Breaking News

ಜಿಲ್ಲೆ

ಹೊಸ ಮದ್ಯದಂಗಡಿಗೆ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ :ಸಚಿವ ಗೋಪಾಲಯ್ಯ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಹೊಸ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ. ಈಗಾಗಲೇ ಹಳೆ ನಿಯಮದಂತೆ CL-07 ಲೈಸನ್ಸ್ ನೀಡುತ್ತಿದ್ದು, ಕಾನೂನು ಮೀರಿ ಲೈಸನ್ಸ್ ನೀಡಿದ್ದರೆ ಅದನ್ನು ರದ್ದು ಮಾಡಿ, ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ಲೈಸನ್ಸ್ ಪಡೆದು ಮೂರ್ನಾಲ್ಕು ಬಾರ್​​​ಗಳನ್ನು ನಡೆಸುತ್ತಿರುವ ವಿಚಾರದ ಬಗ್ಗೆ ಸಚಿವರ ಗಮನ ಸೆಳೆದಾಗ, ಆ ರೀತಿ ಯಾವುದೇ ದೂರುಗಳು ನನ್ನ ಗಮನಕ್ಕೆ …

Read More »

ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ: ಲಕ್ಷ್ಮಣ ನಿಂಬರಗಿ

ಬೆಳಗಾವಿ: ಶೀಘ್ರದಲ್ಲಿಯೇ ಬೆಳಗಾವಿ ನಾಗರಿಕರಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಈ ತರಬೇತಿಗೆ ಸೇರಬಯಸುವವರು ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಭರ್ತಿ ಮಾಡಿ ಬೆಳಗಾವಿ ಪೊಲೀಸ್ ಅಧೀಕ್ಷಕರ (ಸಶಸ್ತ್ರ) ಕಚೇರಿಗೆ ಸಲ್ಲಿಸಬೇಕು. ಅರ್ಜಿ ವಿತರಣಾ ಸ್ಥಳ: ಪೊಲೀಸ್ ಉಪಾಧೀಕ್ಷಕರವರ ಕಛೇರಿ ಅಥಣಿ, ಚಿಕ್ಕೋಡಿ, ಗೋಕಾಕ, ಬೈಲಹೊಂಗಲ, ರಾಮದುರ್ಗ. ಅರ್ಜಿ ವಿತರಣೆ …

Read More »

ಖೋಡೇಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ: ರೂ.878 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ. ಖೋಡೇಸ್ ಗ್ರೂಪ್’ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅವುಗಳನ್ನು ಪರಿಶೀಲನೆ ನಡೆಸಿದಾಗ ರೂ.878 ಕೋಟಿಯಷ್ಟು ಅಘೋಷಿತ ಆದಾಯ …

Read More »

ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಡಿವೈ ಎಸ್ ಪಿ ಅವರಿಂದ ಜಾಗೃತಿ .

ಗೋಕಾಕ: ತುರ್ತು ಪರಿಸ್ಥಿತಿಯಲ್ಲಿ 112 ಸಂಖ್ಯೆ, ರಸ್ತೆ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಗಾಗಿ   ತಗೆದುಕೊಳ್ಳಲು ಪೋಲಿಸ್ ಇಲಾಖೆಯ ವತಿಯಿಂದ ನಗರದಲ್ಲಿ ಸಂಚರಿಸುವ ಆಟೊ ರಿಕ್ಷಾಗಳು, ಬಸ್ಸುಗಳು ಮತ್ತು ಇನ್ನಿತರ ವಾಹನಗಳಿಗೆ ಭಿತ್ತಿ ಚಿತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಿದರು.   ಈ ಸಂದರ್ಭದಲ್ಲಿ ಡಿವೈಎಸ್ ಪಿ ಜಾವೇದ ಇನಾಮದಾರ, ಹುಕ್ಕೇರಿ ಸಿಪಿಐ ರಮೇಶ ಚಾಯಾಗೋಳ, ಪಿಎಸ್ಐಗಳಾದ ಗಣಪತಿ ಕೊಂಗನೊಳಿ, ಎಸ್ ಎಚ್ ಕರನಿಂಗ, ರಮೇಶ್ ಪಾಟೀಲ, ಆರ್ …

Read More »

ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್‌.ಸಿ. ಮಹದೇವಪ್ಪ

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು. ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. …

Read More »

ಹೆಚ್ಚುವರಿ ₹534 ಕೋಟಿಗೆ ಬೇಡಿಕೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡುತ್ತಿರುವ ಅಪೌಷ್ಟಿಕತೆ ಮತ್ತು ರಕ್ತಹೀನತೆ ಸಮಸ್ಯೆಗಳನ್ನು ಹೋಗಲಾಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಬಜೆಟ್‌ನಲ್ಲಿ ₹534 ಕೋಟಿ ಹೆಚ್ಚುವರಿ ಹಣ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಇಲಾಖೆಗೆ ಪ್ರತಿ ವರ್ಷ ಸುಮಾರು ₹5,000 ಕೋಟಿ ಬಜೆಟ್‌ನಲ್ಲಿ ನೀಡಲಾಗುತ್ತದೆ. ಇದಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರವೇ ಅನುದಾನ ನೀಡುತ್ತದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ …

Read More »

ಪಿಎಂ ಆವಾಸ್ ಯೋಜನೆ, ಪಿಎಂ ಸ್ವನಿಧಿ ಯೋಜನೆ: ತ್ವರಿತ ಸಾಲ ವಿತರಣೆಗೆ ಸಿಎಂ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ಬ್ಯಾಂಕುಗಳು ವಿಳಂಬ ಧೋರಣೆ ಅನುಸರಿಸದೆ ತ್ವರಿತವಾಗಿ ಸಾಲ ವಿತರಣೆ ಮಾಡಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕರುಗಳೊಂದಿಗೆ ಚರ್ಚಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು …

Read More »

ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ ಕೊಲೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿ

ಧಾರವಾಡ(ಫೆ. 10):  ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಸಿಬಿಐ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಈಗಾಗಲೇ ನ್ಯಾಯಾಲಯಕ್ಕೆ ಸಂಪ್ಲಿಮೆಂಟರಿ ಚಾರ್ಜಶೀಟ್ ಸಲ್ಲಿಸಿದ್ದಾರೆ. ಚಾರ್ಜಶೀಟ್ ನಲ್ಲಿರು ಏನಿದೆ ಎಂಬುದರ  ಪ್ರತಿ‌ ಇದೀಗ ಲಭ್ಯವಾಗಿದೆ‌‌. ಸಿಬಿಐ ತನಿಖೆ ಕೈಗೆತ್ತಿಕೊಂಡ ಬಳಿಕ‌ ನಡೆದ‌ ಎಲ್ಲ ಮಾಹಿತಿಯನ್ನು ಕಲೆಹಾಕಿದ್ದಾರೆ. ಯೋಗೇಶಗೌಡ ಕೊಲೆಗೆ ಸಂಬಂಧಿಸಿದಂತೆ ಹಲವರನ್ನು ಕರೆಸಿ ತನಿಖೆ ಆರಂಭ ಮಾಡಿದ್ದರು. ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ ಸಂಪ್ಲಿಮೆಂಟರಿ ಚಾರ್ಜಶೀಟ್ ನಲ್ಲಿ  ಕೊಲೆಗೆ ಸಂಬಂಧಿಸಿದಂತೆ …

Read More »

ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ 500 ಟ್ವಿಟರ್ ಖಾತೆಗಳು ಅಮಾನತು

ಬೆಂಗಳೂರು, ಫೆ.10- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಪ್ರಚೋದನಕಾರಿ ಪೋಸ್ಟ್ ಗಳನ್ನು ಹರಡುತ್ತಿದ್ದ 500 ಖಾತೆಗಳನ್ನು ತಾತ್ಕಾಲಿಕವಾಗಿ ಅಮಾನತು ಪಡಿಸಿರುವುದಾಗಿ ಟ್ವಿಟರ್ ಹೇಳಿದೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರ 500 ಖಾತೆಗಳನ್ನು ಗುರುತಿಸಿದ್ದು ಅವುಗಳನ್ನು ರದ್ದು ಪಡಿಸುವಂತೆ ಟ್ವಿಟರ್ ಸಂಸ್ಥೆಗೆ ಜನವರಿ 31 ಮತ್ತು ಫೆಬ್ರವರಿ 4ರಂದು ಪತ್ರ ಬರೆದಿತ್ತು. ಈ ಖಾತೆಗಳ ಮೂಲಕ ಹಿಂಸೆಗೆ ಪ್ರಚೋದನಕಾರಿಯಾದ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ …

Read More »

ಜಾನುವಾರು ಹತ್ಯೆ ಪ್ರತಿಬಂಧಕ ಮಸೂದೆ ಅಂಗೀಕಾರ ಸರಿಯಾಗಿದೆ: ಸಭಾಪತಿ ರೂಲಿಂಗ್‌

ಬೆಂಗಳೂರು: ಕಾಂಗ್ರೆಸ್‌ ಸದಸ್ಯರ ಧರಣಿ ಮಧ್ಯೆಯೇ, ‘ಧ್ವನಿ ಮತದಿಂದ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಗೆ ನೀಡಿರುವ ಅನುಮೋದನೆ ಸರಿಯಾಗಿದೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್‌ ನೀಡಿದರು. ಅಲ್ಲದೆ, ಕಾಂಗ್ರೆಸ್‌ ಸದಸ್ಯ ಧಿಕ್ಕಾರ ಘೋಷಣೆಯ ನಡುವೆಯೇ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಆ ಬಳಿಕ, ಕಲಾಪವನ್ನು ಸಭಾಪತಿ ಅನಿರ್ದಿಷ್ಟ ಅವಧಿಗೆ ಮುಂದೂಡಿದರು. …

Read More »