Breaking News

ಜಿಲ್ಲೆ

ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು

ಬೆಳಗಾವಿ: ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣವನ್ನು ಭೇದಿಸಿರುವ ಯಮಕನಮರಡಿ ಪೊಲೀಸರು ಮೂವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗೋಕಾಕ್ ನ ಅರಬಾವಿ ಗ್ರಾಮದ ಸಂತೋಷ್ ಗಂಗಾರಾಮ ವಡ್ಡರ, ವಿಶಾಲ ನರಸಿಂಗ ಹಾಗೂ ಚಿನ್ನದ ವ್ಯಾಪಾರಿ ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 18,59,776/-ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಲಾಗಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯ ಕಿತ್ತೂರು ಠಾಣೆ ವ್ಯಾಪ್ತಿಯ 13 ಮನೆ, ಮಾರಿಹಾಳ ಠಾಣಾ ವ್ಯಾಪ್ತಿಯ 2 …

Read More »

ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಶುಕ್ರವಾರ (ಫೆ.26) ದಂದು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಿಗೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಮಾರ್ಚ್ 27ರಿಂದ ಏ.29ರವರೆಗೆ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ ಬಹು ನಿರೀಕ್ಷಿತ ರಾಜ್ಯದ ಉಪಚುನಾವಣೆಯ ದಿನಾಂಕ ಮಾತ್ರ ನಿಗದಿಯಾಗಿಲ್ಲ. ವಿಜಯಪುರ ಜಿಲ್ಲೆಯ ಸಿಂದಗಿ, ಬೀದರ್ ಜಿಲ್ಲೆಯ ಬಸವ ಕಲ್ಯಾಣ, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ …

Read More »

ಸೋಯಾಅವರೆ ಪ್ರದೇಶ ವಿಸ್ತರಣೆಗೆ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಸಲಹೆ

ಬೆಳಗಾವಿ: ‘ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಂಕಲ್ಪದಂತೆ ಸ್ಥಾಪನೆಯಾಗಿರುವ ಕೃಷಿ ವಿಜ್ಞಾನ ಕೇಂದ್ರವು ನೂತನ ಕೃಷಿ ತಂತ್ರಜ್ಞಾನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸುವ ಮೂಲಕ ಕೃಷಿಕರಿಗೆ ನೆರವಾಗುತ್ತಿದೆ’ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಿ.ಆರ್. ಪಾಟೀಲ ಹೇಳಿದರು. ಬಾಗಲಕೋಟೆ ರಸ್ತೆಯಲ್ಲಿರುವ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ ಹಾಗೂ ಇಂದೋರ್‌ನ ಐಸಿಎಆರ್-ಭಾರತೀಯ ಸೋಯಾಅವರೆ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಕೊರವಿಕೊಪ್ಪದ ಈಶ್ವರ ನಾ. ಏಣಗಿ ಅವರ ಜಮೀನಿನಲ್ಲಿ ಈಚೆಗೆ …

Read More »

ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿ

ಬೆಂಗಳೂರು,ಫೆ.27- ವಿಧಾನಪರಿಷತ್ ಸಚಿವಾಲಯದ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಡಿ-ದರ್ಜೆ ನೌಕರರಿಗೆ ಡ್ರೆಸ್ ಕೋಡ್ ಜಾರಿಗೊಳಿಸಲಾಗಿದೆ. ಡಿ-ದರ್ಜೆಯ ಪುರುಷ ನೌಕರರಿಗೆ ಬಿಳಿ ಬಣ್ಣದ ಡ್ರೆಸ್‍ಡಿ-ದರ್ಜೆಯ ಮಹಿಳಾ ನೌಕರರಿಗೆ ಮೆರೂನ್ ಡ್ರೆಸ್‍ಧರಿಸುವಂತೆ ಸೂಚನೆ ನೀಡಲಾಗಿದೆ. ಡಿ ದರ್ಜೆಯ ನೌಕರರು ಸೂಚಿಸಿದ ಸಮವಸ್ತ್ರಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದ್ದು, ಚಾಲಕರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಪರಿಷತ್ ಅೀನ ಕಾರ್ಯದರ್ಶಿ ಎಸ್.ಜಯಂತಿ ಡ್ರೆಸ್ ಕೋಡ್ …

Read More »

ಹುಟ್ಟುಬ್ಬದ ಸಂಭ್ರಮದಲ್ಲಿರುವ ‘ರಾಜಾಹುಲಿ’ಯನ್ನು ಕೊಂಡಾಡಿದ ಮೋದಿ, ಷಾ

ಬೆಂಗಳೂರು, ಫೆ.27 (ಪಿಟಿಐ)- ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 78ನೇ ವರ್ಷಕ್ಕೆ ಕಾಲಿಡುತ್ತಿರುವುದನ್ನು ಸ್ವಾಗತಿಸಿ, ಜನ್ಮದಿನದ ಶುಭಾಶಯವನ್ನು ಕೋರಿದರು. ಶನಿವಾರ ಟ್ವೀಟರ್‍ನಲ್ಲಿ ಪ್ರಧಾನಿ ಅವರು, ಕರ್ನಾಟಕ ಸಿಎಂ-ಬಿಎಸ್‍ವೈಬಿಜೆಪಿ ಜೀ ಅವರ ಜನ್ಮದಿನದಂದು ಶುಭಾಶಯ. ಯಡಿಯೂರಪ್ಪ ಅವರು ನಮ್ಮ ಒಬ್ಬ ಅನುಭವಿ ನಾಯಕರಲ್ಲೊಬ್ಬರು, ಬಡವರ ಏಳಿಗೆ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟವರು. …

Read More »

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಫೆಬ್ರವರಿ 28 ರ ವರೆಗೆ ಕಳೆದ ಶೈಕ್ಷಣಿಕ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್ ಹಾಗೂ …

Read More »

ಯುಪಿಎಸ್‌ಸಿ ಮಾದರಿಯಲ್ಲಿಯೇ ಕೆಪಿಎಸ್‌ಸಿ ಪರೀಕ್ಷೆ!

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆಗಳ ಮಾದರಿಯ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ! ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣಕ್ಕೆ ಮುಂದೂಡಲಾಗಿದ್ದು, ಭಾನುವಾರ (ಫೆ. 28) ನಡೆಯಲಿದೆ. 1,253 ಎಫ್‌ಡಿಎ ಹುದ್ದೆಗಳಿಗೆ 3.74 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಪರೀಕ್ಷೆ …

Read More »

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …

Read More »

ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ     ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.

Read More »

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …

Read More »