Breaking News

ಜಿಲ್ಲೆ

ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಬಿಸುವ ಸಾಧ್ಯತೆ

ಬೆಂಗಳೂರು : ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ …

Read More »

ಯೋಧನ ಕೇಸರಿ ಮಾಸ್ಕ್ ಬದಲಿಸಲು ಅನುಕೂಲ : ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ನಡೆಯುತ್ತಿರುವಂತ ಮತದಾನದ ವೇಳೆ, ಮತಗಟ್ಟೆಯ ಕೇಂದ್ರದಲ್ಲಿ ಅರೆ ಸೇನಾಪಡೆಯ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೀಗೆ ನಿಯೋಜನೆಗೊಂಡಿದ್ದಂತ ಯೋಧರೊಬ್ಬರು ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದರು. ಇದನ್ನು ಮತ ಚಲಾವಣೆಗೆ ತೆರಳುವ ವೇಳೆ ಗಮನಿಸಿದಂತ ಯುವಕನೋರ್ವ ತರಾಟೆಗೆ ತೆಗೆದುಕೊಂಡನು. ತಾವು ಕೇಸರಿ ಮಾಸ್ಕ್ ಧರಿಸಿದ್ದೀರಿ. ದಯವಿಟ್ಟು ಕೇಸರಿ ಮಾಸ್ಕ್ ಬದಲಾಯಿಸಿ, ಬೇರೆಯ ಮಾಸ್ಕ್ ಧರಿಸುವಂತೆ ಸೂಚಿಸಿದರು. ಆದ್ರೇ ಅರೆ …

Read More »

ಹಂದಿಗನೂರು ಗ್ರಾಪಂ. ನೂತನ ಕಟ್ಟಡ ಕಾಮಗಾರಿಗೆ ಚಾಲನೆ

ಬೆಳಗಾವಿ : ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಂದಿಗನೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಗೌಡ ಪಾಟೀಲ ಇಂದು ಭೂಮಿ ಪೂಜೆ ನೆರವೇರಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಯತ್ನದಿಂದ ರಾಜೀವ ಗಾಂಧಿ ಆವಾಸ್ ಯೋಜನೆಯಡಿ ಬಿಡುಗಡೆಗೊಂಡ 28 ಲಕ್ಷ ರೂ. ಅನುದಾನದಲ್ಲಿ ಮಂಗಳವಾರಕಾಮಗಾರಿಗೆ ಚಾಲನೆ ನೀಡಿದರು. ಇದೇ ವೇಳೆ ಮಾಳೇನಟ್ಟಿ ಗ್ರಾಮದಲ್ಲಿ 5 ಲಕ್ಷ ರೂ ವೆಚ್ಚದಲ್ಲಿ …

Read More »

ಹುಬ್ಬಳ್ಳಿ: ಇಬ್ಬರು ಯುವಕರಿಗೆ ಚಾಕು ಇರಿತ

ಹುಬ್ಬಳ್ಳಿ : ನಗರದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವಕರಿಗೆ ಚಾಕು ಇರಿದು ಗಾಯಗೊಳಿಸಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಶೋಯೆಬ್‌ ಅಬ್ಬನ್ನವರ (24) ಎಂಬುವವರಿಗೆ ಗಾಯಗೊಳಿಸಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೇಶ್ವಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಧವ ನಗರದಲ್ಲಿ ಮತ್ತೊಂದು ಚಾಕು ಇರಿತ ಘಟನೆ ನಡೆದಿದೆ. ಹಳೆ ವೈಷಮ್ಯದ ಕಾರಣಕ್ಕೆ ಈ‌ ಘಟನೆಗಳು ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಬಂಧನಕ್ಕೆ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …

Read More »

ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ

ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …

Read More »

9 ಲಕ್ಷ ಮೌಲ್ಯದ, 25 ಬೈಕ್ ಕದ್ದ ಚಾಲಾಕಿ ಕಳ್ಳ

ಯಾದಗಿರಿ: ಇಷ್ಟು ದಿನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಚಾಲಾಕಿ ಕಳ್ಳನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಪಕ್ಕಾ ಪ್ಲಾನ್ ಮಾಡಿ ಬಲೆ ಬೀಸಿದ್ದು, ಭರ್ಜರಿ ಬೇಟೆಯಾಡಿದ್ದಾರೆ. ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೈಕ್ ಕಳ್ಳತನವಾಗುತ್ತಿದ್ದವು. ಇದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಬೈಕ್ ಕಳ್ಳನನ್ನು ಹಡೆಮುರಿ ಕಟ್ಟಿದ್ದಾರೆ. ಪೊಲೀಸರ ಈ ಕಾರ್ಯದಿಂದ ಹುಸಣಸಗಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಜಾಲದ ರೂವಾರಿ ಮೌನೇಶ್(27) ಈಗ ಕಂಬಿ ಏಣಿಸುತ್ತಿದ್ದಾನೆ. ಬಂಧಿತನಿಂದ 9 ಲಕ್ಷಕ್ಕೂ …

Read More »

ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್‌ ಧರಿಸಬೇಕಿಲ್ಲ

ಬೆಂಗಳೂರು: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂಬ ಆದೇಶವನ್ನು ಬಿಬಿಎಂಪಿ ವಾಪಸ್‌ ಪಡೆದಿದೆ. ಈ ಹಿಂದೆ ಕಿಟಿಕಿ ಮುಚ್ಚಿದ ಕಾರಿನಲ್ಲಿ ಒಬ್ಬರೆ ಪ್ರಯಾಣಿಸುತ್ತಿದ್ದಾಗ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಆದೇಶ ಪ್ರಕಟಿಸಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಸಾರ್ವಜನಿಕರ ಆಕ್ರೋಶದ ನಂತರ ತಜ್ಞರ ಸಲಹೆ ಕೋರಿ ಆರೋಗ್ಯ ಇಲಾಖೆಗೆ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದರು. ತಜ್ಞರ ಸಲಹೆಯಂತೆ ಕಾರಿನಲ್ಲಿ ಮುಚ್ಚಲ್ಪಟ್ಟ ಕಿಟಕಿಯೊಂದಿಗೆ …

Read More »

ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಭರ್ತಿ

ಬೆಂಗಳೂರು,ನ.2- ಈ ಬಾರಿ ಮುಂಗಾರು ಬೆಳೆ ವಾಡಿಕೆಗಿಂತ ಹೆಚ್ಚಾದ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದಲ್ಲದೆ ನೆರೆಯ ರಾಜ್ಯಗಳಿಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರಿನ ಹರಿಸಲಾಗಿದೆ. ಕೃಷ್ಣ ಕೊಳ್ಳದ ಜಲಾಶಯಗಳು ಭರ್ತಿ ಯಾಗಿದ್ದು, ನೆರೆಯ ಆಂಧ್ರಪ್ರದೇಶಕ್ಕೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಿಡಲಾಗಿದೆ. ಅದೇ ರೀತಿ ಕಾವೇರಿ ಕೊಳ್ಳದಿಂದಲೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನೇ ಬಿಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕಾವೇರಿ ಜಲಾನಯನ ಭಾಗದಿಂದ …

Read More »

ಸಿಎಂ ಅಸಹಾಯಕ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ: ಶಾಸಕ ಶಿವಲಿಂಗೇಗೌಡ

ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ …

Read More »