Breaking News

ಜಿಲ್ಲೆ

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿಎಂ ಡಿಕೆಶಿ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಲೋಪದೋಷ ಸರಿಪಡಿಸುವಂತೆ ಒತ್ತಾಯಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪದೋಷಗಳಿದ್ರೆ ಸರಿಪಡಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯ ಚುನಾವಣೆ ಆಯುಕ್ತ ಜಿ ಎಸ್ ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಚಿವರಾದ …

Read More »

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಕೈಯಲ್ಲಿ ಕೊಡಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಕಳೆದ 20 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ, ಜಾನುವಾರುಗಳು ಪರಿತಪಿಸುವಂತಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಕುಡಿಯುವ ನೀರು …

Read More »

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

ಚಿಕ್ಕಮಗಳೂರು: ನಾನೊಬ್ಬ ರೈತನ ಮಗನಾಗಿದ್ದು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಚಿಕ್ಕಮಗಳೂರು ಶಾಸಕ ಹೆಚ್‌.ಡಿ  ತಮ್ಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ನಾನು ಒಬ್ಬ ರೈತರ ಮಗ. ಒಬ್ಬ ಕೃಷಿಕ ಈಗ ಶಾಸಕನಾಗಿದ್ದೇನೆ. ಕೃಷಿ ವಿಚಾರ ತಿಳಿಯಲು ವಿದೇಶ ಪ್ರವಾಸಕ್ಕೆ ಹೋಗಿತ್ತಿದ್ದೇನೆ  ಎಂದು ತಿಳಿಸಿದ್ದಾರೆ. ಮೊದಲಿನಿಂದಲೂ ನಾನು ವಿದೇಶಕ್ಕೆ ಹೋಗಿ ಬರುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಕೃಷಿ ಹೇಗಿದೆ ಎಂದು ನೋಡಬೇಕು. ಹಾಗಾಗಿ ಪ್ರವಾಸಕ್ಕೆ ಹೋಗ್ತಾ ಇದಿನಿ. …

Read More »

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

ಬೆಂಗಳೂರು: ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ ಅಂತ ಮಾಜಿ ಸಚಿವ ಆರಗ ಜ್ಞಾನೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ನಲ್ಲಿ ಫಾರಿನ್ ಟ್ರಿಪ್ ಪಾಲಿಟಿಕ್ಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ  ಸೊನ್ನೆ ಅಭಿವೃದ್ಧಿ, ಈಗ ಕಿತ್ತಾಟ ಶುರುವಾಗಿದೆ. ಅದು ಎಲ್ಲಿಗೆ ಹೋಗಿ ನಿಲ್ಲುತ್ತೋ ಹೇಳೋಕೆ ಸಾಧ್ಯವಿಲ್ಲ. ಹೈಕಮಾಂಡ್ ಹೇಳಿದಂತೆ ಕೇಳ್ತೀವಿ ಅಂತಾರೆ. ಹೈಕಮಾಂಡನ್ನ ಧಿಕ್ಕರಿಸೋ ಕೆಲಸ ನಡೆದಿದೆ. ಸಿಎಂ-ಡಿಸಿಎಂ  ಕುರ್ಚಿ ಹೋರಾಟದಲ್ಲಿ ಸಂಪೂರ್ಣವಾಗಿ ಕರ್ನಾಟಕ …

Read More »

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್‌ ರಾಜಣ್ಣ  ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಣ್ಣ ಮಹಿಳಾ ಮೀಸಲಾತಿ ಬಂದ್ರೆ ಪುತ್ರಿ ರಶ್ಮಿ ರಾಜಣ್ಣ  ರನ್ನ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಸಿಎಂ ಬದಲಾವಣೆ ಕುರಿತ ಚರ್ಚೆಗೆ ಪ್ರತಿಕ್ರಿಯಿಸಿ, ಮುಂದೆ ಮಹತ್ವದ ರಾಜಕೀಯ ಬದಲಾವಣೆ ಆಗುತ್ತೆ ಅಂತ ಅಂದುಕೊಂಡ್ರೆ ಸುಳ್ಳು. ಸಿದ್ದರಾಮಯ್ಯ  ಅವರು ಗಟ್ಟಿಯಾಗಿ ವಿಶ್ವಾಸದಲ್ಲಿದ್ದಾರೆ, ಬಜೆಟ್ …

Read More »

ಗೋಕಾಕ:ಕಾರಿನಲ್ಲಿ ರಿವಾಲ್ವರ್ ಇಟ್ಟುಕೊಂಡು ಓಡಾಡ್ತಿದ್ದವನು ಲಾಕ್

ಬೆಳಗಾವಿ ಜಿಲ್ಲೆ ಗೋಕಾಕ್ ನಗರತ ಕೋರ್ಟ್ ಸರ್ಕಲ್ ನಲ್ಲಿ ಪತ್ತೆ. ಅನುಮಾನಾಸ್ಪದ ಕಾರನ್ನ ತಡೆದು ಗೋಕಾಕ್ ಪೊಲೀಸರಿಂದ ಪರಿಶೀಲನೆ. ಆಗ ಲೈಸನ್ಸ್ ರಿವಾಲ್ವಾರ್ ಕಾರ್ ಡ್ಯಾಶ್ ಬೋರ್ಡ್ ನಲ್ಲಿ ಪತ್ತೆ. ಕಾರ್ ಚಾಲಕ ಬಾಗಲಕೋಟೆ ಜಿಲ್ಲೆ ನಿವಾಸಿ ರಮೇಶ ಕೇಸರಗೊಪ್ಪ ಚೌವಾಣ 52 ಅರೇಸ್ಟ್. ರಿವಾಲ್ವಾರ್ ಲೈಸನ್ಸ್ ಬಾಗಲಕೋಟೆ ಜಿಲ್ಲೆಗೆ ಮಾತ್ರ ಸಿಮೀತ. ರಿವಾಲ್ವಾರ್ ನವೀಕರಣ ಮುಗಿದಿದ್ದರೂ ಪೊಲೀಸ್ ಠಾಣೆ ಜಮಾ ಮಾಡಿಲ್ಲ. ಹೀಗಾಗಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲು. …

Read More »

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

ಬೆಂಗಳೂರು: ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ …

Read More »

ಇವರ ಸಾಧನೆ ಸಾಲದ ಹೊರೆ ಅಷ್ಟೇ

ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ …

Read More »

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

ವಿಜಯಪುರ: ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ, ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರನಂತೆ ವಸೂಲಿಗೆ ನಿಂತಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಯತೀಂದ್ರ ಕೂಡ ವಸೂಲಿ ಕಂಪನಿಯಾಗಿದ್ದಾನೆ. ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ. ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರ ಹಾಗೆ ವಸೂಲಿಗೆ ನಿಂತಿದ್ದಾನೆ. ವಿಜಯೇಂದ್ರ ಕಡೆ ರಾತ್ರಿ ಟ್ರೇನಿಂಗ್ ತೆಗೆದುಕೊಳ್ಳುತ್ತಾನಂತೆ. ಹೇಗೆ …

Read More »

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

ಬೀದರ್: ಮುಖ ತೊಳೆಯಲು ಹೋಗಿ ಕಾಲು ಜಾರಿ ನೀರುಪಾಲಾಗಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆಯೂ ಜಲಸಮಾಧಿಯಾಗಿರುವ ಘಟನೆ ಬೀದರ್‌ನ  ಹಾಲಳ್ಳಿ ಗ್ರಾಮದ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ನಡೆದಿದೆ. ಮೃತರನ್ನು ಹಳ್ಳೆಖೇಡ್(ಬಿ) ಗ್ರಾಮದ ತಂದೆ ಈಶಪ್ಪ (50) ಮತ್ತು ಮಗ ಅಮರೇಶ (23) ಎಂದು ಗುರುತಿಸಲಾಗಿದೆ. ತಂದೆ-ಮಗ ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ, ವಾಪಸ್ ಹಳ್ಳಿಖೇಡ್‌ಗೆ ಹೋಗುತ್ತಿದ್ದರು. ಈ ವೇಳೆ ಕಾರಂಜಾ ನದಿಯ ಹಿನ್ನೀರಿನ ಕಾಲುವೆಯಲ್ಲಿ ಮಗ ಮುಖ ತೊಳೆಯಲು …

Read More »