Breaking News

ಜಿಲ್ಲೆ

ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.

  ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ‌ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …

Read More »

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …

Read More »

ಯಡಿಯೂರಪ್ಪರನ್ನು ಕೆಳಗಿಳಿಸುವುದು ಹಗಲುಗನಸು, ಸಿದ್ದರಾಮಯ್ಯಗೆ ಮತಿ ಭ್ರಮಣೆ; ಶ್ರೀರಾಮುಲು ಕಿಡಿ

ಚಿತ್ರದುರ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಯೂರಪ್ಪರನ್ನ ಬದಲಾವಣೆ ಮಾಡುತ್ತಾರೆ ಎಂದು ಹೇಳುವ ಮಾಜಿ ಸಿಎಂ ಸಿದ್ದರಾಮಯ್ಯ ಮೊದಲು ಅವರ ಕಾಂಗ್ರೇಸ್ ನಲ್ಲಿ ಮೂರು ಭಾಗ ಆಗಿದೆ. ಆ ಮನೆಯನ್ನ ಸರಿ ಮಾಡಿಕೊಳ್ಳಲಿ ಎಂದು ಚಿತ್ರದುರ್ಗ ದಲ್ಲಿ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಗರದದಲ್ಲಿ ನಡೆದ ಜನಸೇವಕ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಬಿ.ಶ್ರೀರಾಮುಲು, ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿ, “ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ಸಿಎಂ …

Read More »

ಜನವರಿ 14ಕ್ಕೆ ಎಸ್‌ಎಸ್‌ಎಲ್’ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಜನವರಿ 14 ರಂದು ಎಸ್‌ಎಸ್‌ಎಲ್’ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ನಲೂರು ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಪಠ್ಯ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಶಾಲೆಗಳಿಗೆ ಭೇಟಿ ನೀಡಿದಾಗ ವಿದ್ಯಾರ್ಥಿಗಳಿಗೆ ಧೈರ್ಯ ಹೇಳುತ್ತಿದ್ದೇನೆ. ಗುರುವಾರ ಎಸ್‌ಎಸ್‌ಎಲ್’ಸಿ ಪರೀಕ್ಷೆಯ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ …

Read More »

ಸೆನ್ಸೆಕ್ಸ್, ನಿಫ್ಟಿ ಹೊಸ ಎತ್ತರದಲ್ಲಿ ದಿನದ ವಹಿವಾಟು ಅಂತ್ಯ

ಮುಂಬೈ: ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್‌ಇ) ಮತ್ತು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ(ಎನ್‌ಎಸ್‌ಇ)ಗಳ ಸಂವೇದಿ ಸೂಚ್ಯಂಕಗಳು ಸತತ ಮೂರನೇ ವಹಿವಾಟು ದಿನವಾದ ಮಂಗಳವಾರವೂ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ. ಸೆನ್ಸೆಕ್ಸ್ 248 ಅಂಕ ಏರಿಕೆ ಕಂಡು ದಾಖಲೆಯ ಗರಿಷ್ಠ 49,517 ಕ್ಕೆ ತಲುಪಿದ್ದರೆ, ನಿಫ್ಟಿ 79 ಅಂಕ ಏರಿಕೆ ಕಂಡು 14,563 ಕ್ಕೆ ತಲುಪಿದೆ. ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ಕಂಡರೂ ನಂತರ ಬ್ಯಾಂಕಿಂಗ್ ಷೇರುಗಳ ಖರೀದಿ …

Read More »

ಕೂಡಲಸಂಗಮದಲ್ಲಿ 34ನೇ ಶರಣ ಮೇಳಕ್ಕೆ ಚಾಲನೆ

ಕೂಡಲಸಂಗಮ: ‘ಶರಣರ ಚಿಂತನೆಗಳಿಗೆ ಸನಾತನ ಪದ ಪೂರಕವಲ್ಲ. ಬಸವ ಕಲ್ಯಾಣದಲ್ಲಿ ನಡೆದ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಚಾಲನಾ ಸಮಾರಂಭ ಕುರಿತು ಸರ್ಕಾರ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸನಾತನ ಪದ ಬಳಕೆ ಮಾಡಿರುವುದು ಸೂಕ್ತವಲ್ಲ’ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಗುರು ಬಸವ ಸ್ವಾಮೀಜಿ ಅಭಿಪ್ರಾಯಪಟ್ಟರು. ಕೂಡಲಸಂಗಮ ಬಸವ ಧರ್ಮ ಪೀಠ ಆವರಣದಲ್ಲಿ ಮಂಗಳವಾರ ಆರಂಭಗೊಂಡ ಮೂರು ದಿನಗಳ 34ನೇ ಶರಣ ಮೇಳದಲ್ಲಿ ರಾಷ್ಟ್ರೀಯ ಬಸವ ದಳದ 30ನೇ …

Read More »

ಉಪೇಂದ್ರ ಅಭಿನಯದ ಕಬ್ಜ ಚಿತ್ರದ ವಿಶೇಷ ಪಾತ್ರದಲ್ಲಿ ಸುದೀಪ್

ಆರ್‌. ಚಂದ್ರ ನಿರ್ದೇಶನದ ‘ಕಬ್ಜ’ ಚಿತ್ರದಿಂದ ಒಂದು ಭರ್ಜರಿ ಸುದ್ದಿ ಬಂದಿದೆ. ಈ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಸುದೀಪ್‌ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ಇನ್ನಷ್ಟು ಬಲ ಬಂದಂತಾಗಿದೆ.ಈ ಸಂಕ್ರಾಂತಿಗೆ ಒಂದು ಭರ್ಜರಿ ಸುದ್ದಿ ಕೊಡುವು ದಾಗಿ ಆರ್‌. ಚಂದ್ರು ಘೋಷಿಸಿದ್ದರು. ಈ ಬಾರಿ ನಾಯಕಿಯ ಘೋಷಣೆ ಯಾಗಲಿದೆ, ಪರಭಾಷೆಯ ದೊಡ್ಡ ನಟರೊಬ್ಬರು ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಹರಿದಾಡುತ್ತಿರುವಾಗಲೇ, ಚಿತ್ರದಲ್ಲಿ ಸುದೀಪ್‌ ನಟಿಸುತ್ತಿರುವ …

Read More »

ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ

ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು …

Read More »

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಪೊಲೀಸರು

ಬೆಂಗಳೂರು: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಸೂರ್ಯಸಿಟಿ ಪೊಲೀಸರು ಬೇಧಿಸಿದ್ದಾರೆ. ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮಷೀನ್ ಹಾಗೂ 6 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 100, 200 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಇವೆ. ವಂಚಕರು ಕಲರ್ …

Read More »

ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭ

ಬೆಂಗಳೂರು: ಕೊರೊನಾ ಮಹಾಮಾರಿಗೆ ಬ್ರಹ್ಮಾಸ್ತ್ರವಾಗಿರುವ ಕೋವಿಶೀಲ್ಡ್ ಲಸಿಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ತಲುಪಿದೆ. ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆ ಆರಂಭವಾಗಿದೆ. ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ಎರಡು ಪ್ರಮುಖ ಸ್ಥಳಗಳಿಗೆ ರವಾನಿಸಲಾಗುತ್ತಿದ್ದು, ಈಗಾಗಲೇ ಪುಣೆಯಿಂದ ಸ್ಪೈಸ್ ಜೆಟ್ ವಿಶೇಷ ವಿಮಾನದಲ್ಲಿ Z+ ಭದ್ರತೆಯ ಮೂಲಕ ಕೋವಿಶೀಲ್ಡ್ ಲಸಿಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …

Read More »