Breaking News

ಜಿಲ್ಲೆ

ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್- ಮುರುಗೇಶ್ ನಿರಾಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ. ಜೆಎಸ್ ಡಬ್ಲ್ಯೂ ಮಂಗಳವಾರ ಪ್ರತಿದಿನ 400 ಟನ್ ಆಕ್ಸಿಜನ್ ಪೂರೈಕೆ ಮಾಡುವುದಾಗಿ ತಿಳಿಸಿದ ನಂತರ, ಬಲ್ದೋಟಾ, ಜಿಂದಾಲ್ ಸೇರಿದಂತೆ ಹಲವು ಉಕ್ಕಿನ ಕಾರ್ಖಾನೆಗಳು ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುವುದಾಗಿ ತಿಳಿಸಿವೆ. ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ಸಂಬಂಧ ರಾಜ್ಯ …

Read More »

ಅಕ್ರಮ ಗಣಿಗಾರಿಕೆ ದಂಡ ಪ್ರಮಾಣ ಇಳಿಕೆ: ನಿರಾಣಿ

ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ‌ಮೂಲಕ‌ ಸಮೀಕ್ಷೆ ‌ನಡೆಸಿ‌ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. ‘ಕಾನೂನುಬಾಹಿರ ಗಣಿಗಾರಿಕೆ ‌ನಡೆಯುವ …

Read More »

ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …

Read More »

ಬ್ರೇಕಿಂಗ್: ಸಿಎಂ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು,ಏ.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು. ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು …

Read More »

ಬಿಜೆಪಿ ಪಂಚ ಪ್ರಶ್ನೆಗೆ ‘ದಶ ಪ್ರಶ್ನೆ’ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ!

ಬೆಂಗಳೂರು: ಬಿಜೆಪಿ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಪಕ್ಷ ಕೇಳಿರುವ ಐದು ಪ್ರಶ್ನೆಗಳಿಗೆ 10 ಪ್ರಶ್ನೆಗಳನ್ನು ಕೇಳುವ ಮೂಲಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಆಡಳಿತ ನಡೆಸುವವರ ಕೆಲಸ ಪ್ರಶ್ನೆ ಕೇಳುವುದಲ್ಲ, ಜನರ ಪ್ರಶ್ನೆಗಳಿಗೆ ಉತ್ತರ ನೀಡುವುದು. ತಮ್ಮದು ವಿರೋಧ ಪಕ್ಷ ಅಲ್ಲ, ಆಡಳಿತಾರೂಢ ಪಕ್ಷ ಎನ್ನುವುದನ್ನು ರಾಜ್ಯ ಬಿಜೆಪಿ ಏನಾದರೂ ಮರೆತುಬಿಟ್ಟಿದೆಯಾ ಹೇಗೆ? ಪ್ರಶ್ನೆ ಕೇಳುವ ಅಷ್ಟೊಂದು ಹುಚ್ಚಿದ್ದರೆ‌ ಮರ್ಯಾದೆಯಿಂದ ರಾಜೀನಾಮೆ …

Read More »

ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ

ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ  ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ.  ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ  ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …

Read More »

ಸಾರಿಗೆ ನೌಕರರ ಮುಷ್ಕರ ಅಂತ್ಯ : ರಾಜ್ಯಾದ್ಯಂತ ಬಸ್‌ ಸಂಚಾರ ಆರಂಭ

ಬೆಂಗಳೂರು : ಕಳೆದ 15 ದಿನಗಳಿಂದ ಸಾರಿಗೆ ನೌಕರರು 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯವಾಗಿದೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, “ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದೆ. ನಾಳೆಯಿಂದ ಬಸ್‌ ಸಂಚಾರ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹೈಕೋರ್ಟ್ ಆದೇಶ ಗೌರವಿಸಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ. ಕೊರೊನಾ …

Read More »

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಮತ್ತೆ ಅಕ್ಕಿ ಪ್ರಮಾಣ ಕಡಿತ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿರುವ ಅಕ್ಕಿಪ್ರಮಾಣವನ್ನು ರಾಜ್ಯ ಸರ್ಕಾರ ಮತ್ತೆ ಕಡಿತಗೊಳಿಸಿದೆ. ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ ಈ ಹಿಂದೆ 5 ಕೆಜಿ ಅಕ್ಕಿ, 2 ಕೆಜಿ ಗೋಧಿ ವಿತರಿಸಲಾಗುತ್ತಿತ್ತು. ಹೊಸ ಪದ್ಧತಿಯಲ್ಲಿ ಈ ತಿಂಗಳಿನಿಂದ 2 ಕೆಜಿ ಅಕ್ಕಿ, 3 ಕೆಜಿ ರಾಗಿ ಹಾಗೂ 2 …

Read More »

14 ದಿನಗಳ ಟೈಟ್ ನೈಟ್ ಕರ್ಫ್ಯೂ ಆರಂಭ – ಬೆಂಗಳೂರಿನ ಎಲ್ಲ ಫ್ಲೈ ಓವರ್ ಬಂದ್

ಬೆಂಗಳೂರು: 14 ದಿನಗಳ ಟೈಟ್ ನೈಟ್ ಕರ್ಫ್ಯೂ ರಾತ್ರಿ 9 ಗಂಟೆಯಿಂದ ಆರಂಭವಾಗಿದ್ದು, ಬೆಂಗಳೂರಿನ ಎಲ್ಲ ಫ್ಲೈ ಓವರ್ ಗಳು ಬಂದ್ ಆಗಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಆಗಿದ್ದು, ಅಲ್ಲಲ್ಲಿ ಕೆಲವೊಂದು ವಾಹನಗಳು ಕಾಣ ಸಿಗುತ್ತಿವೆ. ನೈಟ್ ಕರ್ಫ್ಯೂ ಬೆಳಗ್ಗೆ 6 ಗಂಟೆವರೆಗೂ ಇರಲಿದೆ. ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್, ಚರ್ಚ್ ಸ್ಟ್ರೀಟ್ ರಸ್ತೆ, ಎಂಜಿ ರೋಡ್ ಒಂದು ಬದಿಯನ್ನ ಬಂದ್ ಮಾಡಲಾಗಿದೆ. ಅದೇ …

Read More »

ಗೋಕಾಕ: ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ಹಾಕುತ್ತಿರುವುದು.

ಗೋಕಾಕ: ಜನತೆ ಸ್ವಪ್ರೇರಣೆಯಿಂದ ಕೋವಿಡ್ ಲಸಿಕೆ ಪಡೆದು ಮಹಾಮಾರಿ ಕೋರೋನಾದಿಂದ ರಕ್ಷಣೆ ಪಡೆಯುವಂತೆ ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ಹೇಳಿದರು. ಬುಧವಾರದಂದು ನಗರದ ಮುಪ್ಪಯ್ಯನಮಠದಲ್ಲಿ ವಾರ್ಡ ನಂ 29ರಲ್ಲಿಯ ಜನತೆಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಲಸಿಕೆ ಚುಚ್ಚುಮದ್ದು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಕೋವಿಡ್ ಮಹಾಮಾರಿ ಹೆಚ್ಚಾಗುತ್ತಿದೆ. ಜನತೆ ಜಾಗೃತರಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋರೋನಾ …

Read More »