ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಕಾಲ ಕಳೆದಿದ್ದಾರೆ. ಸಚಿವರೊಂದಿಗೆ ಕಾಲ ಕಳೆದಿರು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಬಿ.ಸಿ.ಪಾಟೀಲ್ ಅವರ ಅಧೀಕೃತ ನಿವಾಸಕ್ಕೆ ಭೇಟಿ ನೀಡಿದ್ದ ಡಿ ಬಾಸ್ ಸ್ವಲ್ಪ ಹೊತ್ತು ಹರಟೆ ಹೊಡೆದು ಕಾಲ ಕಳೆದಿದ್ದಾರೆ. ಈ ವೇಳೆ ಬಿ.ಸಿ.ಪಾಟೀಲ್ ಮಾತ್ರವಲ್ಲದೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಾಣಿಸಿಕೊಂಡಿದ್ದು, ಇಬ್ಬರು ಸಚಿವರ ಜೊತೆ ದರ್ಶನ್ ಮಾತುಕತೆ …
Read More »ಬೆಂಗಳೂರಿನಲ್ಲಿ ತಿಂಗಳು ಕಾಲ ಫಲಾನುಭವಿಗಳ ವಸತಿ ಸೌಕರ್ಯಕ್ಕಾಗಿ ಸತತವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್: ಬಾಲಚಂದ್ರ ಜಾರಕಿಹೊಳಿದ
ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ
ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I. K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು. ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ …
Read More »ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಭಗ್ನವಾಗಿದೆ.
ರಾಮದುರ್ಗ– ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಮೂರ್ತಿ ಭಗ್ನವಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಬಸವಣ್ಣನವರ ಮೂರ್ತಿಯ ಕೈಯನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಸುದ್ದಿ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲಿಸಿದರು. ಒಂದು ವಾರದ ಒಳಗಾಗಿ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಒಂದು …
Read More »ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿದರು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಟ್ಯಾಬ್ ವಿತರಣೆ
ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಸಹಯೋಗದ ‘ಜ್ಞಾನದೀವಿಗೆ’ ಕಾರ್ಯಕ್ರಮದ ವತಿಯಿಂದ ವಿವಿಧ ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು. ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್ ರಂಗನಾಥ್, ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆಯ ಗವರ್ನರ್ ಕೇಶವಮೂರ್ತಿ, ಆರೋಗ್ಯ ಸಚಿವ ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಟಿವಿ ಸಿಇಒ ಅರುಣ್ ಕುಮಾರ್, ಸಿಒಒ ಸಿ.ಕೆ ಹರೀಶ್ ಮಕ್ಕಳಿಗೆ ಟ್ಯಾಬ್ …
Read More »ನಾನು 100 ಟ್ಯಾಬ್ ನೀಡ್ತೀನಿ, ಸಾಧ್ಯವಾದ್ರೆ ನೀವೂ ಟ್ಯಾಬ್ ನೀಡಿ- ಶಿವಣ್ಣ ಮನವಿ
ಬೆಂಗಳೂರು: ನಿಮ್ಮ ಪಬ್ಲಿಕ್ ಟಿವಿ ಹಾಗೂ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ‘ಜ್ಞಾನ ದೀವಿಗೆ’ ಕಾರ್ಯಕ್ರಮಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ನಟ ಶಿವರಾಜ್ ಕುಮಾರ್ ಅವರು ಕೈ ಜೋಡಿಸಿ, 100 ಟ್ಯಾಬ್‍ಗಳನ್ನು ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಶಕ್ತಿ ಇರುವವರು ಒಂದು ಟ್ಯಾಬ್ ಆದರೂ ನೀಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜ್ಞಾನ ದೀವಿಗೆ’ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, …
Read More »ಬಸನಗೌಡ ತುರವಿಹಾಳ ಕಾಂಗ್ರೆಸ್‍ಗೆ ಸೇರ್ಪಡೆ- ರಂಗೇರಿದ ಮಸ್ಕಿ ಉಪಚುನಾವಣಾ ಕಣ
ರಾಯಚೂರು: ಮಸ್ಕಿ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಸನಗೌಡ ತುರವಿಹಾಳ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಅಘೋಷಿತ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪಕ್ಷಾಂತರದಿಂದ ತೆರವಾಗಿರುವ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ರಾಜಕೀಯ ಚುರುಕುಗೊಂಡಿದೆ. ಉಪ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ …
Read More »ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ.
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಅಂಗೀಕಾರ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತ ಸಂಸ್ಕøತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿಯರವನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿತ್ತು. ಈ ಕಾರಣದಿಂದ ಸಿಟಿ ರವಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿದೆ. ಹೀಗಾಗಿ …
Read More »ಹಸಿರು ಪಟಾಕಿಗೆ ಗ್ರೀನ್ ಸಿಗ್ನಲ್
ಬೆಂಗಳೂರು,ನ.7- ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದೀಪಾವಳಿ ಹಬ್ಬದಲ್ಲಿ ಹೆಚ್ಚು ವಾಯುಮಾಲಿನ್ಯ ಉಂಟು ಮಾಡದ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡುವಂತೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಪ್ರಕಟಣೆ ಹೊರಡಿಸಿದೆ. ಈ ಸಂಬಂಧ ಮಾರ್ಗಸೂಚಿ ಒಳಗೊಂಡ ವಿವರವಾದ ಅಧಿಕೃತ ಆದೇಶ ಇಂದು ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ. ಈ …
Read More »ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ:ಎಂ.ಬಿ. ಪಾಟೀಲ
ವಿಜಯಪುರ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸತ್ಯ ಏನು ಎಂಬುವುದು ಜನರಿಗೆ ಗೊತ್ತಾಗಲಿದೆ. ವಿನಯ ಅವರು ಸಮಸ್ಯೆಯನ್ನು ಸಮರ್ಥವಾಗಿ ಎದುರಿಸುತ್ತಾರೆ. ನಿರಪರಾಧಿಯಾಗಿ ಹೊರ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸರು. ಕೇಂದ್ರ ಸರ್ಕಾರ ಸರ್ಕಾರ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂತಲೂ ವಾಗ್ದಾಳಿ ನಡೆಸಿದ ಅವರಿ, …
Read More »
Laxmi News 24×7