ಬೆಂಗಳೂರು,ಡಿ.8- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ಯಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವಂತೆ ಪಕ್ಷದ ಕೆಲ ನಾಯಕರು ಹೈಕಮಾಂಡ್‍ಗೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ವಿರುದ್ದ ಸಿಡಿದೆದ್ದಿರುವ ಅತೃಪ್ತ ಬಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ …
Read More »ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ
ಬೆಂಗಳೂರು, ಡಿ.8- ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ. ರೈತರಿಗೆ …
Read More »ಛಲದಂಕ ಮಲ್ಲ” ರಮೇಶ ಜಾರಕಿಹೊಳಿ:ಅಶೋಕ ಚಂದರಗಿ
ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ ಬಸವಳಿಯುತ್ತಿದ್ದ …
Read More »ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ
ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ, ಶುಗರ್ …
Read More »ರೈತ ಇದ್ರೆನೇ ದೇಶ- ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಬೆಂಬಲ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‍ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ. ಸಂಬಂಧ ಟ್ವೀಟ್ ಮಾಡಿರುವ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ. …
Read More »ಐನಾಪುರ: ನೇಣು ಹಾಕಿಕೊಂಡು ಅಕ್ಕ, ತಂಗಿ ಆತ್ಮಹತ್ಯೆ
ಚಿಂಚೋಳಿ: ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ಅಕ್ಕ, ತಂಗಿ ಇಬ್ಬರೂ ಏಕಕಾಲಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಶ್ವರ್ಯ ವಿಶ್ವನಾಥ ಸುತಾರ (20) ಹಾಗೂ ಸಾರಿಕಾ ವಿಶ್ವನಾಥ ಸುತಾರ (17) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕುಟುಂಬದ ಮುಖ್ಯಸ್ಥ ವಿಶ್ವನಾಥ ಸುತಾರ ಅವರು ಐನಾಪುರ ಗ್ರಾಮದಲ್ಲಿಯೇ ಚಹಾ ಅಂಗಡಿ ನಡೆಸುತ್ತಿದ್ದಾರೆ. ಅವರಿಗೆ ಒಟ್ಟು ಐವರವು ಹೆಣ್ಣುಮಕ್ಕಳಿದ್ದರು. ಈಗಾಗಲೇ ಮೂವರ ಮದುವೆಯಾಗಿದೆ. ಐದನೆಯವಳಾದ ಸಾರಿಕಾಗೆ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು. ಆದರೆ, …
Read More »ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ
ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …
Read More »ಅನ್ನದಾತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ
ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್’ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಅಹಮದ್‍ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ …
Read More »ಭಾರತ್ ಬಂದ್ : ಗೋಕಾಕನಲ್ಲಿ ಸಹಜ ಸ್ಥಿತಿ
https://youtu.be/klKiPyqipLk ಗೋಕಾಕ : ರೈತರು ಭಾರತ್ ಬಂದ್ ಗೆ ಕರೆ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದೆ. ಆದರೆ ಗೋಕಾಕ ತಾಲ್ಲೂಕಿನಲ್ಲಿ ಪ್ರತಿಭಟನೆ ಬಿಸಿ ತಟ್ಟಿಲ್ಲ. ಎಂದಿನಂತೆ ಜನಜೀವನ ಸಹಜ ಸ್ಥಿತಿಯಲ್ಲಿದೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಲಾಗಿದೆ. ಆದರೆ ಜನರು ದಿನನಿತ್ಯದಂತೆ ಅಂಗಡಿ, ವ್ಯಾಪಾರ ವಹಿವಾಟು ನಡೆಸಿರುವುದು ಕಂಡು ಬಂದಿದೆ. ಇನ್ನೂ ಕೆಎಸ್ ಆರ್ …
Read More »
Laxmi News 24×7