿದ್ದಾರೆ. ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ …

Read More »

ಬೆಡ್ ಬ್ಲಾಕಿಂಗ್ ಹಗರಣ: ಬೆಂಗಳೂರಿನ ಎಲ್ಲಾ ವಲಯದ ಕೊವಿಡ್ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ನಗರದ ಎಲ್ಲಾ ವಲಯದ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ದಾಖಲೆಗಳು ಮತ್ತು ಅಂಕಿಅಂಶಗಳ ಹುಡುಕಾಟ ನಡೆಯುತ್ತಿದೆ. ಬೆಡ್ ಬುಕ್ಕಿಂಗ್ ಪ್ರಕರಣದಲ್ಲಿ‌ ಇದುವರೆಗೆ ನಾಲ್ಕು ಜನರ ಬಂಧನವಾಗಿದೆ. ಒಟ್ಟು ಎರಡು ಪ್ರಕರಣ ದಾಖಲಾಗಿದೆ. ಸಾಫ್ಟ್‌ವೇರ್ ಮೂಲಕ ವಂಚನೆ ಮಾಡುವ ಮಾಹಿತಿ ಇದೆ. ಬಂಧಿತ ಇಬ್ಬರು ಡಾಕ್ಟರ್​ಗಳು ವಾರ್ ರೂಮ್ ಇನ್​ಚಾರ್ಜ್​ಗಳಾಗಿದ್ದರು. ಅವರು ಸರ್ಕಾರಿ ವೈದ್ಯರಾಗಿದ್ದರು. ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸ್ತಾ ಇದ್ದಾರೆ ಎಂದು ನಗರ …

Read More »

ರಾಜ್ಯದ ಆಮ್ಲಜನಕ ಬೇರೆಡೆ ಹಂಚಿಕೆಗೆ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಸಂದರ್ಭದಲ್ಲಿ ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯದಲ್ಲೇ ಬಳಸಿಕೊಳ್ಳಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ನಿತ್ಯವೂ 1,043 ಟನ್‌ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ಅದರಲ್ಲಿ 865 ಟನ್‌ ರಾಜ್ಯಕ್ಕೆ ಹಂಚಿಕೆ ಮಾಡಿದ್ದು, 675 ಟನ್ ಮಾತ್ರ ಬಳಕೆಗೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯುಳ್ಳ ವರದಿಯನ್ನು ‘ಪ್ರಜಾವಾಣಿ’ ಮಂಗಳವಾರ ಪ್ರಕಟಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಪತ್ರಿಕೆಯ ವರದಿಯ ತುಣುಕನ್ನು ಹಂಚಿಕೊಂಡಿರುವ …

Read More »

ಆಕ್ಸಿಜನ್ ಕೊರತೆಗೆ ಕಾರಣ ಯಾರು : ಪ್ರಧಾನಿಗಳೇ ನಮ್ಮ ಕರ್ನಾಟಕ ಅಂದ್ರೆ ಯಾಕಿಷ್ಟು ನಿರ್ಲಕ್ಷ್ಯ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …

Read More »

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ರಾಜ್ಯದ ಆಕ್ಸಿಜನ್ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಸೂಕ್ತ ಆದೇಶ ಹೊರಡಿಸಲಿಗೆ ಎಂದೂ ಎಚ್ಚರಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ …

Read More »