ಬೆಳಗಾವಿಯ ಶಹಾಪುರದಲ್ಲಿರುವ ಸ್ಮಶಾನದಲ್ಲೇ ಶಿವರಾತ್ರಿಯ ಜಾಗರಣೆ ನಡೆಯುತ್ತದೆ. ಹಬ್ಬ-ಹರಿದಿನಗಳಲ್ಲೂ ಜನ ಬರುತ್ತಾರೆ. ಅಕ್ಷರಶಃ ಸ್ಮಶಾನಪ್ರಿಯ ಶಿವನ ನಿಜ ಆರಾಧನೆ ಇಲ್ಲಿ ನಡೆಯುತ್ತದೆ. ಶಹಾಪುರ ಮುಕ್ತಿಧಾಮ ವೈರಾಗ್ಯದ ತಾಣವನ್ನು ಭಕ್ತಿ ಕ್ಷೇತ್ರವನ್ನಾಗಿ ಬದಲಾಯಿಸಿದೆ. ಉತ್ತಮ ಉದ್ಯಾನ ಜನಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯ ಸಮಾಜಸೇವಕರು ಸೇರಿ 28 ವರ್ಷಗಳ ಹಿಂದೆ ಮುಕ್ತಿಧಾಮ ಸೇವಾ ಸುಧಾರಣಾ ಮಂಡಳಿ ಸ್ಥಾಪಿಸಿ, ಶಿವನ ಮಂದಿರ ನಿರ್ಮಿಸಿ, ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಮಹಾನಗರ ಪಾಲಿಕೆ ಅನುದಾನವಿಲ್ಲದೆ ಈ ಮಂಡಳಿಯೇ ಸ್ಮಶಾನವನ್ನು ಮಾದರಿ …
Read More »RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆರ್‌ಎಸ್‌ಎಸ್ ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು. ನಾವು ನೆರಳಿನ ಜೊತೆ ಹೋರಾಟ ಮಾಡಬಾರದು. ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಾಂಧಿ ಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು ಮಕ್ಕಳನ್ನ ಹೆರಬೇಕು ಎನ್ನುತ್ತಾರೆ. ಆದರೆ ಅವರು ಮಾತ್ರ ಬ್ರಹ್ಮಚಾರಿಗಳಾಗಿ ಇರುತ್ತಾರೆ, ಇದೆಂತದ್ದು? ಧರ್ಮ ಜಾತಿಗಳ ನಡುವೆ ಜಗಳ ಹಚ್ಚುವವರೇ …
Read More »ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ
ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ ಮನನೊಂದು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರುಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು 13 ವರ್ಷದ ಸುಪ್ರಿತಾ ಎಂದು ಗುರುತಿಸಲಾಗಿದೆ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ …
Read More »ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!
ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ …
Read More »ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ
ರಾಯಚೂರು: ಮಹಾಶಿವರಾತ್ರಿ ಹಿನ್ನೆಲೆ ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಶಿವಲಿಂಗಕ್ಕೆ ವಿಶೇಷ ಮಹಾರುದ್ರಾಭಿಷೇಕ ನೆರವೇರಿಸಲಾಯಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ರುದ್ರದೇವರಿಗೆ ಅಭಿಷೇಕ ನೆರವೇರಿಸಿದರು. ಮಠದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಹಾಗೂ ಮಠದ ಪಂಡಿತರು ನಿರಂತರವಾಗಿ ಮಂತ್ರಗಳನ್ನ ಪಠಿಸಿದರು. ಮಠದ ಶ್ರೀಗಳು ಮಹಾರುದ್ರಾಭಿಷೇಕದ ಜೊತೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಿದರು. ಇನ್ನೂ ರಾಯಚೂರು ನಗರದ ಎಲ್ಲಾ ಈಶ್ವರ ದೇವಾಲಯಗಳಲ್ಲೂ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಭಕ್ತರ ದಂಡು …
Read More »ಮತದಾರರ ಪಟ್ಟಿ ಪರಿಷ್ಕರಣಾ ಸಭೆ
ನಿಪ್ಪಾಣಿ: ಮತಕ್ಷೇತ್ರದ ಬಿ.ಎಲ್.ಎ.-2 ಕಾರ್ಯಗಾರ ಸಭೆಯನ್ನು ಉದ್ಘಾಟಿಸಿ & ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಭೆ ನಡೆಸಿ ಮಾತನಾಡಲಾಯಿತು. ಕಾರ್ಯಗಾರದ ಬಗ್ಗೆ ಸಮಗ್ರ ಮಾಹಿತಿ ನೀಡಿ,ಪ್ರಕ್ರಿಯೆಯು ನಕಲಿ ಮತದಾರರನ್ನು ತೆಗೆದುಹಾಕಲು ಮತ್ತು ಹೊಸ ಮತದಾರರನ್ನು ಸೇರಿಸಲು ಅವಕಾಶವನ್ನು ಕಲ್ಪಿಸಿದ್ದು,ನಿಖರ ಮತದಾರರ ಪಟ್ಟಿ ಇಲ್ಲದೆ,ನ್ಯಾಯಯುತ ಚುನಾವಣೆಗಳು ಅಸಾಧ್ಯ.ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಮೂಲಕ ‘ಒಬ್ಬ ವ್ಯಕ್ತಿ, ಒಂದು ಮತ’ ಎಂಬ ಪ್ರಜಾಪ್ರಭುತ್ವದ ತತ್ವವನ್ನು ಬಲಪಡಿಸುತ್ತದೆ ಎಂದು ತಿಳಿಸಿ, …
Read More »ಕಾಂಗ್ರೆಸ್ ಮುಖಂಡನ ಕೊಲೆ
ಬಾಗಲಕೋಟೆ:ಕೆರೂರ ಸಮೀಪದ ಸಾಗನೂರು ಗ್ರಾಮದ ಸಹಕಾರಿ ಧುರೀಣ, ಕಾಂಗ್ರೆಸ್ ಮುಖಂಡ ಶಿವಪ್ಪ ಬಸಪ್ಪ ಮೇಟಿ (54) ಕೊಲೆಯಾಗಿದ್ದು, ಕೆರೂರ ಪೊಲೀಸ್ ಠಾಣೆಯಲ್ಲಿ ಮೃತರ ಮಗ ಯಮನಪ್ಪ ಮೇಟಿ ಪ್ರಕರಣ ದಾಖಸಿದ್ದಾನೆ. ಫೆಬ್ರುವರಿ 12 ಗುರುವಾರ 8.30 9.30ರ ಅವಧಿಯಲ್ಲಿ ಕೊಲೆಯಾದ ಶಿವಪ್ಪ ಮೇಟಿ ಸಾಗನೂರ ಗ್ರಾಮದ ಹೊರ ವಲಯದ ಬಟಕುರ್ಕಿ ರಸ್ತೆ ಕಡೆಗೆ ಬಯಲು ಬಹಿರ್ದಸೆಗೆಂದು ಹೋಗಿದ್ದಾಗ ಯಾರೋ ದುಷ್ಕರ್ಮಿಗಳು ಯಾವುದೋ ವಸ್ತುವಿನಿಂದ ಹೊಡೆದು ಕೊಲೆ ಮಾಡಿ, ಸಾಕ್ಷಿ ನಾಶ …
Read More »ಯಾವ ಪುರುಷಾರ್ಥಕ್ಕೆ ಸಾವಿರ ದಿನಗಳ ಸಂಭ್ರಮ? ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಈರಣ್ಣ ಕಡಾಡಿ ಕಿಡಿ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳಾಗಿವೆ. ಇಂದು ಹಾವೇರಿಯಲ್ಲಿ ಬೃಹತ್ ಪ್ರಮಾಣದ ಸಾವಿರ ದಿನಗಳ ಸಂಭ್ರಮಾಚರಣೆ ಸಮಾವೇಶ ನಡೆಸಲಾಗುತ್ತಿದೆ “ಯಾವ ಪುರುಷಾರ್ಥಕ್ಕೆ ? ಈ ಸಮಾವೇಶ ಎಂದು ಜನ ಪ್ರಶ್ನಿಸುತ್ತಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಾಗ್ದಾಳಿ ನಡೆಸಿದರು. ಶನಿವಾರ ಫೆ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ 3731 ಕ್ಕೂ ಹೆಚ್ಚು ರೈತರು …
Read More »ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ
ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಸ್ವಕುಳಿಸಾಳಿ ಸಮುದಾಯದ 12 ಕುಟುಂಬಗಳಿಗೆ ತಮ್ಮದೇ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದ್ದು, ಕಳೆದ ಎಂಟು ವರ್ಷಗಳಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಸಮುದಾಯಕ್ಕೆ ಸೇರಿದ ಸಂಘದ ಆಸ್ತಿ ಹಾಗೂ ಆದಾಯದ ಲೆಕ್ಕ ಕೇಳಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಹಿಷ್ಕೃತ ಕುಟುಂಬಗಳು ಆರೋಪಿಸಿವೆ. ಶಹಾಪುರದಲ್ಲಿರುವ ಜೀಹ್ವೆಶ್ವರ ಕಲ್ಯಾಣ ಮಂಟಪ ಹಾಗೂ …
Read More »ಧಾರವಾಡ | ಕೊರಿಯನ್ ಗೇಮ್ ಗೀಳಿಗೆ ಯುವಕ ಬಲಿ
ಧಾರವಾಡ: ಕೊರಿಯನ್ ಗೇಮ್ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಫೆ.6 ರಂದು ಯುವಕ ಶರಣಾಗಿದ್ದ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮೊಬೈಲ್ ಪರಿಶೀಲನೆ ವೇಳೆ ಕೊರಿಯನ್ ಗೆಮ್ಸ್ ಪತ್ತೆಯಾಗಿದೆ. ಕೊರಿಯನ್ ಗೆಮ್ಸ್‌ಗೆ ವಿಕಾಸ್ ಅಡಿಕ್ಟ್ ಆಗಿದ್ದ ಎಂಬ ವಿಚಾರ ತನಿಖೆ ವೇಳೆ ತಿಳಿದು ಬಂದಿದೆ. ಪಿಯುಸಿ ಸೈನ್ಸ್ ಮುಗಿಸಿ ಮನೆಯಲ್ಲೇ …
Read More »
Laxmi News 24×7