Breaking News

ಜಿಲ್ಲೆ

ಬಿಜೆಪಿಯಲ್ಲಿ ಯಾರೂ ಶಾಸಕರಾಗಬೇಕು. ಲೋಕಸಭಾ ಸದಸ್ಯರಾಗಬೇಕು ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು

ಚಿಕ್ಕೋಡಿ : ಸುರೇಶ ಅಂಗಡಿ ಕುಟುಂಬದವರಿಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಿದ್ರೆ , ನಾನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿಕೆಗೆ ವಿಧಾನ ಪರಿಷತ್ ಮುಖ್ಯಸಚೇತಕ  ಮಹಾಂತೇಶ ಕವಟಗಿಮಠ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಿರಿಯರು. ಅವರು ತಮ್ಮ ಪಕ್ಷದಲ್ಲಿ ಯಾರು  ಅಭ್ಯರ್ಥಿಯಾಗಬೇಕು. ಯಾರನ್ನು ಲೋಕಸಭಾ ಸದಸ್ಯರಾಗಬೇಕೆಂದು ಹೇಳಿದ್ದರೇ ಅದನ್ನು ಸ್ವಾಗತಿಸುತ್ತಿದ್ದೇ. ಆದರೆ ಬಿಜೆಪಿಯಲ್ಲಿ …

Read More »

1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಜಲಸಂಗ್ರಹಾಲಯ ಉದ್ಘಾಟನೆ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಗ್ರಾಮದ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಷೇತ್ರದ ಪ್ರಜೆಗಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಲಭ್ಯವಾಗಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಸುಳಗಾಂವ, ಆಡಿ, ಮತ್ತಿವಾಡೆ ಗ್ರಾಮದಲ್ಲಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ …

Read More »

ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್

ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …

Read More »

ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ

ಬೆಂಗಳೂರು: ಬೈ ಎಲೆಕ್ಷನ್ ಜೊತೆಗೆ ಎಂಎಲ್‍ಸಿ ಚುನಾವಣೆಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ 7,335 ಮತ ಪಡೆದ್ರೆ ಜೆಡಿಎಸ್‍ನ ಎಪಿ ರಂಗನಾಥ್ 5,107 ಮತ ಗಳಿಸಿದರು. ಆದ್ರೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಪೀಟರ್ ಕೇವಲ 782 ಮತ ಗಳಿಸಲಷ್ಟೇ ಶಕ್ತರಾದರು. ಗೆಲುವಿನ ಹಿನ್ನೆಲೆಯಲ್ಲಿ ಪುಟ್ಟಣ್ಣರನ್ನು ಹೊತ್ತು ಅಭಿಮಾನಿಗಳು ಸಂಭ್ರಮಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ …

Read More »

ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ.‌ ವೀಕ್ ಕ್ಯಾಂಡಿಡೇಟ್ ಹಾಕಿದ್ದಾರೆ : ಸಿದ್ದರಾಮಯ್ಯ

ಬಾಗಲಕೋಟೆ : ಆರ್.ಆರ್.ನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬದಾಮಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, ಆರ್, ಆರ್ ನಗರದಲ್ಲಿ ಒಳ್ಳೆಯ ಫೈಟ್​ ಕೊಡ್ತೇವೆಂದು ಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಸರ್ಕಾರದಲ್ಲಿ ಇರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. …

Read More »

ಅಭಿವೃದ್ಧಿಯೇ ನಮ್ಮ ಮೂಲಮಂತ್ರ ಸಚಿವೆ – ಶಶಿಕಲಾ ಜೊಲ್ಲೆ

ಚಿಕ್ಕೋಡಿ- ನಿಪ್ಪಾಣಿ ನಗರಸಭೆ ಕಾರ್ಯಾಲಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಜಯವಂತ ಬಾಟಲೆ ಹಾಗೂ ಉಪಾಧ್ಯಕ್ಷರಾದ  ನೀತಾ ಬಾಗಡಿ ಅವರ ಪದಗ್ರಹಣ ಸಮಾರಂಭ ನಡೆಯಿತು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ  ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ ಭಾಗವಹಿಸಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು. …

Read More »

ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ.

ಬೆಂಗಳೂರು  – ಕರ್ನಾಟಕ ವಿಧಾನಸಭೆಯ ಎಸ್ಟಿಮೇಟ್ ಕಮಿಟಿ (ಅಂದಾಜುಗಳ ಸಮಿತಿ) ಅಧ್ಯಕ್ಷರನ್ನಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರನ್ನು ನೇಮಕಮಾಡಲಾಗಿದೆ. ಒಟ್ಟೂ 17 ಜನರ ಸಮಿತಿಯನ್ನು ನೇಮಕ ಮಾಡಿ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ. ಎಸ್.ಎ.ರವೀಂದ್ರನಾಥ, ದುರ್ಯೋಧನ ಐಹೊಳೆ, ವೀರಣ್ಣ ಚರಂತಿಮಠ, ಶಿವರಾಜ ಪಾಟೀಲ, ಹಾಲಪ್ಪ ಆಚಾರ, ಅಮೃತ ದೇಸಾಯಿ, ಮಹಾಂತೇಶ ದೊಡ್ಡಗೌಡರ್, ಸುನೀಲ ನಾಯ್ಕ, ಅಮರೇಗೌಡ ಬಯ್ಯಾಪುರ, ಶರಣ ಬಸಪ್ಪ ದರ್ಶನಾಪುರ, …

Read More »

ಅಧಿಕಾರ, ಹಣದ ಹೊಳೆ ಹರಿಸಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು. ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು …

Read More »