ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …
Read More »ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ
ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ. ಭೋಪಾಲ್ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ …
Read More »ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …
Read More »ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,
ಬೆಂಗಳೂರು,-ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 2ನೇ ದಿನವಾದ ಇಂದು ಶಾಸಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಸಮಾಲೋಚನಾ ಸಭೆ ನಡೆಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮೈಸೂರು , ಚಾಮರಾಜನಗರ ಜಿಲ್ಲೆಗಳು ಸೇರಿದಂತೆ 20ಕ್ಕೂ ಹೆಚ್ಚು ಶಾಸಕರ ಜೊತೆ ಸಿಎಂ ಸಭೆ ನಡೆಸಿದರು. ಈ ವೇಳೆ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿನ ಅನುದಾನದ ಕೊರತೆ, ಅಭಿವೃದ್ದಿ ಹಿನ್ನಡೆ, ಕುಡಿಯುವ ನೀರು, …
Read More »ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ
ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್‍ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್‍ವೈ …
Read More »ಸಚಿವ ಭೈರತಿ ಬಸವರಾಜ ಬೆಳಗಾವಿಗೆ
ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು. ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ …
Read More »ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢ
ಬೆಳಗಾವಿ: ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ಗ್ರಾಮೀಣ ಭಾಗದ 9, ಬೆಳಗಾವಿ ನಗರ ವಲಯದ 4 , ಕಿತ್ತೂರು 1, ರಾಮದುರ್ಗದಲ್ಲಿ 3 ಶಿಕ್ಷಕರಿಗೆ ಸೇರಿದಂತೆ ಒಟ್ಟು 18 ಶಿಕ್ಷಕರಿಗೆ ಕೋವೀಡ್ ಸೊಂಕು ದೃಢವಾಗಿದೆ. ಹುಕ್ಕೇರಿಯ 2 , ರಾಯಬಾಗದ 2 ಶಿಕ್ಷಕರಿಗೆ ಸೊಂಕು ತಗುಲಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು …
Read More »ಯತ್ನಾಳ ಒಂಟಿ ಸಲಗದಂತೆ; ಬಸನಗೌಡ ಪಾಟೀಲ ಪರ ಕೂಡಲ ಸಂಗಮ ಸ್ವಾಮೀಜಿ ಬ್ಯಾಟಿಂಗ್
ವಿಜಯಪುರ (ಜ. 05): ಬಸನಗೌಡ ಪಾಟೀಲ ಯತ್ನಾಳ ಎಂದೂ ಸ್ವಾರ್ಥದ ಬಗ್ಗೆ ಮಾತನಾಡಿದವರಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಎಷ್ಟೋ ಸಂದರ್ಭದಲ್ಲಿ ದೆಹಲಿ ನಾಯಕರ ಬಗ್ಗೆಯೂ ನೇರವಾಗಿ ಮಾತನಾಡಿರುವ ಉದಾಹರಣೆಗಳಿವೆ. ಹಿಂದೆ ವಾಜಪೇಯಿ ಪ್ರಧಾನಿಯಾಗಿದ್ದಾಗ ಕೃಷ್ಣಾ ಮೇಲ್ದಂಡೆ ಯೋಜನೆಯ ಬಗ್ಗೆ ಧ್ವನಿ ಎತ್ತಿದ್ದರು. ಉತ್ತರ ಕರ್ನಾಟಕದ ಜನರೆಂದರೆ ಲಿಂಗಾಯಿತ ಶಾಸಕರಿಗೆ ರಾಜ್ಯ ಮಟ್ಟದ ಯಾರೂ ಗಾಡ್ ಫಾದರ್ ಗಳಿಲ್ಲ. ಹೀಗಾಗಿ ಒಬ್ಬೊಬ್ಬ ನಾಯಕರನ್ನು ಬೆನ್ನು ಹತ್ತಿಕೊಂಡು ಹೋಗಿದ್ದಾರೆ. ಆದರೆ, ಯತ್ನಾಳ ಗೌಡರು …
Read More »ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ …
Read More »ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …
Read More »
Laxmi News 24×7