ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. …
Read More »ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ.ಯಾವುದಕ್ಕೂ ಜಗ್ಗಲ್ಲ: ಡಿಕೆಶಿ
ಬೆಂಗಳೂರು: ಈ ರಾಜಕಾರಣಕ್ಕೆ ಡಿಕೆ ಶಿವಕುಮಾರ್ ಹೆದರುವ ಮಗ ಅಲ್ಲ. ಇದು ಸದ್ಯಕ್ಕೆ ಮುಗಿಯುವುದಿಲ್ಲ. ಚುನಾವಣೆ ನಡೆಯುವವರೆಗೂ ಇರುತ್ತದೆ ಎಂದು ಡಿಕೆಶಿ ಹೇಳಿದ್ದಾರೆ ಸಿಬಿಐ ದಾಳಿ ಬಳಿಕ ನಿವಾಸದಿಂದ ಹೊರಬಂದು ಕಾರ್ಯರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 30 ವರ್ಷಗಳಿಂದ ಇರುವ ಎಲ್ಲ ಮಂತ್ರಿಗಳು ಹರಿಶ್ಚಂದ್ರನ ಮೊಮ್ಮಕ್ಕಳು. ಈಗ ನನಗೆ ರಾಜಕೀಯವಾಗಿ ತೊಂದರೆ ನೀಡುತ್ತಿದ್ದರಲ್ಲ ಅವರೆಲ್ಲ ಚೆನ್ನಾಗಿರಲಿ ಎಂದರು.ನಾನು ನನ್ನ ಸಹೋದರ, ಕುಟುಂಬ ಮತ್ತು ಕಾಂಗ್ರೆಸ್ ಪಕ್ಷ ನಿಮ್ಮ ಅಭಿಮಾನಕ್ಕೆ ತಲೆ …
Read More »ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ
ಬೆಳಗಾವಿ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು. ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ …
Read More »ಕೆ ಕಲ್ಯಾಣ ಪತ್ನಿ ಖಾತೆಯಿಂದ ಸುಮಾರು 19 ಲಕ್ಷ 80 ಸಾವಿರ ವರ್ಗಾವಣೆ
ಬೆಳಗಾವಿ: ಕನ್ನಡ ಚಿತ್ರರಂಗದ ಗಣ್ಯರಿಗೆ ಒಂದಾದ ಮೇಲೊಂದು ಸಂಕಷ್ಟ ಎದುರಾಗುತ್ತಿದೆ. ಖ್ಯಾತ ಕನ್ನಡ ಸಾಹಿತಿ ಕೆ.ಕಲ್ಯಾಣ್ ಅವರ 14 ವರ್ಷದ ಮಧುರ ದಾಂಪತ್ಯವೀಗ ಬೀದಿಗೆ ಬಂದು ನಿಂತಿದೆ. ಇದಕ್ಕೆ ಕಾರಣವೇ ಮಾಟ-ಮಂತ್ರ ಹಾಗೂ ಮನೆ ಕೆಲಸದವಳು ಗಂಗಾ ಹಾಗೂ ಬೆಳಗಾವಿ ಗುರೂಜಿ ಶಿವಾನಂದ ವಾಲಿ ಎಂದು ಖುದ್ದು ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಕಲ್ಯಾಣ್ ಆರೋಪಿಸಿದ್ದಾರೆ. ಎಸ್‌ಪಿಬಿ ಬೆಂಗಳೂರಿಗೆ ಬಂದರೆ ತಪ್ಪದೇ ಇವರ ಮನೆಗೆ ಹೋಗುತ್ತಾರಂತೆ! ಬೆಳಗಾವಿ ಮಾಳಮಾರುತಿ ಪೊಲೀಸ್ …
Read More »57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ/ಡಿಕೆಶಿ ಬೆನ್ನಿಗೆ ನಿಲ್ಲದ ಎಚ್ ಡಿಕೆ
ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆಯ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ 57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಪ್ರಕಟಣೆ ನೀಡಿದೆ. ತಮ್ಮ ಮನೆಯಲ್ಲಿ ಯಾವುದೇ ನಗದು ಸಿಕ್ಕಿಲ್ಲ ಎಂದು ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಹೇಳುತ್ತಿರುವ ಸಂದರ್ಭದಲ್ಲೇ ಸಿಬಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. 14 ಕಡೆಗಳಲ್ಲಿ ದಾಳಿ ಮಾಡಲಾಗಿದೆ. 74.93 ಕೋಟಿ ರೂ. ಅಕ್ರಮ ಆಸ್ತಿ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದಬ ಸಿಬಿಐ ತಿಳಿಸಿದೆ.
Read More »ಮೆಳವಂಕಿ ಸೇತುವೆ ಕುಸಿತ ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಗೋಕಾಕ: ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 50 ಲಕ್ಷ ರೂ.ಗಳನ್ನು ನೀಡುವದಾಗಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಇಂದು ಬೆಳಗಿನ ಜಾವ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಹೇಳಿಕೆಯನ್ನು ನೀಡಿರುವ ಅವರು, ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ …
Read More »ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ, ಕುಗ್ಗಲ್ಲ – ಸಿಬಿಐ ದಾಳಿಗೆ ಡಿ.ಕೆ ಸುರೇಶ್ ಪ್ರತಿಕ್ರಿಯೆ
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು ಎಂದು ಸಿಬಿಐ ದಾಳಿಗೆ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ. ಡಿ.ಕೆ.ಸುರೇಶ್ ಟ್ವೀಟ್ ಮಾಡುವ ಮೂಲಕ ಸಿಬಿಐ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. “ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ” …
Read More »ಆರ್.ಆರ್.ನಗರದಲ್ಲಿ ಡಿ.ಕೆ.ರವಿ ಪತ್ನಿ ಕಣಕ್ಕಿಳಿಯುವುದು ಫಿಕ್ಸ್..!
ಬೆಂಗಳೂರು, ಅ.5- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ದಕ್ಷ ಐಎಎಸ್ ಅಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರ ಪತ್ನಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರನ್ನು ಸೋಲಿಸಲು ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ ಇಂದು ಕುಸುಮಾ ಅವರು ಕಾಂಗ್ರೆಸ್ ಕಚೇರಿಗೆ ಬಂದು ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ.ಕುಸುಮಾ ಅವರ ತಂದೆ ಹನುಮಂತರಾಯಪ್ಪ ಬಹಳ ವರ್ಷ ಕಾಂಗ್ರೆಸ್‍ನಲ್ಲಿದ್ದವರು. ನಗರಸಭೆ ಅಧ್ಯಕ್ಷರಾಗಿ, ನೈಸ್ ಪ್ರಾಕಾರದ …
Read More »ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್
ಬೆಂಗಳೂರು, ಅ.4- ಉಪಚುನಾವಣೆ ಕಣ ರಂಗೇರತೊಡಗಿದೆ. ನವೆಂಬರ್ 3ರಂದು ನಡೆಯಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ರಣತಂತ್ರ ರೂಪಿಸಿದ್ದು, ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದು, ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿದ್ದು, ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ …
Read More »ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು
ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …
Read More »
Laxmi News 24×7