Breaking News

ಜಿಲ್ಲೆ

ಲಾಠಿ ಪ್ರಹಾರದಿಂದ ಕೋವಿಡ್ ಹೋಗಲ್ಲ, ಬೆಡ್, ಆಕ್ಸಿಜನ್ ನೀಡಿ : ಸಿಎಂ ವಿರುದ್ಧ ಶರವಣ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಜೊತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೆ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ರಾಜ್ಯದಲ್ಲಿ ಎಲ್ಲವನ್ನೂ ಬಂದ್ ಮಾಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಫೇಸ್ ಬುಕ್ ನಲ್ಲಿ ಸಿಎಂ ವಿರುದ್ಧ ಹರಿ ಹಾಯ್ದಿದ್ದಾರೆ. ಮಾನ್ಯ ಯಡಿಯೂರಪ್ಪ ನವರೇ ಕೊರೋನಾ ಹತೋಟಿಗೆ ತರಲು ಸರ್ಕಾರ ವಿಫಲವಾದ ನಂತರ ಜನರ ಮೇಲೆ ಲಾಠಿ ಪ್ರಹಾರ …

Read More »

ನಾಳೆ ರಾಜ್ಯಾಧ್ಯಂತ ‘ವೀಕ್ ಎಂಡ್ ಕರ್ಪ್ಯೂ’ ಹಿನ್ನಲೆ : ‘KSRTC, BMTC ಬಸ್ ಸಂಚಾರ’ ಇರುತ್ತೋ.? ಇಲ್ಲವೋ.? ಇಲ್ಲಿದೆ ಮಾಹಿತಿ.!

ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ …

Read More »

ಖಾಸಗಿ ಕಂಪೆನಿಗಳೊಂದಿಗೆ ಸಾರಿಗೆ ಅಧಿಕಾರಿಗಳ ದೋಸ್ತಿ, ಬೈಕ್‍ಟ್ಯಾಕ್ಸಿ ಚಾಲಕರ ಜತೆ ಕುಸ್ತಿ

ಬೆಂಗಳೂರು,ಏ.22- ಖಾಸಗಿ ಕಂಪೆನಿ ಗಳ ಲಾಭದಾಸೆ, ಅಧಿಕಾರಿಗಳ ಬೇಜವಾಬ್ದಾರಿತನ ದಿಂದಾಗಿ ಬೈಕ್ ಟ್ಯಾಕ್ಸಿ ಸೇವೆಯಲ್ಲಿ ಭಾರೀ ಗೊಂದಲಗಳು ಉಂಟಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಹಲವಾರು ಕಂಪೆನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿವೆ. ಇದು ಸಂಪೂರ್ಣ ಅಕ್ರಮ ಅನಕೃತ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಔಪಚಾರಿಕವಾಗಿ ಹೇಳುತ್ತಿದ್ದಾರೆ. ಆದರೆ, ರ್ಯಾಪಿಡೊ ಸೇರಿದಂತೆ ಬಹಳಷ್ಟು ಖಾಸಗಿ ಕಂಪೆನಿಗಳು ರಾಜಾರೋಷವಾಗಿ ದೃಶ್ಯ ಮಾಧ್ಯಮಗಳಲ್ಲಿ ಜಾಹಿರಾತು ನೀಡಿ ಗ್ರಾಹಕ …

Read More »

I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ

ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ. ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. …

Read More »

ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ: ಮುತಾಲಿಕ್

ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್‍ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ …

Read More »

ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ …

Read More »

ಹೇಗಿರುತ್ತೆ ವೀಕೆಂಡ್ ಕರ್ಫ್ಯೂ

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಕಠಿಣ ನಿಯಮಗಳು ಜಾರಿಯಾಗಿದ್ದು, ಎರಡು ದಿನಗಳ ಕಾಲ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ. ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಏನೆಲ್ಲ ಇರುತ್ತೆ, ಯಾರಿಗೆಲ್ಲ ನಿರ್ಬಂಧ ವಿಧಿಸಲಾಗಿದೆ ಎಂಬುದನ್ನು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಎರಡು ದಿನಗಳ ಕಾಲ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಸಂಪೂರ್ಣ ಬಂದ್ ವಾತಾವರಣವಿರಲಿದೆ. ಮೆಡಿಕಲ್ ಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ …

Read More »

ಸಂತೆಗೆ ಬರುವ ಗ್ರಾಹಕರ, ವ್ಯಾಪಾರಿಗಳ ಕೊವಿಡ್ ಟೆಸ್ಟ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹೊಸ ಐಡಿಯಾ ಮಾಡಿದ್ದಾರೆ. ಸಂತೆಯಲ್ಲೇ ಕೋವಿಡ್ ಟೆಸ್ಟ್ ಮಾಡಲು ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಶುಕ್ರವಾರ ಸಂತೆಗೆ ಬರುವ ಗ್ರಾಹಕರು ಹಾಗೂ ವ್ಯಾಪಾರಿಗಳ ಕೊರೊನಾ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡುತ್ತಿದ್ದಾರೆ. ವಾರದ ಸಂತೆ ಹಿನ್ನೆಲೆ ಸಂತೆಗೆ ನೂರಾರು ಜನ ಆಗಮಿಸುತ್ತಾರೆ, ಈ ಹಿನ್ನೆಲೆಯಲ್ಲಿ ಕಠಿಣ …

Read More »

ಸಂಕಷ್ಟಕ್ಕೆ ಮಿಡಿದ ಎಂ.ಬಿ.ಪಾಟೀಲ್‌ಗೆ ಧನ್ಯವಾದ: ಸುಧಾಕರ್

ವಿಜಯಪುರ/ಬೆಂಗಳೂರು, ಏಪ್ರಿಲ್ 23: ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ ಸಂಕಷ್ಟಕ್ಕೆ ಮಿಡಿಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ವಿಜಯಪುರದ ಬಿಎಲ್‌ಡಿಇ ಮೆಡಿಕಲ್ ಕಾಲೇಜಿನ ಮುಖ್ಯಸ್ಥರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕೊರೊನಾದಿಂದಾಗಿ ಬಾಧಿತರಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರದಿಂದ …

Read More »

ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕಳೆದ ಒಂದು ವಾರದಲ್ಲಿ 15 ಪಟ್ಟು ಕೋವಿಡ್ ಪ್ರಕರಣಗಳು ಹೆಚ್ಚಾಗಿವೆ. ಆದರೂ ಆ ನಿಟ್ಟಿನಲ್ಲಿ ಸರ್ಕಾರ ಸಿದ್ಧತೆ ಮಾಡಿಕೊಂಡಂತೆ ಕಾಣುತ್ತಿಲ್ಲ. ಕಳೆದ ಎಂಟು ದಿನಗಳ ಹಿಂದೆ ಥಿಯೇಟರ್, …

Read More »