Breaking News

ಜಿಲ್ಲೆ

ಬೆಳಗಾವಿ ಉಪಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ

: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗ ಇಂದು ಅಧಿಸೂಚನೆ ಪ್ರಕಟಿಸಿದೆ. ಅಭ್ಯರ್ಥಿಗಳು ಇಂದಿನಿಂದ ನಾಮಪತ್ರಗಳನ್ನು ಸಲ್ಲಿಕೆ ಮಾಡಬಹುದು. ಮಾರ್ಚ್ 23ರ ಮಂಗಳವಾರದಿಂದ ಮಾರ್ಚ್ 30ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾ.31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಅಂತಿಮ ದಿನ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತಗಳ ಎಣಿಕೆ ನಡೆಯಲಿದೆ.   ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ …

Read More »

ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಾಜಿನಾಮೆ ಸಲ್ಲಿಸಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಅವರ ಸಹೋದರ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ತನಿಖೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್‌ ಜಾರಕಿಹೊಳಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಕುರಿತಂತೆ ಎಸ್‌ ಐ …

Read More »

ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ: ಸರಕಾರ ಸ್ಪಷ್ಟನೆ

ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್‌ ಕುಮಾರ್‌ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ …

Read More »

ಸಿ.ಡಿ. ಪ್ರಕರಣ: ನ್ಯಾಯಾಂಗ ತನಿಖೆಗೆ ಪಟ್ಟು, 6 ಸಚಿವರ ರಾಜೀನಾಮೆಗೂ ಕೈ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಇದ್ದಾರೆ ಎನ್ನಲಾದ ಅಶ್ಲೀಲ ಸಿ.ಡಿ. ಪ್ರಕರಣ ವಿಧಾನಸಭೆಯಲ್ಲಿ ಸೋಮವಾರ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ಸದಸ್ಯರ ನಡುವೆ ಭಾರೀ ವಾಗ್ವಾದಕ್ಕೆ ಕಾರಣವಾಯಿತು. ಸುಮಾರು 4 ತಾಸುಗಳ ಕಾಲ ಚರ್ಚೆ ನಡೆದು, ಸರಕಾರದ ಉತ್ತರದಿಂದ ತೃಪ್ತರಾಗದ ಕಾಂಗ್ರೆಸ್‌ ಸದಸ್ಯರು ಆರು ಮಂದಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸಿ.ಡಿ. ಪ್ರಕರಣದ ಕುರಿತು ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ …

Read More »

ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು: ರಮೇಶ್ ಕುಮಾರ್

ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಎಂದು ರಮೇಶ್ ಕುಮಾರ್ ಪರೋಕ್ಷವಾಗಿ ಸಚಿವ ಸುಧಾಕರ್ ಗೆ ಟಾಂಗ್ ನೀಡಿದರು. ಸಿಡಿ ಚರ್ಚೆ ವೇಳೆ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಅಥವಾ ಹಿತೈಷಿಗಳು ಎಂದು ನಟಿಸಿ ನಿಮ್ಮನ್ನು ಮುಗಿಸಲು ಮಾಡಿದ ಸಂಚು ಎಂದು ಆರೋಪಿಸಿದರು. ಕೋರ್ಟ್ ಗೆ ಹೋಗಿದ್ದನ್ನು ಸಮಾಜ ಏನು ತಿಳಿದುಕೊಳ್ಳುತ್ತದೆ, …

Read More »

ಪಕ್ಷಕ್ಕೆ ಮುಜುಗರ; ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್​ಗೆ ಲಿಖಿತ ದೂರು ನೀಡಲು ಬಿಜೆಪಿ ಶಾಸಕರ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಜೊತೆ 40 ಶಾಸಕರು ಇಂದು (ಮಾರ್ಚ್ 22) ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ 6-7 ಸಚಿವರ ಕಾರ್ಯವೈಖರಿ ಬಗ್ಗೆ ದೂರು ನೀಡಿದ್ದಾರೆ. ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಶಾಸಕರ ಜತೆ ಮಾತುಕತೆಯಲ್ಲಿ ಮಾರ್ಚ್ 25ರಂದು ಮತ್ತೊಮ್ಮೆ ಸಭೆ ನಡೆಸುವುದಾಗಿ ಭರವಸೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಜೊತೆ ನಡೆದ ಸಭೆಯಲ್ಲಿ ಮುಖ್ಯವಾಗಿ, ಪಕ್ಷಕ್ಕೆ ಮುಜುಗರ ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿಕೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …

Read More »

ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ.   ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …

Read More »

ಬೆಳಗಾವಿ ಲೋಕಸಭಾ ಉಪ ಚುನಾವಣೆ ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು:

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ  ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಮಾ.22) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. ಏಪ್ರಿಲ್ 17, 2021 ರಂದು ಮತದಾನ ನಡೆಯಲಿದ್ದು, …

Read More »

ಸಿಇಟಿ, ನೀಟ್‌ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ ಕೋಚಿಂಗ್ : ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ CM ಯಡಿಯೂರಪ್ಪ ಚಾಲನೆ

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್‌ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್‌ ನೀಡಲಾಗುವ ʼಗೆಟ್‌-ಸೆಟ್‌ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್‌-ಸೆಟ್‌ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; ‘ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್‌ …

Read More »