ಬೆಳಗಾವಿ: ಚುನಾವಣೆಯಲ್ಲಿ ಎದುರಾಳಿಗಳನ್ನ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು. ಅದು ಬಿಟ್ಟು ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಚಾರಿತ್ರ್ಯವಧೆ ಮಾಡುವ ಕೆಲಸಮಾಡಬಾರದು ಅದು ಚಿಲ್ಲರೆ ಕೆಲಸವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬೆಳಗಾವಿಯ ಲೋಕಸಭಾ ಉಪಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ಗೆ ವಹಿಸಲಾಗಿದೆ. ಅದು ತನಿಖೆ ನಡೆಯುತ್ತಿದೆ. …
Read More »ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …
Read More »ಸರ್ಕಾರಿ ಆಸ್ಪತ್ರೆಯಲ್ಲೇ GP ಸದಸ್ಯನ ಲವ್ವಿ ಡವ್ವಿ.. ಸಿಸಿಟಿವಿಯಲ್ಲಿ ಸೆರೆ…
ವಿಜಯಪುರ :ಸರ್ಕಾರಿ ಆಸ್ಪತ್ರೆಯಲ್ಲೇ ಗ್ರಾಮ ಪಂಚಾಯತಿ ಸದಸ್ಯನ ಲವ್ವಿ ಡವ್ವಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ನಿಂಬೆನಾಡಿನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ಆಸ್ಪತ್ರೆಯ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ D.K. ಪೂಜಾರಿ ಲವ್ವಿ ಡವ್ವಿ ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ಮಾಡಿರುವ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದಸ್ಯ ವಿರುದ್ಧ …
Read More »ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …
Read More »ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,
ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …
Read More »ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ: ಬಿ.ವೈ ವಿಜಯೇಂದ್ರ ಟಾಂಗ್
ರಾಯಚೂರು: ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ. ಉಸ್ತುವಾರಿ ಕೊಡುವ ಜವಾಬ್ದಾರಿ ರಾಜ್ಯಧ್ಯಕ್ಷರದ್ದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮಸ್ಕಿ ಚುನಾವಣಾ ಉಸ್ತುವಾರಿ ವಹಿಸಿರುವ ಬಿ.ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರಿದ್ದಾರೆ. ಶಾಸಕ ಯತ್ನಾಳ್ ಸಹ ಎಲ್ಲಿಗೆ ಬೇಕಾದರೂ ಹೋಗಬಹುದು. ಎಲ್ಲ ಕಡೆಯೂ ಕಾರ್ಯಕರ್ತರು ಯತ್ನಾಳ್ರನ್ನ ಸ್ವಾಗತಿಸುತ್ತಾರೆ. ಕೆ.ಆರ್ …
Read More »ಶಾಸಕ ಜಮೀರ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ
ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅಹಮ್ಮದ್ ಮನೆಯ ಪ್ರವೇಶ ದ್ವಾರದ …
Read More »ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್
ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ …
Read More »ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್ ಕುಮಾರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ. ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ …
Read More »ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ …
Read More »
Laxmi News 24×7