ಬೆಂಗಳೂರು: ಶನಿವಾರದಿಂದ (ಏ. 10) ಇದೇ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಗೆ ಬರಲಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ- ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ. …
Read More »ಕಾಂಗ್ರೆಸ್ ಪಕ್ಷದ ಇತಿಹಾಸವೇ, ಈ ದೇಶದ ಇತಿಹಾಸ ” ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆ
ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಇವತ್ತು ಬಡಸ್ ಕೆ ಎಚ್ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರವರ ನೇತ್ರತ್ವದಲ್ಲಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆಯನ್ನು ಕೈಗೊಳ್ಳಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅವಲೋಕಿಸುವ ಮುಖೇನ ಪ್ರಚಾರಕ್ಕೆ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಸ್ಮರಿಸುತ್ತಾ ಅನೇಕ ಮಹನೀಯರು ಹಗಲು ರಾತ್ರಿಯನ್ನದೇ ದೇಶಕ್ಕಾಗಿ ದುಡಿದು ದೇಶವನ್ನು ಸುಭದ್ರವಾಗಿ …
Read More »ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್
ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ. ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.
ಬೆಂಗಳೂರು : ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ವಿಜಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದೆ. ಇಂದು ವಿಚಾರಣೆಯ ಮಾಡಿದ ನ್ಯಾಯಮೂರ್ತಿಗಳು ಜಾಮೀನು ಅರ್ಜಿಯನ್ನು ಏಪ್ರಿಲ್ 15 ಕ್ಕೆ ಮುಂದೂಡಿದ್ದಾರೆ. ಈ ಮೂಲಕ …
Read More »ಸಚಿವಾಲಯದ ಅಧಿಕಾರಿ, ನೌಕರ’ರಿಗೆ ಬಹುಮುಖ್ಯ ಮಾಹಿತಿ : ಏ.12ರಂದು ’45 ವರ್ಷ’ ಮೇಲ್ಪಟ್ಟವರಿಗೆ ‘ಬ್ಯಾಂಕ್ವೆಟ್ ಹಾಲ್’ನಲ್ಲಿ’ಕೊರೋನಾ ಲಸಿಕೆ’
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) …
Read More »ಶಾಸಕ ಯತ್ನಾಳ್ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ. ಈ ನಡುವೆ ಶಾಸಕ ಯತ್ನಾಳ್ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …
Read More »ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …
Read More »ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!
ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ
ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …
Read More »ಪಾರ್ಶ್ವವಾಯುಗೆ ತುತ್ತಾಗಿದ್ದ ವಿದ್ಯಾರ್ಥಿನಿಗೆ ಚಿನ್ನದ ಪದಕ
ದಾವಣಗೆರೆ: ಬ್ರೈನ್ ಸ್ಟ್ರೋಕ್ (ಮೆದುಳಿನ ಪಾರ್ಶ್ವವಾಯು) ಆಗಿದ್ದ ವಿದ್ಯಾರ್ಥಿನಿ ಹಾಸಿಗೆಯಲ್ಲಿ ಮಲಗಿದ್ದರೂ ಛಲ ಬಿಡದೇ ಓದಿ ಸ್ನಾತಕೋತ್ತರ ಪದವಿಯಲ್ಲಿ (ಇಂಗ್ಲಿಷ್) ಚಿನ್ನದ ಪದಕ ಪಡೆದಿದ್ದಾರೆ. ದಾವಣಗೆರೆ ವಿದ್ಯಾನಗರದ ನಿಸರ್ಗ ಕೆ.ಪಿ. ಈ ಸಾಧಕ ವಿದ್ಯಾರ್ಥಿನಿ. ಸಿವಿಲ್ ಕಂಟ್ರಾಕ್ಟರ್ ಪಂಚಾಕ್ಷರಿ-ಬಸಮ್ಮ ದಂಪತಿಯ ಮಗಳಾಗಿರುವ ನಿಸರ್ಗ ಅವರಿಗೆ 2020ರ ಏಪ್ರಿಲ್‌ನಲ್ಲಿ ಬ್ರೈನ್ ಸ್ಟ್ರೋಕ್ ಆಗಿತ್ತು. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಕಾರಣದಿಂದ ತಡವಾಗಿ ಅಂದರೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ …
Read More »
Laxmi News 24×7