Breaking News

ಜಿಲ್ಲೆ

ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್‌ ಕುಮಾರ್‌

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್‌ ಕುಮಾರ್‌ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ. ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ …

Read More »

ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ …

Read More »

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ

ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು. “ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ …

Read More »

ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ

ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …

Read More »

ಸಿಡಿ ಪ್ರಕರಣ : ಕಾಂಗ್ರೆಸ್‍ನ ಮಾಜಿ ಶಾಸಕರಿಬ್ಬರಿಗೆ ಎಸ್‍ಐಟಿ ನೋಟೀಸ್..!

ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್‍ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …

Read More »

ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ‌ ಕಾರಿದ ಯತ್ನಾಳ

ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.   ಮಂತ್ರಿ ಆಗಲು ನಾನು ಯಾರಿಗೂ …

Read More »

ಖಾತೆ ಬದಲಾಯಿಸಿ ಎಂದು ಹೇಳಿದ ನಿರ್ಮಾಪಕ ಕೆ. ಮಂಜುಗೆ ಸಚಿವ ಸುಧಾಕರ್ ತಿರುಗೇಟು

ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಕೆ. ಮಂಜು ಅಂದ್ರೆ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಸಚಿವನಾಗಿ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮಗೆ ಜನರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಗಳು ಚಿತ್ರರಂಗದ ಮನವಿಗೆ ಸ್ಪಂದಿಸಿದ್ದು …

Read More »

ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್‌ ನೇಮಕ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್‌. ಸಾಹು ಕಾರ್‌ ಅವರನ್ನು ನೇಮಕ ಮಾಡಲಾಗಿದೆ. ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ. ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್‌ ಪದವಿ ಪಡೆದ ಬಳಿಕ …

Read More »

ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ :ಸರ್ಕಾರಿ ಆಸ್ಪತ್ರೆ ವೈದ್ಯ ಎಸಿಬಿ ಬಲೆಗೆ

ಬೆಳಗಾವಿ : ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೊಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಶನಿವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯನಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲದ ಮಹಿಳೆಯನ್ನು ಆಸ್ಪತ್ರೆಯ ಹೆರಿಗೆ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವೈದ್ಯ 7 …

Read More »

ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕ

ಬೆಳಗಾವಿ : ಮಾಜಿ ಸೈನಿಕರೊಬ್ಬರು ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಗೋಪಿನಾಥ್ ಜೋತಿರಾಮ ಜಾನವಾಡೆ (27) ಆಗಿದ್ದು, ಇವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆಎಸ್ )ನಿವಾಸಿ. ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆ ಏಕಾಏಕಿ ಬಸ್ಸಿನ ಹಿಂಬದಿಯ ಬಾಗಿಲು …

Read More »