Breaking News

ಜಿಲ್ಲೆ

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …

Read More »

ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ,ಉಸಿರಾಡಲೂ ಬಿಬಿಎಂಪಿಗೆ ಶುಲ್ಕ ಕಟ್ಟಬೇಕೇ..?

ಬೆಂಗಳೂರು, ಡಿ.6- ಮನೆ ಮುಂದೆ ವಾಹನ ನಿಲ್ಲಿಸಿದರೂ ಶುಲ್ಕ ಕಟ್ಟಬೇಕು ಎನ್ನುವ ಪ್ರಸ್ತಾವನೆ ಸಲ್ಲಿಸಿರುವ ಬಿಬಿಎಂಪಿ ಆಯುಕ್ತರ ನಿರ್ಧಾರ ನೋಡಿದರೆ ನಾವು ಬ್ರಿಟಿಷರ ಆಡಳಿತದಲ್ಲಿ ಇದ್ದೇವೆನೋ ಎನ್ನುವ ಭಾವನೆ ಬರುತ್ತಿದೆ. ಲಗಾನ್ ಸಿನಿಮಾದ ಸಂಭಾಷಣೆ ತೀನ್ ಗುನಾ ಲಗಾನ್ ಲಗೇಗಾ ಈ ಸಂದರ್ಭದಲ್ಲಿ ನೆನಪಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ವಾಹನಗಳ ಪಾರ್ಕಿಂಗ್ …

Read More »

ಡಿ. 7ರಿಂದ 15ರವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಬೆಂಗಳೂರು, ಡಿ.6- ವಿಧಾನಸೌಧದಲ್ಲಿ ನಡೆಯುವ ಅಧಿವೇಶನದ ಸಂಬಂಧ ಡಿ. 7ರಿಂದ 15ರವರೆಗೆ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ವಿಧಿಸಲಾಗಿದೆ. ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ನಡೆಯಲಿದ್ದು, ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ ಸತ್ಯಾಗ್ರಹ, ವಿಧಾನಸೌಧ …

Read More »

ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು.: ಹೊರಟ್ಟಿ

ಧಾರವಾಡ: ಕಾಂಗ್ರೆಸ್ ಜೊತೆ ಕೈ ಜೋಡಿಸೋದು ಬೇಡ ಅಂತಾ ನಾವು ಹೆಚ್‍ಡಿಕೆಗೆ ಮೊದಲೇ ಹೇಳಿದ್ದೆವು. ಕೊಂಚ ತಡೆದುಕೊಳ್ಳಿ ಅಂದಿದ್ದೆವು ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಹೊರಟ್ಟಿ, ದೋಸ್ತಿ ಸರ್ಕಾರದಲ್ಲಿ ಸಿದ್ದರಾಮಯ್ಯ ಜೆಡಿಎಸ್ ಮುಗಿಸೋದು ನನ್ನ ಕೆಲಸ ಅಂದಿದ್ದರು. ಸಿದ್ದರಾಮಯ್ಯ ಹೆಚ್‍ಡಿಕೆ ಜೊತೆಯಾಗಿ ಕೂತು ಮಾತಾಡೋ ಸ್ಥಿತಿ ನಿರ್ಮಾಣವಾಗಲಿಲ್ಲ. ಇಬ್ಬರೂ ಕುಳಿತು ಮಾತನಾಡಬಹುದಿತ್ತು. ಸಮನ್ವಯತೆಯಿಂದ ಹೋಗಬೇಕಿತ್ತು ಆದರೆ ಇದು ಒತ್ತಾಯದ ಮದುವೆ ಆದಂತಾಯಿತು ಎಂದು ಹೇಳಿದರು. …

Read More »

ಡಿ.7ರ ವಾಟಾಳ್ ಸಭೆಯಲ್ಲಿ ಮುಂದಿನ ಹೋರಾಟದ ನಿರ್ಧಾರ: ಪ್ರವೀಣ್ ಶೆಟ್ಟಿ

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು …

Read More »

ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್

ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ  ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಖಾಸಗಿ  ಹೋಟೆಲ್ ನಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಗ್ರಾಮ ಪಂಚಾಯಿತಿ  ಚುನಾವಣೆ ದೃಷ್ಠಿಯಿಂದ  ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ  ಗ್ರಾಮ ಸ್ವರಾಜ್ಯ  ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ  ಸ್ಪರ್ಧಿಸಲು  ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು.  …

Read More »

ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರ ಸಹವಾಸ ಮಾಡಿ ನಾವಿಂದು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಅವರ ಪ್ರೀ ಪ್ಲ್ಯಾನ್ ಟ್ರ್ಯಾಪ್ ನಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅದೆಲ್ಲ ಮುಗಿದ ಹೋದ …

Read More »

ಉತ್ತರ ಕರ್ನಾಟಕ   ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ :ಡಿ.ಕೆ. ಶಿ

ಬೆಳಗಾವಿ:  ಉತ್ತರ ಕರ್ನಾಟಕ   ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ  ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೀಕರ ಪ್ರವಾಹದಿಂದ ಈ ಭಾಗದ ಜನ  ಮನೆ, ಆಸ್ತಿ ಪಾಸ್ತಿ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.  ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ.  ಜನರ ಸಮಸ್ಯೆ ಆಲಿಸಲು ಸುವರ್ಣಸೌಧ ನಿರ್ಮಿಸಲಾಗಿದೆ.  ಆದ್ರೆ  ಅಧಿವೇಶನದಲ್ಲಿ ಕರೆಯದೇ ಬಿಜೆಪಿ ಕಾರ್ಯ ಕಾರಣಿ ಸಭೆ ಬೆಳಗಾವಿಯಲ್ಲಿ …

Read More »

ಸರ್ಕಾರ ಬೀಳಿಸುವ ಶಕ್ತಿ ಇರುವವರಿಗೆ ಜಿಲ್ಲೆ ಗೋಕಾಕ ಮಾಡುವುದು ಯಾವ ದೊಡ್ಡ ವಿಷಯ…:ಅಶೋಕ್ ಪೂಜಾರಿ

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ  ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ.   ಗೋಕಾಕ ಮತ್ತು ಚಿಕ್ಕೋಡಿ …

Read More »

ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …

Read More »