ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಯಳ್ಳೂರ ಧಾಮನೆ, ಮಚ್ಚೆ, ಪೀರಣವಾಡಿ,ಮಜಗಾಂವ ಸೇರಿದಂತೆ ವಿವಿಧ ನಗರ ಬಡಾವಣೆಗಳಲ್ಲಿ ಇಂದು ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೆ ಸಂದರ್ಭದಲ್ಲಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೋಳಿ ರಾಯಣ್ಣ ಪ್ರತಿಮೆಗಳಿಗೆ ಹೂವು ಮಾಲೆ ಹಾಕಿ ಗೌರವಿಸಲಾಯಿತು ಮತ್ತು ಪೀರಣವಾಡಿ ದರ್ಗಾಗೆ ಭೆಟ್ಟಿ ನೀಡಿ ದರ್ಶನ ಪಡೆಯಲಾಯಿತು. “ಕೇವಲ ಮಾತನಾಡುವುದರಿಂದ ರಾಮರಾಜ್ಯ ನಿರ್ಮಾಣವಾಗುವುದಿಲ್ಲ. ಪ್ರತಿ ಹಳ್ಳಿಗಳ ಅಭಿವೃದ್ಧಿಯಾದಾಗ ಮಾತ್ರ ರಾಮರಾಜ್ಯ ನಿರ್ಮಾಣವಾಗಲು ಸಾಧ್ಯ. ಸಂಸದರು ಪ್ರತಿ …
Read More »ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ
ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ …
Read More »ಸಿಡಿ ಪ್ರಕರಣ : ಕಾಂಗ್ರೆಸ್‍ನ ಮಾಜಿ ಶಾಸಕರಿಬ್ಬರಿಗೆ ಎಸ್‍ಐಟಿ ನೋಟೀಸ್..!
ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್‍ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …
Read More »ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ ಕಾರಿದ ಯತ್ನಾಳ
ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿ ಆಗಲು ನಾನು ಯಾರಿಗೂ …
Read More »ಖಾತೆ ಬದಲಾಯಿಸಿ ಎಂದು ಹೇಳಿದ ನಿರ್ಮಾಪಕ ಕೆ. ಮಂಜುಗೆ ಸಚಿವ ಸುಧಾಕರ್ ತಿರುಗೇಟು
ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಕೆ. ಮಂಜು ಅಂದ್ರೆ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಸಚಿವನಾಗಿ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮಗೆ ಜನರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಗಳು ಚಿತ್ರರಂಗದ ಮನವಿಗೆ ಸ್ಪಂದಿಸಿದ್ದು …
Read More »ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ನೇಮಕ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್. ಸಾಹು ಕಾರ್ ಅವರನ್ನು ನೇಮಕ ಮಾಡಲಾಗಿದೆ. ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ. ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ …
Read More »ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ :ಸರ್ಕಾರಿ ಆಸ್ಪತ್ರೆ ವೈದ್ಯ ಎಸಿಬಿ ಬಲೆಗೆ
ಬೆಳಗಾವಿ : ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೊಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಶನಿವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯನಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲದ ಮಹಿಳೆಯನ್ನು ಆಸ್ಪತ್ರೆಯ ಹೆರಿಗೆ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವೈದ್ಯ 7 …
Read More »ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕ
ಬೆಳಗಾವಿ : ಮಾಜಿ ಸೈನಿಕರೊಬ್ಬರು ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಗೋಪಿನಾಥ್ ಜೋತಿರಾಮ ಜಾನವಾಡೆ (27) ಆಗಿದ್ದು, ಇವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆಎಸ್ )ನಿವಾಸಿ. ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆ ಏಕಾಏಕಿ ಬಸ್ಸಿನ ಹಿಂಬದಿಯ ಬಾಗಿಲು …
Read More »ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ.. ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …
Read More »ಬೆಳಗಾವಿ ಉಪ ಚುನಾವಣೆ: ನಾಮಪತ್ರ ವಾಪಸ್; ಬಿಜೆಪಿಗೆ ಸಿಹಿ ಸುದ್ದಿ!
ಬೆಳಗಾವಿ, ಏಪ್ರಿಲ್ 3: ಏಪ್ರಿಲ್ 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷಕ್ಕೆ ತುಸು ನೆಮ್ಮದಿ ನೀಡುವ ಸುದ್ದಿ ಸಿಕ್ಕಿದೆ. ದಿ.ಸುರೇಶ್ ಅಂಗಡಿ ಅವರ ಸಾವಿನಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸುತ್ತಿರುವುದು ಕ್ಷೇತ್ರದಲ್ಲಿ ಇನ್ನಷ್ಟು ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಸ್ಪರ್ಧಿಸಿರುವ …
Read More »
Laxmi News 24×7