ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ. ರಾಜ್ಯದ …
Read More »ನಿಧನ ವಾರ್ತೆ ರಾಮಣ್ಣ ತೋಳಿನವರ ನಿಧನ
ಗೋಕಾಕ: ತಾಲೂಕಿನ ಮಾಲದಿನ್ನಿ ಗ್ರಾಮದ ನಿವಾಸಿ, ಉಪ್ಪಾರ ಸಮಾಜದ ತಾಲೂಕಾಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ರಾಮಣ್ಣ ಭೀಮಪ್ಪ ತೋಳಿನವರ(68) ರವಿವಾರ ನಿಧನ ಹೊಂದಿದರು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಉಪ್ಪಾರ ಸಮಾಜದ ಮುಖಂಡರು ರಾಮಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Read More »ದೇಶೀಯ ಲಸಿಕೆ ಕೋವ್ಯಾಕ್ಸಿನ್ ದರ ನಿಗದಿ
ಹೈದರಾಬಾದ್: ದೇಶಾದ್ಯಂತ ಕೊರೊನಾ 2ನೇ ಅಲೆ ತಾಂಡವಾಡುತ್ತಿದ್ದು, ಹತೋಟಿಗೆ ತರಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ನಡೆಸಿವೆ. ಇದರ ಭಾಗವಾಗಿ ಮೇ ತಿಂಗಳಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಹೀಗಿರುವಾಗಲೇ ದೇಶೀಯ ಕೊರೊನಾ ಲಸಿಕೆ ಕೋವ್ಯಾಕ್ಸಿನ್‍ಗೆ ದರ ನಿಗದಿಪಡಿಸಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್‍ಗೆ 600 ರೂ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,200 ರೂ. ದರ ನಿಗದಿಪಡಿಸಲಾಗಿದೆ. ಈ ಕುರಿತು ಹೈದರಾಬಾದ್ ಮೂಲದ ಕೋವ್ಯಾಕ್ಸಿನ್ …
Read More »ಸಂಸದರನ್ನು ದಿಲ್ಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ: ಸಿದ್ದರಾಮಯ್ಯ
ಬೆಂಗಳೂರು, ಎ.25: ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಕಂಡಾಗ ಕನಿಕರ ಮೂಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದಿಲ್ಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ …
Read More »ಪಲ್ಸ್ ಪೋಲಿಯೋ ಮಾದರಿಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್ ಡಿಕೆ ಒತ್ತಾಯ
ಬೆಂಗಳೂರು : ರಾಜ್ಯದ ಪ್ರತಿಯೊಬ್ಬರಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಉಚಿತ ಕೊರೊನಾ ಲಸಿಕೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ …
Read More »ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ …
Read More »ವೀಕೆಂಡ್ ಲಾಕ್’ಡೌನ್: ಬಿಟ್ ಬಿಡಿ ಸಾರ್ ನಾನೇ ಮದ್ವೆ ಗಂಡು ಪೊಲೀಸರಿಗೆ ವರನ ಮನವಿ
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ, ಮದುವೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಇದರಿಂದಾಗಿ ಕಲ್ಯಾಣ ಮಂಟಪದ ಬದಲಾಗಿ ಸರಳ ವಿವಾಹಕ್ಕೆ ಅನೇಕರು ಮೊರೆ ಹೋಗಿದ್ದಾರೆ. ಹೀಗೆ ದೇವಸ್ಥಾನದಲ್ಲೇ ಮದುವೆ ಆಗೋದಕ್ಕೆ ತಂದೆಯ ಜೊತೆಗೆ ಹೋಗುತ್ತಿದ್ದಂತ ಮಧು ಮಗನಿಗೂ, ವೀಕ್ ಎಂಡ್ ಕರ್ಪ್ಯೂ ಬಿಸಿ, ಬೆಂಗಳೂರಿನಲ್ಲಿ ತಟ್ಟಿದೆ. ಇಂದು ವೀಕ್ ಎಂಡ್ ಕರ್ಪ್ಯೂ ಹಿನ್ನಲೆಯಲ್ಲಿ, ಕಲ್ಯಾಣ ಮಂಟಪದಲ್ಲಿ ನಡೆಯಬೇಕಿದ್ದಂತ ವಿವಾಹದ ಬದಲಾಗಿ, ದೇವಸ್ಥಾನದಲ್ಲೇ ವಿವಾಹ ಆಗೋದಕ್ಕೆ …
Read More »ಪ್ರೀತಿಸಿದ ‘ಯುವ ಜೋಡಿ’ಗೆ ಕುಟುಂಬಸ್ಥರೇ ವಿಲನ್ : ‘ಯುವ ಪ್ರೇಮಿ’ಗಳು ಆತ್ಮಹತ್ಯೆಗೆ ಶರಣು
ಹಾವೇರಿ : ನಾಲ್ಕು ವರ್ಷಗಳಿಂದ ಪ್ರೀತಿಸಿದ್ದ ಆ ಇಬ್ಬರು ಯುವ ಪ್ರೇಮಿಗಳು, ಮದುವೆ ಆಗೋದಕ್ಕೂ ನಿರ್ಧರಿಸಿದ್ದರು. ಆದ್ರೇ.. ಕುಟುಂಬಸ್ಥರೇ ವಿಲನ್ ಆಗಿ ಪರಿಣಮಿಸಿ, ಯುವತಿಗೆ ಬೇರೆ ಹುಡುಗನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದರು. ಇದರಿಂದ ಮನನೊಂದು ಇಬ್ಬರು ಯುವ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹಾವೇರಿ ತಾಲೂಕಿನ ನಾನೂರು ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದ ಇರ್ಷಾದ್ ಕುಡಚಿ ಹಾಗೂ ವಿದ್ಯಾಶ್ರೀ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇರ್ಷಾದ್ ಡಿಪ್ಲೋಮಾ …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ 2ನೇ ಅಲೆಯಲ್ಲಿ 2ನೇ ಬಾರಿಗೆ ಮುನ್ನೂರರ ಗಡಿ ದಾಟಿದಂತಾಗಿದೆ. ಬೆಳಗಾವಿ ತಾಲೂಕಿನಲ್ಲಿ 104, ಅಥಣಿ 21, ಬೈಲಹೊಂಗಲ 8, ಚಿಕ್ಕೋಡಿ 9, ಗೋಕಾಕ 39, ಹುಕ್ಕೋರಿ 10, ಖಾನಾಪುರ 25, ರಾಮದುರ್ಗ 19, ರಾಯಬಾಗ 41, ಸವದತ್ತಿ 16 ಹಾಗೂ ಇತರೆ …
Read More »ರೆಮಿಡಿಸಿವಿರ್ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್
ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, …
Read More »
Laxmi News 24×7