ಬೆಂಗಳೂರು: ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಂದು ಬಾರಿ ಇತಿಹಾಸವನ್ನ ಅವಲೋಕಿಸಿದ್ರೆ ಯಾರು ಯಾರ ಭಾಗವನ್ನ ಅತಿಕ್ರಮಿಸಿಕೊಂಡಿದ್ದಾರೆ ಅನ್ನೋದು ಅರಿವಾಗಲಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. ಒಮ್ಮೆ ಇತಿಹಾಸವನ್ನ ಅವಲೋಕಿಸಿ: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ …
Read More »ಮಹಾ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಖಂಡಿಸಿ..ಬೆಳಗಾವಿಯಲ್ಲಿ ಉದ್ಧವ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ..!
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರೋವರೆಗೂ ಹೋರಾಡೋಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೇ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ರಾಜ್ಯಾಧ್ಯಂತ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿವೆ. ಗಡಿ ವಿಚಾರದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ …
Read More »ಗಡಿ ವಿಚಾರದಲ್ಲಿ ಮಹಾ ಸಿಎಂ ಉದ್ಧವ್ ಉದ್ಧಟತನ ಪ್ರದರ್ಶನ..ಸಿಎಂ ಬಿಎಸ್‍ವೈ ಆಕ್ರೋಶ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …
Read More »ಬೆಳಗಾವಿ ಒಂದಿಂಚೂ ಜಾಗ ಬಿಡುವ ಪ್ರಶ್ನೆ ಇಲ್ಲ: ಸಚಿವ ರಮೇಶ ಜಾರಕಿಹೊಳಿ ಮಹಾ ಸಿಎಂಗೆ ತಿರುಗೇಟು!!
ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕುಟುಂಬ ರಾಜಕಾರಣ, ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ: ಅಮಿತ್ ಷಾ ಸೂಚನೆ..!
ಬೆಳಗಾವಿ(ಜ.17)- ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ …
Read More »ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ …
Read More »ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News* ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …
Read More »ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ
ಬೆಂಗಳೂರು: ಲಾಕ್ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …
Read More »ಪಕ್ಷ ಪುನರ್ರಚನೆ, ಬಲವರ್ಧನೆಗಾಗಿ ಜ.18ಕ್ಕೆ ಜೆಡಿಎಸ್ ಸಭೆ
ಬೆಂಗಳೂರು: ಜೆಡಿಎಸ್ ಸ್ಥಾನ ಕೆಳಗಿರಬಹುದು ಆದರೆ ಎಂದಿಗೂ ಹೊರಗುಳಿಯುವಿದಿಲ್ಲ ಎನ್ನುವುದನ್ನು ಖಚಿತವಾಗಿಸಲು ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ 35 ಉನ್ನತ ಮುಖಂಡರು ಒಟ್ಟಾಗಿ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ವಿಧಾನಸಭೆಯಉಪಾಧ್ಯಕ್ಷ ಬಂಡೆಪ್ಪ ಕಾಶಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಮತ್ತು ವಕ್ತಾರ ವೈಎಸ್‌ವಿ ದತ್ತ, ಎಂಎಲ್‌ಸಿ ಬಸವರಾಜ್ ಹೊರಟ್ಟಿ ಮತ್ತಿತರ ಶಾಸಕರು, ಎಂಎಲ್‌ಸಿಗಳು ಮತ್ತು …
Read More »
Laxmi News 24×7