ಬೆಂಗಳೂರು, : ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನವು ಮಾ.4 ರಿಂದ 31ರವರೆಗೆ ನಡೆಯಲಿದ್ದು, ಮಾ.8ರಂದು ಮುಖ್ಯಮಂತ್ರಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಜಾ ದಿನಗಳನ್ನು ಹೊರತುಪಡಿಸಿ ಒಟ್ಟಾರೆ 19 ದಿನಗಳು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಮಂಡಿಸುವ ಸಲುವಾಗಿ ಒಟ್ಟು 496 ಪ್ರಶ್ನೆಗಳು ಬಂದಿವೆ. 45 ಚುಕ್ಕೆ ಗುರುತಿನ ಪ್ರಶ್ನೆಗಳು, 265 …
Read More »ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …
Read More »ಬೆಳಗಾವಿ ಝೂದಲ್ಲಿ ಸಿಂಹ ,ಶೀಘ್ರವೇ ಮೃಗಾಲಯದಲ್ಲಿ ಹುಲಿ ಸಫಾರಿ : ಸತೀಶ್ ಜಾರಕಿಹೊಳಿ
ಬೆಳಗಾವಿ – : ರಾಣಿ ಚನ್ನಮ್ಮ ಕಿರು ಮೃಗಾಲಯ ಉತ್ತರ ಕರ್ನಾಟಕದ ಹೆಮ್ಮೆಯಾಗಿದೆ. ಅದರ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಯಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಮಂಗಳವಾರ (ಮಾ.೦೨) ಭೇಟಿ ನೀಡಿ ಮಾಧ್ಯಮಗೋಷ್ಠಿ ನಡೆಸಿದರು. ಈಗಾಗಲೇ ಮೃಗಾಲಯಕ್ಕೆ 3 ಸಿಂಹಗಳು ಆಗಮಿಸಿವೆ. ಮುಂಬರುವ ದಿನಗಳಲ್ಲಿ ಹುಲಿ,ಚಿರತೆ, ಕರಡಿ ಮುಂತಾದ ಪ್ರಾಣಿಗಳನ್ನು ಕರೆತರುವ ಯೋಜನೆ ಇದ್ದು, ಅವುಗಳಿಗೆ …
Read More »ಯಾರಿಗೆ ಎಲ್ಲಿ ಅನುಕೂಲವಾಗುತ್ತೋ ಅಲ್ಲಿ ಲಸಿಕೆ ಹಾಕಿಸಿಕೊಳ್ಳಲಿ: ಸಿಎಂ ಯಡಿಯೂರಪ್ಪ
ಬೆಂಗಳೂರು: ಕೊರೊನಾ ಮೂರನೇ ಹಂತದ ಲಸಿಕೆ ನೀಡಿಕೆ ಆರಂಭವಾಗಿದೆ. ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಹೀಗಾಗಿ ಯಾರು ಯಾರು ಎಲ್ಲೆಲ್ಲಿ ಅನುಕೂಲ ಆಗುತ್ತೋ ಅಲ್ಲಿ ಲಸಿಕೆ ಪಡೆದುಕೊಳ್ಳಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ ನಾನೂ ಕೂಡ ಲಸಿಕೆ ಹಾಕಿಸಿಕೊಳ್ಳಲಿದ್ದೇನೆ. ಮನೇಲಿ ಹಾಕಿಸಿಕೊಳ್ಳಬೇಕಾ ಅಥವಾ ಆಸ್ಪತ್ರೆಯಲ್ಲಿ ಹಾಕಿಸಿಕೊಳ್ಳಬೇಕಾ ಎಂದು ನೋಡುತ್ತೇನೆ ಎಂದರು. ಇದೇ ವೇಳೆ ನಾನು ರಾಘವೇಂದ್ರ ಸ್ವಾಮಿಗಳ ಭಕ್ತ. ಹಾಗಾಗಿಯೇ …
Read More »ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದಾದ ಬಳಿಕ ಅವರು ಟೀ ಶರ್ಟ್ ಧರಿಸಿ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋ ಕೂಡ ಸುದ್ದಿ ಮಾಡಿತ್ತು. ಇದೀಗ ರಾಹುಲ್ ಗಾಂಧಿಯ ಮತ್ತೊಂದು ವಿಡಿಯೋ ಸಾಕಷ್ಟು ಸುದ್ದಿಯಲ್ಲಿದೆ. ಇದರಲ್ಲಿ ತಮಿಳುನಾಡಿನ ಮುಲ್ಗಮುಡುಬನ್ನ ಸೇಂಟ್ ಜೋಸೆಫ್ ಮ್ಯಾಟ್ರಿಕ್ ಶಾಲೆಯ …
Read More »ಬೆಂಗಳೂರಲ್ಲಿಂದು ಅಂಗನವಾಡಿ, ಸಾರಿಗೆ ಹಾಗೂ ಕಾಂಗ್ರೆಸ್ ಪ್ರತಿಭಟನೆಗಳ ಅಬ್ಬರ
ಬೆಂಗಳೂರು,ಮಾ.2- ದಿನೇ ದಿನೇ ಹೆಚ್ಚಾಗುತ್ತಿರುವ ದಿನಸಿ ಪದಾರ್ಥಗಳ ದರ, ತೈಲ ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿದರೆ ಸಾರಿಗೆ ನೌಕರರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದವರು ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ತಮ್ಮ 9 ಬೇಡಿಕೆಗಳನ್ನು …
Read More »ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನ ಉದ್ಧಟತನ – ಇನ್ಸ್ ಪೆಕ್ಟರ್ ಅಮಾನತು
ಮಂಡ್ಯ: ಕೆ.ಆರ್.ಎಸ್. ಡ್ಯಾಂ ಮೇಲೆ ಯುವಕನಿಗೆ ಪೊಲೀಸ್ ವಾಹನ ಚಲಾಯಿಸಲು ಅವಕಾಶ ನೀಡಿದ ಭದ್ರತಾ ವಿಭಾಗದ ಇನ್ಸ್ ಪೆಕ್ಟರ್ ರನ್ನು ಅಮಾನತು ಮಾಡಲಾಗಿದೆ. ಕೆ.ಆರ್.ಎಸ್. ಡ್ಯಾಂ ಮೇಲೆ ಸಾರ್ವಜನಿಕರಿಗೆ ನಿಷೇಧವಿದ್ದು, ನಿರ್ಬಂಧವಿದ್ದಾಗ್ಯೂ ಕೂಡ ಪೊಲಿಸರಿಂದಲೇ ನಿಯಮ ಉಲ್ಲಂಘನೆಯಾಗಿದೆ. ಭದ್ರತೆ ನೋಡಿಕೊಳ್ಳಬೇಕಿದ್ದ ಇನ್ಸ್ ಪೆಕ್ಟರ್ ಎಸ್.ಬಿ.ಸ್ವಾಮಿ ಯುವಕನ ಮೋಜು ಮಸ್ತಿಗಾಗಿ ಡ್ಯಾಂ ಮೇಲೆ ವಾಹನ ಚಲಾಯಿಸಲು ಪೊಲೀಸ್ ವಾಹನವನ್ನೇ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸ್ ನಡೆಗೆ …
Read More »ಒಕ್ಕಲಿಗರ ಮೀಸಲಾತಿಗಾಗಿ ಬೀದಿಗಿಳಿದು ಹೋರಾಡಲ್ಲ : ನಿರ್ಮಲಾನಂದನಾಥ ಶ್ರೀ
ಬೆಂಗಳೂರು,ಮಾ.2- ನಮ್ಮ ಸಮುದಾಯದ ಬಡವರ ಅಭಿವೃದ್ಧಿಗಾಗಿ ಮೀಸಲಾತಿ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಹೊರತು ಬೀದಿಗಿಳಿದು ಹೋರಾಟ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಕುವೆಂಪು ಸಭಾಂಗಣದಲ್ಲಿ ಒಕ್ಕಲಿಗರ ಮೀಸಲಾತಿ-ಸಮುದಾಯದ ಜೀವಶಕ್ತಿ ಕುರಿತು ನಡೆದ ಬೃಹತ್ ಸಭೆಯಲ್ಲಿ ಶ್ರೀಗಳು ಮಾತನಾಡಿದರು. ನಮ್ಮದು ಸುಸಂಸ್ಕøತ ಮತ್ತು ನಾಗರಿಕ ಪ್ರಜ್ಞೆ ಇರುವ ಸಮುದಾಯ. ಬೀದಿಗಿಳಿದು …
Read More »15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …
Read More »ಸಿಇಟಿಗೆ ಪಠ್ಯಕಡಿತ, ನೀಟ್‌ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಂಜಿನಿಯರಿಂಗ್, ಕೃಷಿ ವಿಜ್ಞಾನ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶೇ.70ರಷ್ಟು ಪಠ್ಯಕ್ರಮದ ಆಧಾರದಲ್ಲೇ ನಡೆಯಲಿದೆ. ಆದರೆ ನೀಟ್ ಬರೆದು ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳಿಗೆ ಸೇರಬೇಕೆಂದಿರುವ ವಿದ್ಯಾರ್ಥಿಗಳು ಶತ ಪ್ರತಿಶತ ಪಠ್ಯವನ್ನು ಅಧ್ಯಯನ ಮಾಡಬೇಕಾಗಿದೆ. ರಾಜ್ಯ ಸರಕಾರ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ಪಿಯುಸಿಗೆ ಶೇ. 30ರಷ್ಟು ಪಠ್ಯ ಕಡಿತ ಮಾಡಿದ್ದರೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತೆ …
Read More »
Laxmi News 24×7