Breaking News

ಜಿಲ್ಲೆ

ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ

  ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಕೇಂದ್ರದ ಮಧ್ಯಸ್ಥಿಕೆ ಬೇಡ – ರಮೇಶ ಜಾರಕಿಹೊಳಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಗೋಕಾಕ: ಮೇಕೆದಾಟು ಸಮಾನಾಂತರ ಆಣೆಕಟ್ಟು ಯೋಜನೆಗೆ ಬೇಕಿರುವ ಕೇಂದ್ರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ …

Read More »

ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಧಾರವಾಡ: ಜಿಪಂ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎಂ.ಪಂಚಾಕ್ಷರಿ ಈ ಆದೇಶ ಹೊರಡಿಸಿದ್ದಾರೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಸಿಬಿಐ …

Read More »

ಸಹಕಾರಿ ಬ್ಯಾಂಕ್‍ಗಳ ಮೂಲಕ ರೈತರಿಗೆ ಹೆಚ್ಚು ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ, ನ.18: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‍ಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು …

Read More »

ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ

ಬೆಂಗಳೂರು: ಮಹಿಳೆಯೊಬ್ಬಳು ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ ಮಾಡಿದ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಸುಂದರೇಶನ್ ಎಂಬ ಯುವಕ ಆನ್‍ಲೈನ್ ಆ್ಯಪ್ ಮೂಲಕ ಕಾಲ್ ಗರ್ಲ್ ಬೇಕೆಂದು ಬುಕ್ ಮಾಡಿದ್ದಾನೆ. ಹೀಗಾಗಿ ಮಹಿಳೆಯೊಬ್ಬಳು ಕಾಲ್ ಗರ್ಲ್ ಆಗಿ ಯುವಕನ ಮನೆಗೆ ಬಂದಿದ್ದಾಳೆ. ಅಲ್ಲದೆ ಯುವಕನಿಂದ 10 ಸಾವಿರ ಗೂಗಲ್ ಪೇ ಮಾಡಿಸಿಕೊಂಡಿದ್ದಾಳೆ. ಇತ್ತ ಸಮಯ ಕಳೆಯುತ್ತಿದ್ದಂತೆ ನಾನು ಎನ್‍ಜಿಒ …

Read More »

ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ

ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ. ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು …

Read More »

ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Read More »

ಅಜಿತ್ ಪವಾರ್ ಹೇಳಿಕೆ ಖಂಡಿಸಿ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ

ಬೆಳಗಾವಿ, ನ.18- ರಾಜ್ಯ ಸರಕಾರ ಮರಾಠಿಗರ ಓಲೈಕೆಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 50 ಕೋಟಿ ರೂ. ಮೀಸಲಿಟ್ಟಿರುವ ಬೆನ್ನಲೆ ಕಾರವಾರ, ಬೆಳಗಾವಿ, ಖಾನಾಪುರ, ನಿಪ್ಪಾಣಿ ಮಹಾರಾಷ್ಟ್ರದ್ದು ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಒಂದು ಭಾಗ ಎಂದು ಬಾಳಾಸಾಹೇಬ್ ಠಾಕ್ರೆ ಅವರ ಕನಸಾಗಿತ್ತು. ಠಾಕ್ರೆ ಕನಸು ನನಸು ಮಾಡಲು ಪಣ ತೋಡಬೇಕು. ಈ ಭಾಗದಲ್ಲಿ …

Read More »

ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.

ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. …

Read More »

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ

ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆಕುಟುಂಬ ಸದಸ್ಯರಿಗೆ ಬಿಜೆಪಿ ನಾಯಕರು ಮಣೆ ಹಾಕುವುದು ವಿರಳ……..?

ಬೆಂಗಳೂರು, ನ.17- ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಆದರೆ, ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ಮಾತ್ರ ವಿಸ್ತರಿಸುತ್ತಲೇ ಇದೆ. ಮತ್ತೊಂದೆಡೆ ಬೆಳಗಾವಿ ಉಪ ಸಮರದ ಟಿಕೆಟ್ ಅಂಗಡಿ ಕುಟುಂಬಕ್ಕೋ? ರಾಜಕೀಯ ವಂಚಿತರಿಗೋ? ಅಥವಾ ಹೊಸಬರಿಗೋ ಎಂಬುವುದೂ ಜಿಜ್ಞಾಸೆಗೆ ಕಾರಣವಾಗಿದೆ. ಬೆಳಗಾವಿ ಕ್ಷೇತ್ರದಿಂದ ನಾಲ್ಕು ಸಲ ಗೆದ್ದಿದ್ದ ಅವರು, ಪ್ರಸಕ್ತ ಮೋದಿ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿದ್ದರು. …

Read More »