Breaking News

ಜಿಲ್ಲೆ

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »

ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು. “ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ …

Read More »

ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ

ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …

Read More »

ಮಯನ್ಮಾರ್​​ನಿಂದ​ ಬೆಂಗಳೂರಿನವರೆಗೆ ಮಿಕ್ಸರ್​, ಗ್ರೈಂಡರ್​​ ಬಾಕ್ಸ್‌ ನಲ್ಲಿ ಡ್ರಗ್ಸ್​ ಸಾಗಾಟ ಜಾಲ ; ಪೋಲೀಸ್‌ ಬಲೆಗೆ

ಬೆಂಗಳೂರು : ಬೌನ್ಸ್ ಕಂಪನಿಯ ಬೈಕ್​ಗಳ ಮುಖಾಂತರ ಗ್ರಾಹಕರಿಗೆ ಡ್ರಗ್ಸ್​​​ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ದಂಧೆಕೋರರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಣಿಪುರ ಮೂಲದ ಮೊಹಮ್ಮದ್ ಸಜೀದ್ ಖಾನ್, ಮೊಹಮ್ಮದ್ ಅಜಾದ್ ಹಾಗೂ ಸಪಮ್ ಸೀತಲ್ ಕುಮಾರ್ ಸಿಂಗ್ ಬಂಧಿತ ಆರೋಪಿಗಳು. ಬಂಧಿತರಿಂದ 60 ಲಕ್ಷ ರೂ. ಮೌಲ್ಯದ 130 ಗ್ರಾಂ ಹೆರಾಯಿನ್, 2480 ಎಕ್ಸೆಟೆನ್ಸಿ ಮಾತ್ರೆಗಳನ್ನ ವಶಪಡಿಸಿಕೊಳ್ಳಲಾಗಿದೆ. .ಆರೋಪಿಗಳು ಕೆಲಸ ಅರಸಿ‌ ಮೂರು ವರ್ಷಗಳ ಹಿಂದೆ ರಾಜಧಾ‌ನಿಗೆ ಬಂದಿದ್ದರು. …

Read More »

ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. …

Read More »

ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ. ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿದು ಸಾವಿಗೀಡಾದ ದುರ್ದೈವಿ. 100 ಕುರಿ ಸಾಕಿದ್ದ ಸೋಮಣ್ಣ ಬೀರಪ್ಪ ತೇರದಾಳ, ಮಧ್ಯಾಹ್ನ ಕುರಿ ಕಾಯುವ ಆಳಿನ ಜೊತೆ ನೋಡಲು ಹೋಗಿದ್ದ. ಈ ವೇಳೆ ಮೊಬೈಲ್‍ನಲ್ಲಿ …

Read More »

10 ನಗರಗಳಲ್ಲಿ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿ; ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಪ್ರಾಯೋಗಿಕವಾಗಿ ಹತ್ತು ನಗರಗಳಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಯುಗಾದಿ ದಿನವೂ ಹಿರಿಯ ಅಧಿಕಾರಿಗಳ ಜೊತೆ ತಮ್ಮ‌ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,  ಪೊಲೀಸ್ ಕಮಿಷನರ್ ಕಮಲ್ ಪಂಥ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.  ಮೊದಲು ಸಾರಿಗೆ ನೌಕರರ ಮುಷ್ಕರದ ಬಗ್ಗೆ …

Read More »

ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ

ಬೆಂಗಳೂರು: ಕಾರಿನಲ್ಲಿ ಮಗುವನ್ನು ಬಿಟ್ಟು ಯುಗಾದಿ ಹಬ್ಬದ ಶಾಪಿಂಗ್‌ಗೆ ತೆರಳಿದ ಪರಿಣಾಮ ಮಗು ಉಸಿರುಗಟ್ಟಿ ನರಳಾಡಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ. ದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದೆ. ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಶಾಪಿಂಗ್​ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು. ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು …

Read More »