ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್ ದೊರೆತಿದೆ. RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್‌ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ. ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್ ಪ್ರಕರಣವಿದ್ದು …
Read More »ಮಾದಕ’ ನಟಿ ಸಂಜನಾ ಜೈಲಿನಲ್ಲಿ ಬರ್ತ್ಡೇ ಅಚರಿಸಿಕೊಳ್ಳುತ್ತಿಲ್ಲ, ಯಾಕೆ ಗೊತ್ತಾ?
ಆನೇಕಲ್: ಸ್ಯಾಂಡಲ್ವುಡ್ ಡ್ರಸ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ …
Read More »ಧಾರವಾಡ ಉಸ್ತುವಾರಿ ಸಚಿವರೇ ಹೇಳಿದ್ರೂ ನಿಲ್ಲದ ಖಾಕಿ ಒಳಜಗಳ!
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ರೂ ಉನ್ನತ ಖಾಕಿ ಅಧಿಕಾರಿಗಳ ನಡುವಣ ಒಳಜಗಳ ನಿಲ್ಲುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಒಳಜಗಳ ಮುಂದುವರಿದಿದೆ. ಮತ್ತೆ ಡಿಸಿಪಿಗೆ ನೋಟಿಸ್ ನೀಡಿದ ಕಮಿಷನರ್ ದಿಲೀಪ್! ಭ್ರಷ್ಟಾಚಾರ ಆರೋಪ ಮಾಡಿ ಯುಟರ್ನ್ ತೆಗೆದುಕೊಂಡಿದ್ಯಾಕೆ? ನೀವು ಮತ್ತೋರ್ವ ಡಿಸಿಪಿ ವಿರುದ್ಧವೂ ಆರೋಪ ಮಾಡಿದ್ದೀರಿ. ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಆರೋಪಿಸಿ ಸುಮ್ಮನಿದ್ದೀರಿ. ಹಾಗಾಗಿ, ಆ ಬಗ್ಗೆ ವರದಿ ನೀಡುವಂತೆ ನಿಮಗೆ …
Read More »ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ
ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲಕ್ಕೆ ಕಸರತ್ತು ನಡೆದಿದೆಯಾ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಚಿರು ಮತ್ತೆ ಉದಯಿಸುತ್ತಿದ್ದಾರೆ,: ಚಿರಂಜೀವಿ ಸರ್ಜಾ ಪತ್ನಿ ಮೇಘನಾ
ಬೆಂಗಳೂರು: ಇತ್ತೀಚೆಗಷ್ಟೆ ದಿವಗಂತ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನಡೆದಿದೆ. ಇದರ ಬೆನ್ನಲ್ಲೆ ನಟಿ ಮೇಘನಾ ಚಿರು ಅಭಿಮಾನಿಗಳಿಗೆ ಗುಡ್‍ನ್ಯೂಸ್ ನೀಡಿದ್ದಾರೆ. ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ಶಿವಾರ್ಜುನ. ಈ ಸಿನಿಮಾ ಇದೇ ಅಕ್ಟೋಬರ್ 16ರಂದು ಶುಕ್ರವಾರ ಮತ್ತೆ ಬಿಡುಗಡೆಯಾಗುತ್ತಿದೆ. ಈ ಸಿಹಿಸುದ್ದಿಯನ್ನು ಚಿರು ಪತ್ನಿ ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ …
Read More »ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು: ಬೃಹತ್ ಕಂಟೈನರ್ ಲಾರಿ ಪಲ್ಟಿಯಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಎಡೆಹಳ್ಳಿ ಸಮೀಪ ಬೃಹತ್ ಕಂಟೈನರ್ ಲಾರಿಯೊಂದು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಸುಮಾರು 5 ಗಂಟೆ ಹೊತ್ತಿಗೆ ಕಂಟೈನರ್ ಪಲ್ಟಿಯಾಗಿದ್ದು, ಬರೋಬ್ಬರಿ 20 ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಇದರಿಂದಾಗಿ ನೂರಾರು …
Read More »ಹಾಸನಾಂಬೆಯ ದರ್ಶನಕ್ಕೆ ಜನ-ಪ್ರತಿನಿಧಿಗಳ ಇಬ್ಬಗೆ ನೀತಿ ಹಾಸನ ಜನರ ಕೋಪಕ್ಕೆ ಕಾರಣವಾಗಿದೆ.
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ವರ್ಷ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿಲ್ಲ. ಆದರೆ ಈ ವಿಷಯದಲ್ಲಿ ಜನ-ಪ್ರತಿನಿಧಿಗಳ ಇಬ್ಬಗೆ ನೀತಿ ಹಾಸನ ಜನರ ಕೋಪಕ್ಕೆ ಕಾರಣವಾಗಿದೆ. ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿರುವ ಹಾಸನಾಂಬ ದೇವಾಲಯದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವುದು ಬಹಳ …
Read More »ಬೈ ಎಲೆಕ್ಷನ್ ಗಳು ಬಂದಂತೆ ತಮಗೆ ಬೇಕಾದಂತೆ ನಿಯಮ ಗಳನ್ನೂ ಬದಲಾಯಿಸುತ್ತಿದೆ ಕೇಂದ್ರ ಸರ್ಕಾರ….!
ನವದೆಹಲಿ: ಕೊರೊನಾ ಸಮಯದಲ್ಲಿ ನಡೆಯುತ್ತಿರುವ ಬೈ ಎಲೆಕ್ಷನ್ ವೇಳೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಕೇಂದ್ರ ಗೃಹ ಸಚಿವಾಲಯ ಬಿಗ್ ರಿಲೀಫ್ ಕೊಟ್ಟಿದೆ. ಬಿಹಾರ ಚುನಾವಣೆ ಮತ್ತು ದೇಶದ ಹಲವೆಡೆ ನಡೆಯುತ್ತಿರುವ ಉಪಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಅನ್‍ಲಾಕ್ ನಿಯಮಗಳನ್ನು ಮತ್ತಷ್ಟು ಸಡಿಲ ಮಾಡಿ ಕೇಂದ್ರ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಮಾರ್ಗಸೂಚಿ ಅನ್ವಯ ಈ ಮೊದಲು ಯಾವುದೇ ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಮಂದಿ ಪಾಲ್ಗೊಳ್ಳುವಂತೆ ಇರಲಿಲ್ಲ. ಆದರೆ …
Read More »ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಬೆಂಗಳೂರು. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದ್ದಾರೆ. ಅವರ …
Read More »ಕೋವಿಡ್ ಸೋಂಕಿತರು ಸಹಾಯ ಹಸ್ತ…..
ಬೆಳಗಾವಿ: ಇಲ್ಲಿನ ಉದ್ಯಮಿಗಳು, ಗೃಹಿಣಿಯರು ಸೇರಿದಂತೆ ವಿವಿಧ ರಂಗದವರು ಒಳಗೊಂಡಿರುವ ‘ಹೆಲ್ಪ್ ಫಾರ್ ನೀಡಿ’ (ಅವಶ್ಯವಿರುವವರಿಗೆ ಸಹಾಯ) ತಂಡದವರು ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬದವರಿಗೆ ನೆರವಿನ ಹಸ್ತ ಚಾಚಿದ್ದಾರೆ. ತಂಡದಲ್ಲಿ 17 ಮಂದಿ ಇದ್ದಾರೆ. ಅವರು ಈವರೆಗೆ 258 ಮಂದಿ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಗುಣಮುಖವಾದ ಮೇಲೆ ಆಸ್ಪತ್ರೆಯಿಂದ ಮನೆಗೆ ಸಾಗಿಸಿದ್ದಾರೆ. ಸೋಂಕಿನಿಂದ ಮೃತಪಟ್ಟ 30 ಮಂದಿಯ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾರೆ. ಈ ಪೈಕಿ 7 ಶವಗಳ ಅಂತ್ಯಸಂಸ್ಕಾರವನ್ನು, ತಂಡದ …
Read More »
Laxmi News 24×7