ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …
Read More »ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ
ಚಿಕ್ಕೋಡಿ: ಗ್ರಾಹಕ-ವರ್ತಕರ ನಡುವೆ ಮುಕ್ತ ವ್ಯಾಪಾರ ಕಲ್ಪಿಸಿದಾಗಲೇ ಎಪಿಎಂಸಿ ಬಲ ಕುಗ್ಗಿ ಹೋಗಿತ್ತು. ಈಗ ಹೊಸ ಕಾಯ್ದೆಯಿಂದ ಎಪಿಎಂಸಿಗಳು ಮತ್ತಷ್ಟು ಆರ್ಥಿಕವಾಗಿ ನೆಲ ಕಚ್ಚಿದ್ದು, ಬರುವ ಆದಾಯದಲ್ಲಿ ಗಣನೀಯ ಇಳಿಕೆ ಕಂಡು ಚೇತರಿಸಿಕೊಳ್ಳಲಾಗದ ಸ್ಥಿತಿ ಎಪಿಎಂಸಿಗೆ ಬಂದಿದೆ. ಹೌದು. ಕರ್ನಾಟಕ-ಮಹಾರಾಷ್ಟ್ರದ ಗಡಿಭಾಗಕ್ಕೆ ಹೊಂದಿಕೊಂಡಿರುವ ನಿಪ್ಪಾಣಿ ಕೃಷಿ ಉತ್ಪನ್ನ ಮಾರುಕಟ್ಟೆ ಯಲ್ಲಿ ವ್ಯಾಪಾರು-ವಹಿವಾಟು ಇಲ್ಲವೇ ಇಲ್ಲ. ಕೇವಲ ವಾಣಿಜ್ಯ ಮಳಿಗೆಯಿಂದ ಬರುತ್ತಿದ್ದ 20ರಿಂದ 25 ಲಕ್ಷ ರೂ. ವರಮಾನ ಈ ವರ್ಷ …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »ಪೊಗರು’ ವಿವಾದಕ್ಕೆ ತೆರೆ: ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದ ನಿರ್ದೇಶಕ ನಂದ ಕಿಶೋರ್
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಹೋರಾಟ ನಡೆಸುವುದಾಗಿಯೂ ಬ್ರಾಹ್ಮಣ ಸಮುದಾಯದ ಸಂಘದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನಿಡಿದ್ದರು. ಇದರ ಬೆನ್ನಲ್ಲೇ ಇದೀಗ ವಿವಾದಕ್ಕೆ ತೆರೆಯೆಳೆಯುವ ಯತ್ನ ನಡೆದಿದೆ. ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದ ಕಿಶೋರ್, ಯಾವುದೇ ಸಮುದಾಯಕ್ಕೆ ನೋವುಂಟು ಮಾಡಲು ಸೀನ್ ಮಾಡಿಲ್ಲ. ಬ್ರಾಹ್ಮಣರಿಗೆ …
Read More »ಮೀಟರ್ ದರ ಏರಿಸುವಂತೆ ಆಟೋ ಚಾಲಕರ ಪ್ರತಿಭಟನೆ
ಬೆಂಗಳೂರು, ಫೆ.23- ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲಾ ಬೆಲೆಗಳು ಹೆಚ್ಚುತ್ತಿವೆ. ಅದಕ್ಕೆ ಅನುಗುಣವಾಗಿ ಆಟೋ ಮೀಟರ್ ದರವನ್ನು ಏರಿಕೆ ಮಾಡುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದ ಆಟೋರಿಕ್ಷಾ ಯೂನಿಯನ್ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಂಟು ವರ್ಷಗಳ ಹಿಂದೆ 2013ರಲ್ಲಿ ಆಟೋ ಮೀಟರ್ ದರ ಪರಿಷ್ಕರಣೆಯಾಗಿದೆ. ಅಲ್ಲಿಂದ ಈವರೆಗೂ ದರ ಇದ್ದಷ್ಟೇ ಇದೆ. ಗ್ಯಾಸ್, ಪೆಟ್ರೋಲ್, ಅಡುಗೆ ಎಣ್ಣೆ, …
Read More »ಮುರುಗೇಶ್ ನಿರಾಣಿಗೆ ಅಮಿತ್ ಶಾ ದಿಢೀರ್ ಬುಲಾವ್
ಬೆಂಗಳೂರು: ರಾಜ್ಯ ಗಣಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಲ್ಲಿಗೆ ಕರೆಸಿದ್ದು, ನಿರಾಣಿ ತನ್ನ ಮೈಸೂರು ಪ್ರವಾಸವನ್ನು ಮೊಟಕುಗೊಳಿಸಿ ದಿಲ್ಲಿಗೆ ದೌಡಾಯಿಸಿದ್ದಾರೆ. ಮುರುಗೇಶ್ ನಿರಾಣಿ ಅವರು ಅವರು ಇಂದು ಮೈಸೂರು ಪ್ರವಾಸದ ಯೋಜನೆ ಮಾಡಿಕೊಂಡಿದ್ದರು. ಆದರೆ ಅಮಿತ್ ಶಾ ಕರೆಯ ಬೆನ್ನಲ್ಲೇ ಪ್ರವಾಸ ಮೊಟಕುಗೊಳಿಸಿ ದಿಲ್ಲಿ ವಿಮಾನ ಏರಿದ್ದಾರೆ. ಮೈಸೂರು ಪ್ರವಾಸ ಮುಗಿಸಿ ಸಂಜೆ ದಿಲ್ಲಿಗೆ ಬರುತ್ತೇನೆ ಎಂದು ನಿರಾಣಿ ಹೇಳಿದರೂ …
Read More »ಆರ್ಥಿಕ ಮಾನದಂಡದ ಮೇಲೆ ಮೀಸಲಾತಿ ನಿರ್ಧರಿಸಿ : ಹೊರಟ್ಟಿ
ಬೆಂಗಳೂರು,ಫೆ.23- ಯಾವುದೇ ಸಮುದಾಯಕ್ಕೆ ಮೀಸಲಾತಿ ಸಿಗುವುದಾದರೆ ಅರ್ಥಿಕ ಮಾನದಂಡದ ಮೇಲೆ ನಿರ್ಧಾರವಾಗಬೇಕೆಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲೇ 1.36 ಕೋಟಿ ಬಡತನರೇಖೆಗಿಂತ ಕೆಳಗಿರುವ ಬಡವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಇದರಲ್ಲಿ ಎಷ್ಟು ಮಂದಿ ಬಡವರಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಆರ್ಥಿಕ ವ್ಯವಸ್ಥೆ ನೋಡಿಕೊಂಡು ಮೀಸಲಾತಿ ನೀಡುವುದು ಸೂಕ್ತ ಎಂದು ಸಲಹೆ ಮಾಡಿದರು. ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ಮೀಸಲಾತಿಗಾಗಿ ಹೋರಾಟಗಳು …
Read More »ಬಜೆಟ್ ಅಧಿವೇಶನ ಮಾರ್ಚ್ 4ರಿಂದ ವಿಧಾನಸಭೆಯಲ್ಲಿ ಆರಂಭ
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿರುವರು. ಈ ಬಗ್ಗೆ ಶಾಸಕಾಂಗದ ಕಾರ್ಯದರ್ಶಿ ಎಂ.ಕೆ. ವಿಜಯಲಕ್ಷ್ಮೀ ಅವರು ಅಧಿಸೂಚನೆ ಜಾರಿ ಮಾಡಿರುವರು. ಮಾ.4 ಮತ್ತು 5ರಂದು ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆಯು ನಡೆಯಲಿದೆ. ಇದು ಈ ಬಜೆಟ್ ಅಧಿವೇಶನದ ಆಕರ್ಷಣೆಯಾಗಿರಲಿದೆ.
Read More »ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ‍್ಯಾಲಿ
ಬೆಂಗಳೂರು, ಜ.23- ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ಖಂಡಿಸಿದರು.ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ ಶಾಲೆಗಳವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ಮೆಜಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಸಾವಿರಾರು ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ್ಯಾಲಿ ನಡೆಸಿ ಸರ್ಕಾರ ಈ ಕ್ರಮವನ್ನು …
Read More »ಬೆಳಗಾವಿಯಲ್ಲಿ ಪೆಟ್ರೊಲ್ ಕಳ್ಳರ ಹಾವಳಿ ….. ಸಿಸಿ ಕ್ಯಾಮರಾದಲ್ಲಿ ಸೆರೆ
ಪೆಟ್ರೋಲ್ ಬೆಲೆ ಏರಿಕೆ ಈಗ ಹೊಸ ಸಮಸ್ಯೆ ತಂದೊಡ್ಡಿದೆ. ಇಷ್ಟು ದಿನ ಮನೆ ಬೀಗ ಮುರಿದು ಒಳ ನುಗ್ಗಿ ಆಭರಣ ಕದಿಯುತ್ತಿದ್ದ ಕಳ್ಳರೀಗ, ಮನೆಯಂಗಳದಲ್ಲಿ ನಿಲ್ಲಿಸಿರುವ ವಾಹನಗಳಿಂದ ಪೆಟ್ರೋಲ್ ಎಗರಿಸಿ ಪರಾರಿಯಾಗುತ್ತಿದ್ದಾರೆ. ಹೀಗಾಗಿ ಕುಂದಾನಗರಿ ಖ್ಯಾತಿಯ ಬೆಳಗಾವಿ ಜನ, ಅಪಾರ್ಟ್ಮೆಂಟ್ನ ಪಾರ್ಕಿಂಗ್ನಲ್ಲಿ ಹಾಗೂ ತಮ್ಮದೇ ಮನೆಯ ಅಂಗಳದಲ್ಲಿ ವಾಹನ ನಿಲ್ಲಿಸಲೂ ಹಿಂಜರಿಯುವಂತಾಗಿದೆ. ಪೆಟ್ರೋಲ್ ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದಿನೇದಿನೆ ಇಂಧನ ದರ ಗಗನಕ್ಕೆ | ಕಳ್ಳತನಕ್ಕೆ ಸುಲಭ …
Read More »
Laxmi News 24×7