Breaking News

ಜಿಲ್ಲೆ

ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ: ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು

ಬೆಳಗಾವಿ  :ಶಾಲೆ ಶುಲ್ಕದ ಹೊರೆ ಇಳಿಸಿ, ಪಾಲಕರು, ಮಕ್ಕಳನ್ನು ಉಳಿಸಿ ಜಿಲ್ಲಾಧಿಕಾರಿ ಮೊರೆ ಹೋದ ಖಾಸಗಿ ಶಾಲೆ ಪಾಲಕರು ಅರ್ಧ ಶೈಕ್ಷಣಿಕ ವರ್ಷ ಮುಗಿದುಹೋಗಿದೆ. ಕೊರೋನಾ ಸಂಕಷ್ಟದಿಂದ ಪಾಲಕರೂ ತೊಂದರೆಯಲ್ಲಿ ಸಿಲುಕಿದ್ದಾರೆ. ಪಾಠಗಳೂ ನಡೆಯುತ್ತಿಲ್ಲ. ಹಾಗಾಗಿ ಶಾಲೆ ಶುಲ್ಕದಲ್ಲಿ ರಿಯಾಯಿತಿ ನೀಡಲು ಸೂಚನೆ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ ತಾಲೂಕು ಯಮನಾಪುರ ಗ್ರಾಮದ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.: ಕೊರೋನಾದಿಂದಾಗಿ …

Read More »

ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!

ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.‌ ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್​ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ …

Read More »

ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ

ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …

Read More »

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …

Read More »

ತಹಶೀಲ್ದಾರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ !

ಬಳ್ಳಾರಿ : ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತಿಚೇಗೆ ಎಸ್.ಬಿ.ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗಿತ್ತು. ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ನಿವಾಸಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಸ್ಥಳಕ್ಕೆ …

Read More »

ಬೆಳಗಾವಿ : ಹೃದಯಾಘಾತದಿಂದ ಗ್ರಾಪಂ.ಚುನಾವಣೆಯ ಕಣದಲ್ಲಿದ್ದ ಅಭ್ಯರ್ಥಿ ಸಾವು

ಚಿಕ್ಕೋಡಿ : ಗ್ರಾಪಂ. ಚುನಾವಣೆಯ ಕಣದಲ್ಲಿದ್ದಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಜೋಡಕುರಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಾರುತಿಗೌಡ ಭೀಮಗೌಡ ಪಾಟೀಲ್(65) ಬೆಳಿಗ್ಗೆ ಚಹಾ ಕುಡಿಯುತ್ತಲೇ ಕೊನೆಯುಸಿರೆಳಿದ್ದಾರೆ. ಇವರು ಗ್ರಾಮದ ವಾರ್ಡ್ ನಂ.3ರಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಡಿ.27ರಂದು ಮತದಾನ ನಡೆಯಲಿದೆ. ಮಾರುತಿಗೌಡ ಅವರು ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು.

Read More »

ನೈಟ್ ಕರ್ಫ್ಯೂ ತೀರ್ಮಾನ ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ರೂಪಾಂತರಿ ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮಗಳು ಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತಿದೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಕಾಟಾಚಾರದ ರಾತ್ರಿ ಕರ್ಫ್ಯೂ ಹೇರಿ …

Read More »

ಸದ್ದಿಲ್ಲದೇ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆಟ ಶುರು ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರು ಅವಿರೋಧ ವಾಗಿ ಆಯ್ಕೆ

ಬೆಳಗಾವಿ-ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಟ ಶುರು ಮಾಡಿದ್ದಾರೆ. ಗ್ರಾಮ ಮಟ್ಟದಿಂದಲೇ ಸಂಘಟನೆ ಕಟ್ಟುತ್ತಿರುವ ರಮೇಶ್ ಜಾರಕಿಹೊಳಿ ಅವರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕೈಯಾಡಿಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ. ಯಾಕಂದ್ರೆ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೂ ಅಪಾರ ಅಭಿಮಾನಿಗಳನ್ನು ಹೊಂದಿದ್ದು.ಸಾಹುಕಾರ್ ರಮೇಶ್ ಗ್ರಾಮ ಪಂಚಾಯತ್ ಚುನಾವಣೆಯಲ್ಲಿಯೂ ಈ ಕ್ಷೇತ್ರದಲ್ಲಿ ಬೀಜ ಬೀತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ …

Read More »

ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು ,ಮಲಗಿದ ಹೊತ್ತಲ್ಲಿ ನೈಟ್‌ ಕರ್ಫ್ಯೂ ದೊಡ್ಡ ಜೋಕ್‌ ಅಂತಿದ್ದಾರೆ ಜನ

: ಬೆಂಗಳೂರು: ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೆ ಮತ್ತೆ ಎಡವಟ್ಟು, ಎಡಬಿಡಂಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಮಧ್ಯಾಹ್ನವಷ್ಟೇ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಹೇರುವುದಾಗಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಕ್ರಿಸ್‍ಮಸ್ ಮಿಡ್ ನೈಟ್ ಪ್ರಾರ್ಥನೆ, ಹೊಸ ವರ್ಷಕ್ಕೆ ನಿರ್ಬಂಧ ಹೇರುವ ಸಲುವಾಗಿ ಈ ನಿರ್ಧಾರ ಅಂತಲೂ ಘೋಷಣೆ ಮಾಡಿದ್ದರು. ಆದ್ರೆ, ಸಂಜೆ ಹೊತ್ತಿಗೆ ಸರ್ಕಾರದ ನಿರ್ಧಾರವೇ ಬದಲಿ ಹೋಗಿದೆ. ಕೇವಲ …

Read More »

ಕೊಪ್ಪಳ ಗವಿಮಠದ ಜಾತ್ರೆ ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್……..

ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಗವಿಮಠದ ಜಾತ್ರೆ ನಡೆಯುತ್ತಾ? ಇಲ್ಲವಾ? ಅನ್ನೋ ಅನುಮಾನ ಭಕ್ತರಲ್ಲಿ ಮೂಡಿದೆ. ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಪ್ರತಿ ವರ್ಷ ಈ ಜಾತ್ರೆಯಲ್ಲಿ ಸುಮಾರು ಐದು ಲಕ್ಷಕ್ಕೂ ಅಧಿಕ ಜನ ಸೇರುತ್ತಾರೆ. ಲಕ್ಷಾಂತರ ಜನರು ಸೇರುವ ಜಾತ್ರೆಗೆ ನಾವು ಅನುಮತಿ ನೀಡಲ್ಲ. ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿಯಮಗಳ ಪ್ರಕಾರ ಜಾತ್ರೆಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಜಿಲ್ಲೆಯ ಯಾವುದೇ ಜಾತ್ರೆಗೆ …

Read More »