ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. …
Read More »ಬಿಗ್ ಬಾಸ್ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್ ಆಗಿ ತಬ್ಬಿಕೊಳ್ಳುವ ಪ್ರಶಾಂತ್ ಸಂಬರಗಿಗೆ ಸುದೀಪ್ ಖಡಕ್ ವಾರ್ನಿಂಗ್
ಬಿಗ್ ಬಾಸ್ ಮನೆ ಸೇರಿರುವ ಪ್ರಶಾಂತ್ ಸಂಬರಗಿ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್ ಆಗಿ ಹಗ್ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್ಗೆ ಸುದೀಪ್ ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ. ವೈರಸ್ …
Read More »ಕುತೂಹಲ ಕೆರಳಿಸಿದೆ ಸಿಎಂ ಸಭೆ
ಬೆಂಗಳೂರು,ಮಾ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವರ ಸಭೆ ಕರೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇದು ಒಂದು ಅನೌಪಚಾರಿಕ ಸಭೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ವಿದ್ಯಮಾನಗಳ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ …
Read More »BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ …
Read More »ಐಎಂಎ ಪ್ರಕರಣ: ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇದೀಗ ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಐಎಂಎ ನಿರ್ದೇಶಕರು ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. 5 ಕೋಟಿ ರೂ ಲಂಚ ಪಡೆದಿದ್ದ ಅಧಿಕಾರಿಗಳು ಹಗರಣದಲ್ಲಿ ಪಿ.ಡಿ.ಕುಮಾರ್ ಪಾತ್ರದ …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ
ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ. ವಿಜಯಪುರಕ್ಕೆ ತೆರಳಿದ ಟೀಂ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ. ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ …
Read More »ಸಮಯ ಪ್ರಜ್ಞೆ ಮೆರೆದ ಮಹಿಳೆ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ATM ಕಳ್
ಸಂತಾಪ ಸೂಚನೆಗಾಗಿ ಸಂಬಂಧಿಕರನ್ನ ಭೇಟಿಯಾಗಲು ಬಂದಿದ್ದ 45 ವರ್ಷದ ಮಹಿಳೆಯೊಬ್ಬರು ಎಟಿಎಂನಲ್ಲಿ ನಡೆಯುತ್ತಿದ್ದ ಕಳ್ಳತನವನ್ನ ತಪ್ಪಿಸಿದ ಘಟನೆ ಮಹಾರಾಷ್ಟ್ರದ ವಸೈನಲ್ಲಿ ನಡೆದಿದೆ. ಕಳ್ಳ ಎಟಿಎಂ ಕೇಂದ್ರದ ಒಳಗೆ ನುಗ್ಗಿದ್ದನ್ನ ಕಂಡ ಸುಕನ್ಯಾ ಪವಾರ್, ಕೂಡಲೇ ಶಟರ್ ಎಳೆದು ಬಳಿಕ ನೆರೆಹೊರೆಯವರನ್ನ ಎಚ್ಚರಿಸಿದ್ದಾರೆ. ಸಂಬಂಧಿಕರೊಬ್ಬರು ನಿಧನರಾದ ಹಿನ್ನೆಲೆ ಸಂತಾಪ ಸೂಚಿಸಲು ಸುಕನ್ಯಾ ವಸೈಗೆ ಆಗಮಿಸಿದ್ದರು. ಮುಂಜಾನೆ 2.30ರ ಸುಮಾರಿಗೆ ಧಾರ್ಮಿಕ ಗ್ರಂಥವನ್ನ ಪಠಿಸುತ್ತಾ ಕುಳಿತಿದ್ದ ವೇಳೆ ಸುಕನ್ಯಾಗೆ ಎಟಿಎಂ ಕೇಂದ್ರದ ಬಳಿ …
Read More »ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.
ಬೆಳಗಾವಿ-ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …
Read More »ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ
ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
Read More »ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ.: ಬಾಲಚಂದ್ರ ಜಾರಕಿಹೊಳಿ,
ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು …
Read More »
Laxmi News 24×7