ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಎ. 30 ರಂದು ನಡೆಯಿತು. ಎರಡು ಕಡೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಅಧಿಕಾರದ ಗದ್ದುಗೆಯೇರಿದೆ. ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹಿನ್ನಡೆ ಸಾಧಿಸಿವೆ. ಭದ್ರಾವತಿ: ನಗರಸಭೆಯ 35 ರಲ್ಲಿ, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೆ …
Read More »ಕೊರೋನಾ ಕರ್ತವ್ಯ ನಿರತರಿಗಾಗಿ ಸಾರಿಗೆ ಸೌಲಭ್ಯ – ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಲಾಕ್ ಡೌನ್ ವಿಧಿಸಿದ್ದರು ಸಹ ಕೋವಿಡ್ ಗೆ ಸಂಬಂಧಪಟ್ಟ ಸೇವಾ ಚಟುವಟಿಕೆಗಳಿಗೆ ಮತ್ತು ಕೋವಿಡ್ ವಾರಿಯರ್ಸ್ ಗಳ ಸೇವೆಗೆ ಅಗತ್ಯವಾದಲ್ಲಿ ಬಸ್ಸುಗಳನ್ನು ಒದಗಿಸಲು ನಾಲ್ಕೂ ನಿಗಮಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿಯವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಇಡೀ ರಾಜ್ಯವೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ …
Read More »ಓಡಾಟ ನಡೆಸುತ್ತಿದ್ದವರ ಮೇಲೆ ಪೊಲೀಸರ ಲಾಠಿಚಾರ್ಜ್ ವಾಹನಗಳ ಸೀಜ್
ಬೆಳಗಾವಿ; ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೆ ತಂದಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ಮಾತ್ರ ನಿಯಮಗಳನ್ನು ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಓಡಾಟ ನಡೆಸುತ್ತಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಬಿಗಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಆಯಾ ಜಿಲ್ಲಾಡಳಿತದ ಜವಾಬ್ದಾರಿ ಎಂದು ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದಾಗ್ಯೂ ಕೂಡ ಜಿಲ್ಲಾಡಳಿತವಾಗಲಿ, ಪೊಲೀಸರಾಗಲಿ ಎಚ್ಚೆತ್ತುಕೊಂಡಂತಿಲ್ಲ. …
Read More »ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ
ಬೆಳಗಾವಿ-ಮಹಾಮಾರಿ ಕೊರೊನಾ ಅಟ್ಟಹಾಸ ಬೆಳಗಾವಿಯಲ್ಲಿ ಮುಂದುರೆದಿದ್ದು ಕೋವೀಡ್ ಮರಣ ಮೃದಂಗ ಮುಂದುರೆದಿದೆ,ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಈವರೆಗೂ 11 ಜನರು ಮೃತಪಟ್ಟಿದ್ದು, ಈ ಹನ್ನೊಂದು ಶವಗಳನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ.ಸದಾಶಿವನಗರ ಸ್ಮಶಾನದಲ್ಲಿ ಇಂದು ಒಂದೇ ದಿನ 11 ಜನರ ಅಂತ್ಯಕ್ರಿಯೆ ನಡೆದಿದೆ. ಸದಾಶಿವ ನಗರ ಸ್ಮಶಾನದ ಬಳಿ ನಿಯೋಜಿತ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಬೆಚ್ಚಿ ಬೀಳಿಸುವ ಮಾಹಿತಿ …
Read More »ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್
ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …
Read More »ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!
ಬೆಂಗಳೂರು: ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ನಂಬಿಸಿ ವಂಚಿಸಿದ್ದ ಆರೋಪದಲ್ಲಿ ಬಂಧಿತನಾಗಿರುವ ಯುವರಾಜ್ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರೇ ರಾಜ್ಯಪಾಲರ ಹುದ್ದೆಗಾಗಿ ಅರ್ಜಿದಾರನಿಗೆ ಲಂಚ ನೀಡಿರುವುದು ದುರದೃಷ್ಟಕರ, ಇದರಿಂದ ನ್ಯಾಯಮೂರ್ತಿಯ ಹುದ್ದೆಯ ಘನತೆ ಕುಗ್ಗಿರುವುದಲ್ಲದೆ, ರಾಜ್ಯಪಾಲರ ಹುದ್ದೆಯ ಘನತೆಗೂ ಕುಂದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪೊಲೀಸರು …
Read More »ಕೋವಿಡ್ ರೋಗಿಗಳ ಪಾಲಿಗೆ ‘ಹೀರೋ’ : ಆಯಂಬುಲೆನ್ಸ್ ಚಾಲಕನಾದ ಖಳನಟ ಅರ್ಜುನ್ ಗೌಡ
ಬೆಂಗಳೂರು: ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ದೇಶ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ, ಇಲ್ಲೊಬ್ಬ ಚಂದನವನದ ನಟ ಆಯಂಬುಲೆನ್ಸ್ ಚಾಲಕನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿರುವ ಅರ್ಜುನ್, ಈಗ ರಿಯಲ್ ಲೈಫಿನಲ್ಲಿ ಹೀರೋ ಆಗಿದ್ದಾನೆ. ಇವರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಆಯಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ …
Read More »18 ವರ್ಷ ಮೇಲ್ಪಟ್ಟವರು ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಬರಬೇಡಿ: ಸಚಿವ ಸುಧಾಕರ್
ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ.1ರಿಂದಲೇ ಕೋವಿಡ್ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಲು ನಾಳೆ ಆಸ್ಪತ್ರೆಗಳಿಗೆ ಬರಬೇಡಿ. ನಮಗೆ ಕಂಪೆನಿಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬೇಕಾದಷ್ಟು ಲಸಿಕೆ ತಲುಪಿಲ್ಲ. ಯಾವಾಗ ಲಸಿಕೆ ಬರುತ್ತಿದೆ ಎಂಬ ಮಾಹಿತಿಯೂ ಇಲ್ಲ ಎಂದರು. ಹೀಗಾಗಿ ಲಸಿಕೆ ಪಡೆಯಲು 18ರಿಂದ 45 ವರ್ಷದವರೆಗಿನವರು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡವರು …
Read More »ಗಮನಿಸಿ: ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ
ಬೆಂಗಳೂರು: ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ರೊಳಗಾಗಿ …
Read More »ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕೆಲಸಕ್ಕೆ ಬರುತ್ತಿದ್ದ ಫಾರ್ಮಾಸಿಸ್ಟ್; ಜಿಲ್ಲಾಧಿಕಾರಿಯಿಂದ ಅಮಾನತು ಆದೇಶ
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರತೆ ವೈದ್ಯಕೀಯ ವ್ಯವಸ್ಥೆಗೆ ಸವಾಲೊಡ್ಡಿದ್ದು ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸರ್ಕಾರ ಕಠಿಣ ನಿಯಮಾವಳಿಗಳ ಮೊರೆ ಹೋಗಿದೆ. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಾಗಿದ್ದ ವ್ಯಕ್ತಿಯೇ ಬೇಜವಾಬ್ದಾರಿತನದಿಂದ ವರ್ತಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಧೋಳ ತಾಲ್ಲೂಕು ಆಸ್ಪತ್ರೆಯ ಮುಖ್ಯ ಫಾರ್ಮಾಸಿಸ್ಟ್ ನಂದಕುಮಾರ ಬೋನಗೇರಿ ಎಂಬುವವರು ಕೊರೊನಾ ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರನ್ನೂ ಅಪಾಯಕ್ಕೆ ಸಿಲುಕಿಸಿದ್ದಾರೆ. …
Read More »
Laxmi News 24×7