Breaking News

ಜಿಲ್ಲೆ

ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ

ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ.         ಚಂದ್ರಶೇಖರ ಹುಚ್ಚನ್ನವರ್‌ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.

Read More »

ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ.

ತುಮಕೂರು: ಶಿರಾ ಉಪಚುನಾವಣಾ ಕಣದಲ್ಲಿ ಮದಲೂರು ಕೆರೆಗೆ ನೀರು ಹರಿಸುವ ವಿಚಾರದಲ್ಲಿ ಮೂರು ಪಕ್ಷಗಳಿಂದ ಆರೋಪ, ಪ್ರತ್ಯಾರೋಪಗಳ ಸುರಿಮಳೆಯೇ ಬರುತ್ತಿದೆ. ಸುಮಾರು 520 ಎಕರೆ ಪ್ರದೇಶದಲ್ಲಿರುವ ಮದಲೂರು ಕೆರೆಗೆ ಹೇಮಾವತಿ ನದಿಯಿಂದ ಈ ಹಿಂದೆ ನೀರು ಹರಿಸಲಾಗಿತ್ತು. ಆದರೆ, ಹೇಮಾವತಿ ನದಿ ನೀರು ಕಾವೇರಿ ಕೊಳ್ಳದ ವ್ಯಾಪ್ತಿ ಎಂಬ ಕಾರಣಕ್ಕೆ ಅದನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಇದೀಗ, ಭದ್ರಾ ಮೇಲ್ದಂಡೆಯಿಂದ ನೀರು ಹರಿಸಲು ಯೋಜನೆ ರೂಪಿಸಲಾಗ್ತಿದೆ. ಈ ಹೆಗ್ಗಳಿಕೆಯನ್ನು ಕಾಂಗ್ರೆಸ್, ಜೆಡಿಎಸ್ ಹಾಗೂ …

Read More »

ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ …

Read More »

ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ : 3 ಜನರ ಆರೋಪಿಗಳು ಅರೆಸ್ಟ್

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾದ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಕೊಲೆಯಾದ ಯುವಕನ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಚನ್ನರಾಯಪಟ್ಟಣ ತಾಲ್ಲೂಕಿನ ಲಕ್ಷ್ಮೀಪುರದ ಗ್ರಾಮದ ದಿನೇಶ್‌ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಸಾಣೇನಹಳ್ಳಿಯ ದಿನೇಶನ ಪತ್ನಿ ಅಭಿಲಾಷ (22), ಆಕೆಯ ತಂದೆ ಮಂಜುನಾಥ (55), ಸಹೋದರ ಬಸವರಾಜು (21) ಎಂಬುವವರನ್ನು ಬಂಧಿಸಲಾಗಿದೆ. ಸುಟ್ಟ ಕಾರಿನ …

Read More »

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ

ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ. ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ …

Read More »

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ. ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.

ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಖಾಸಗಿ ಭತ್ತ …

Read More »

ರಾಜ್ಯ ರೈಲ್ವೆ ಖಾತೆ ತೆರವಾಗಿದ್ದು, ಈ ಖಾತೆ ಮೇಲೆ ರಾಜ್ಯದ ಸಂಸದರು ಕಣ್ಣಿಟ್ಟಿದ್ದಾರೆ

ಬೆಳಗಾವಿ:  ಸುರೇಶ್ ಅಂಗಡಿ ಅವರು ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ವೀರಶೈವ-ಲಿಂಗಾಯತ ಸಮುದಾಯದ ನಾಯಕರಾಗಿದ್ದರು. ಹೀಗಾಗಿ ಅದೇ ಸಮುದಾಯದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ನಡುವೆ ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ನಾಯಕರಾಗಿರುವ ಸಂಸದ ಪಿ.ಸಿ. ಗದ್ದೀಗೌಡರ್, ಸಂಸದ ಶಿವಕುಮಾರ್ ಉದಾಸಿ, ಸಂಸದ ಕರಡಿ ಸಂಗಣ್ಣ, ಸಂಸದ ಜಿ.ಎಸ್.ಬಸವರಾಜ್ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರಗೆ ಅವರು …

Read More »

ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ

ಬೆಂಗಳೂರು : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸ್ಯಾಂಡಲ್ ವುಡ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಅನೇಕ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಗುರುವಾರ (ಅ.29) ನಡೆದ ಮದುವೆ ಸಮಾರಂಭದಲ್ಲಿ ನಟ ಚಂದು ಗೆಳತಿ ಶಾಲಿನಿ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಚಂದು ಮತ್ತು ಶಾಲಿನಿ ಸರಳವಾಗಿ, ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ಇಬ್ಬರ …

Read More »

ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ

ಬೆಳಗಾವಿ : ಉಮೇಶ ಕತ್ತಿ ಮಂತ್ರಿನೇ ಆಗಲಿಲ್ಲ. ಇನ್ನು ಮುಖ್ಯಮಂತ್ರಿ ಹೇಗೆ ಆಗುತ್ತಾರೆ ಎಂದು ಮಾಜಿ ಸಂಸದ ರಮೇಶ ಕತ್ತಿ ಅವರು ಪ್ರಶ್ನಿಸಿದ್ದಾರೆ. ಗುರು​ವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ ಕತ್ತಿ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬುದು ಈ ಭಾಗದ ಜನತೆಯ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ. ಭೀಕರ ಪ್ರವಾಹ: ‘ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್‌’ ಮುಖ್ಯಮಂತ್ರಿ ಸ್ಥಾನಕ್ಕೆ ಉಮೇಶ ಕತ್ತಿ ಹೆಸರು ಮುಂಚೂಣಿಯಲ್ಲಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ …

Read More »