ಬೆಂಗಳೂರು, ಏ.5- ಒಂದರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸಬೇಕೆಂಬ ಅಭಿಪ್ರಾಯವನ್ನು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ. ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಒಂದರಿಂದ 5ನೇ ತರಗತಿವರೆಗೆ ಆನ್‍ಲೈನ್ ಪರೀಕ್ಷೆ, 6ರಿಂದ 9ನೇ ತರಗತಿವರೆಗೆ ಈಗಾಗಲೇ ಅರ್ಧಂಬರ್ಧ ಪರೀಕ್ಷೆಗಳು ನಡೆದಿದ್ದು, ಎರಡೂ ಪಾಳಿಯಲ್ಲಾದರೂ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಮನವಿ …
Read More »ಕಾಂಗ್ರೆಸ್ ಚಿಲ್ಲರೆ ರಾಜಕಾರಣದ ಬಗ್ಗೆ ಬಿಜೆಪಿ ಬಳಿ ಸಾಕ್ಷಿ ಇದೆಯಾ : ಸಿದ್ದರಾಮಯ್ಯ
ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು. ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ …
Read More »ಡಿಕೆಶಿ, ಸಿದ್ಧರಾಮಯ್ಯ ಚಿಲ್ಲರೆ ಕೆಲಸ ಬಿಡಬೇಕು: ಜಗದೀಶ್ ಶೆಟ್ಟರ್
ಬೆಳಗಾವಿ: ಚುನಾವಣೆಯಲ್ಲಿ ಎದುರಾಳಿಗಳನ್ನ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು. ಅದು ಬಿಟ್ಟು ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಚಾರಿತ್ರ್ಯವಧೆ ಮಾಡುವ ಕೆಲಸಮಾಡಬಾರದು ಅದು ಚಿಲ್ಲರೆ ಕೆಲಸವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬೆಳಗಾವಿಯ ಲೋಕಸಭಾ ಉಪಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ಗೆ ವಹಿಸಲಾಗಿದೆ. ಅದು ತನಿಖೆ ನಡೆಯುತ್ತಿದೆ. …
Read More »ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …
Read More »ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…
ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ …
Read More »ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …
Read More »ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,
ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …
Read More »ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ: ಬಿ.ವೈ ವಿಜಯೇಂದ್ರ ಟಾಂಗ್
ರಾಯಚೂರು: ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ. ಉಸ್ತುವಾರಿ ಕೊಡುವ ಜವಾಬ್ದಾರಿ ರಾಜ್ಯಧ್ಯಕ್ಷರದ್ದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮಸ್ಕಿ ಚುನಾವಣಾ ಉಸ್ತುವಾರಿ ವಹಿಸಿರುವ ಬಿ.ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರಿದ್ದಾರೆ. ಶಾಸಕ ಯತ್ನಾಳ್ ಸಹ ಎಲ್ಲಿಗೆ ಬೇಕಾದರೂ ಹೋಗಬಹುದು. ಎಲ್ಲ ಕಡೆಯೂ ಕಾರ್ಯಕರ್ತರು ಯತ್ನಾಳ್ರನ್ನ ಸ್ವಾಗತಿಸುತ್ತಾರೆ. ಕೆ.ಆರ್ …
Read More »ಶಾಸಕ ಜಮೀರ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ
ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅಹಮ್ಮದ್ ಮನೆಯ ಪ್ರವೇಶ ದ್ವಾರದ …
Read More »ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್
ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ …
Read More »
Laxmi News 24×7