Breaking News

ಜಿಲ್ಲೆ

ಗೋಕಾಕ ಆಸ್ಪತ್ರೆ ಬಳಿ ಗಲಾಟೆ: ನ್ಯಾಯವಾದಿ ಗಿಡ್ಡನವರ ಸೇರಿ ಮೂವರ ಬಂಧನ, ಹಿಂಡಲಗಾ ಜೈಲಿಗೆ ರವಾನೆ

ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …

Read More »

ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು.   ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,   ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …

Read More »

ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು

ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …

Read More »

ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್‌ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.

Read More »

ಸತೀಶಣ್ಣ ಜಾರಕಿಹೊಳಿಯವರಿಗೆ ಸಂಪೂರ್ಣ ಬೆಂಬಲ:ಜಾತ್ಯತೀತ ಜನತಾದಳಪಕ್ಷ

  ಬೆಳಗಾವಿ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಬೆಳಗಾವಿ ಪಾರ್ಲಿಮೆಂಟ್ ಚುನಾವಣೆಯ ಮರುಚುನಾವಣೆಯ ಆಗುತ್ತಿದೆ ಜಾತ್ಯತೀತ ಜನತಾದಳದ ಪಕ್ಷ ಎಲ್ಲಾ ಪದಾಧಿಕಾರಿಗಳು ಸಮಾವೇಶದಿಂದ ಪಕ್ಷ ಬಿಟ್ಟು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಸಯ್ಯದ್ ಮನಸೂರ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯ ಅಧ್ಯಕ್ಷರು 20ವರ್ಷ ಸೇವೆ ಸಲ್ಲಿಸಿದರು . ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಭದ್ರವಾಗಿ ಕಟ್ಟಬೇಕಾದರೆ ಜಿಲ್ಲಾ ಅಧ್ಯಕ್ಷರನ್ನು ಬದಲು ಮಾಡಿ ಎಂದು ಮನವಿ ಮಾಡಿದರು. ಜೆಡಿಎಸ್ …

Read More »

ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು …

Read More »

ರಮೇಶ್ ಜಾರಕಿಹೊಳಿ ನೋಡಲು ಗೋಕಾಕ ಗೆ ಬಂದ S.I.T.ಅಧಿಕಾರಿ

ಗೋಕಾಕ್​ (ಏ. 6):  ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್​ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್​ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್​ ಜಾರಕಿಹೊಳಿ ಅವರು ಎಸ್​ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ …

Read More »

ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿ ಸಾವು

ಚಿತ್ರದುರ್ಗ: ಒಂದ್ಕಡೆ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ ಆಗ್ತಿದ್ರೆ ಇತ್ತ ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಮ್ಲಜನಕ ಸಿಗದೇ ಕೋವಿಡ್ ರೋಗಿ ಮೃತಪಟ್ಟಿರುವ ದುರಂತ ನಡೆದಿದೆ. ಅಂಬುಲೆನ್ಸ್‌ನಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 65 ವರ್ಷದ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಹಿರಿಯೂರು ನಗರದ ವೇದಾವತಿ ಬಡಾವಣೆಯ ಕೋವಿಡ್ ಸೊಂಕಿತ ವೃದ್ಧೆಯನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಿಂದ ದಾವಣಗೆರೆಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ವೃದ್ದೆ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬೇಕು ಐದು ಸಾವಿರ ರೂಪಾಯಿ ಕೊಡ್ಬೇಕು …

Read More »

ಖಾಸಗಿ ವಾಹನಗಳು ವಸೂಲಿಗಿಳಿದರೆ ಕಾನೂನು ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ

ಬೆಂಗಳೂರು,ಏ.6-ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್‍ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು. …

Read More »

ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …

Read More »