Breaking News

ನವದೆಹಲಿ

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ ರಿಜಿಜು ಬಿಡುಗಡೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಿರಣ್ ರಿಜುಜು ತನ್ನ ಸಂಸದರು ಲೋಕಸಭೆಯಲ್ಲಿ ಪ್ರದರ್ಶಿಸಿದ ಅತ್ಯಂತ ಅವಮಾನಕರ ನಡವಳಿಕೆಯ ಬಗ್ಗೆ ಕಾಂಗ್ರೆಸ್‌ ಹೆಮ್ಮೆಪಡಬೇಕು. ನಾವು ನಮ್ಮ ಬಿಜೆಪಿಯ ಮಹಿಳಾ ಸಂಸದರಿಗೆ ಕಾಂಗ್ರೆಸ್ ಸಂಸದರನ್ನು ಎದುರಿಸಲು ಅವಕಾಶ ನೀಡಿದ್ದರೆ ಅದು ತುಂಬಾ ಕೊಳಕು ದೃಶ್ಯಕ್ಕೆ ಕಾರಣವಾಗುತ್ತಿತ್ತು. ಸಂಸತ್ತಿನ ಘನತೆ …

Read More »

ದೆಹಲಿ ಜಲಮಂಡಳಿ ಯಮಗುಂಡಿಗೆ ಬೈಕ್ ಸವಾರ ಬಲಿ – 20 ಅಡಿಯ ಆಳಕ್ಕೆ ಬಿದ್ದು ದುರ್ಮರಣ

ನವದೆಹಲಿ: ಜಲಮಂಡಳಿಯ ಯಮಗುಂಡಿಗೆ ಬೈಕ್ ಸವಾರನೊಬ್ಬ ಬಲಿಯಾಗಿದ್ದಾನೆ. ಆಳವಾದ ಗುಂಡಿಗೆ ಬಿದ್ದು ಬೈಕ್ ಸವಾರ ಕಮಲ್ ಪ್ರಾಣಪಕ್ಷಿ ಹಾರಿ ಹೋಗಿದೆ. ಪಶ್ಚಿಮ ದೆಹಲಿಯ ಜನಕಪುರಿಯಲ್ಲಿ ಜಲಮಂಡಳಿಯಿಂದ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. 20 ಅಡಿ ಆಳವಾದ ಗುಂಡಿ ಅಗೆಯಲಾಗಿತ್ತು. ನಿನ್ನೆ ರಾತ್ರಿ ರೋಹಿಣಿಯಲ್ಲಿರುವ ಕಚೇರಿಯಿಂದ ಜನಕಪುರಿಯ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಕಮಲ್ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಅಗೆಯಲಾಗಿದ್ದ ಗುಂಡಿಗೆ ಯಾವುದೇ ಎಚ್ಚರಿಕಾ ಚಿಹ್ನೆಗಳು, ಬ್ಯಾರಿಕೇಡ್‌ಗಳು, ರಿಫ್ಲೆಕ್ಟರ್ ಅಳವಡಿಸದೇ ಇದ್ದಿದ್ದರಿಂದ ಈ …

Read More »

ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ: ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್  ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ತೀರ್ಪು ನೀಡಿದೆ. ಪ್ರಕರಣವೊಂದರಲ್ಲಿ ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ …

Read More »

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

ನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿದೆ. ಆದರೆ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಗಣನೀಯವಾಗಿ ಕಡಿಮೆಯಾಗಿದ್ದು, ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಸಂಸದ ಈರಣ್ಣ ಕಡಾಡಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಅವರು, ಬೆಳಗಾವಿ ವಿಮಾನ ನಿಲ್ದಾಣವನ್ನು 262.64 ಕೋಟಿ ರೂಪಾಯಿ ವ್ಯಯದಲ್ಲಿ ನಿರ್ಮಿಸಲಾಗಿದೆ. ಪ್ರಸ್ತುತ 25.98 ಕೋಟಿ ರೂಪಾಯಿ ವೆಚ್ಚದಲ್ಲಿ ವಿಸ್ತರಣಾ ಕಾರ್ಯಗಳು …

Read More »

ಅಜಿತ್ ಪವಾರ್ ವಿಮಾನ ದುರಂತ: ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..! ಮಹಾರಾಷ್ಟ್ರದ ರಾಜಕೀಯ ಧ್ರುವತಾರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ದುರಂತಕ್ಕೆ ಕಾರಣವಾದ ಕೆಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಜನವರಿ 28ರ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಭೀಕರ ಘಟನೆಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದುರಂತದ ಹಿಂದಿನ ಪ್ರಮುಖ ಕಾರಣಗಳು: ದೃಶ್ಯಮಾನತೆ ಮತ್ತು ತಾಂತ್ರಿಕ ದೋಷ..? ತನಿಖಾ ಮೂಲಗಳ ಪ್ರಕಾರ, ಅಪಘಾತಕ್ಕೆ ಎರಡು ಪ್ರಮುಖ ಕಾರಣಗಳನ್ನು ಗುರುತಿಸಲಾಗಿದೆ. ಕಡಿಮೆ ದೃಶ್ಯಮಾನತೆ: ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯದಲ್ಲಿ ರನ್‌ವೇ ಮೇಲೆ ದಟ್ಟವಾದ ಮಂಜು ಕವಿದಿತ್ತು. ದೃಶ್ಯಮಾನತೆ ತೀರಾ ಕಡಿಮೆ ಇದ್ದರೂ ಸಹ, ವಿಮಾನವನ್ನು ಲ್ಯಾಂಡಿಂಗ್ ಮಾಡಲು ನಿರ್ಧರಿಸಿದ್ದು ಈ ದುರಂತಕ್ಕೆ ಒಂದು ಮುಖ್ಯ ಕಾರಣವೆಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಪೈಲಟ್‌ಗಳು ಎರಡನೇ ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸುತ್ತಿದ್ದಾಗ ವಿಮಾನವು ನಿಯಂತ್ರಣ ತಪ್ಪಿ ಬೆಂಕಿ ಹೊತ್ತಿಕೊಂಡಿದೆ.

ಮಹಾರಾಷ್ಟ್ರದ ರಾಜಕೀಯ ಧ್ರುವತಾರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕಾರಣವಾದ ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಹೊರಬಿದ್ದಿದೆ. ದುರಂತಕ್ಕೆ ಕಾರಣವಾದ ಕೆಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಜನವರಿ 28ರ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಭೀಕರ ಘಟನೆಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದುರಂತದ ಹಿಂದಿನ ಪ್ರಮುಖ ಕಾರಣಗಳು: ದೃಶ್ಯಮಾನತೆ ಮತ್ತು ತಾಂತ್ರಿಕ ದೋಷ..? ತನಿಖಾ ಮೂಲಗಳ ಪ್ರಕಾರ, ಅಪಘಾತಕ್ಕೆ ಎರಡು …

Read More »

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌  ಅವರೊಂದಿಗೆ ಮಾತುಕತೆ ನಡೆಸಿದರು. ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ …

Read More »

ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

ನವದೆಹಲಿ: ವ್ಯಾಪಾರ ಒಪ್ಪಂದಕ್ಕೆ  ಸಂಬಂಧಿಸಿದಂತೆ ನಿಮ್ಮ ಒತ್ತಡಗಳಿಗೆ ನಾವು ಬಗ್ಗುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಹಾರ ಅಜಿತ್‌ ದೋವಲ್‌ ಅಮೆರಿಕದ ಅಧಿಕಾರಿಗಳಿಗೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಸೆಪ್ಟೆಂಬರ್‌ನಲ್ಲಿ ಮೋದಿ (Narendra Modi) ಅವರು ಚೀನಾದಲ್ಲಿ ಅಧ್ಯಕ್ಷ ಕ್ಷಿ ಜಿನ್‌ ಪಿಂಗ್‌ ಮತ್ತು ರಷ್ಯಾದ ಅಧ್ಯಕ್ಷ ಪುಟಿನ್‌ ಅವರನ್ನು ಭೇಟಿಯಾದ ನಂತರ ಅಜಿತ್‌ ದೋವಲ್‌ ಅಮೆರಿಕಕ್ಕೆ ತೆರಳಿದ್ದರು. ವ್ಯಾಪಾರ ಒಪ್ಪಂದ ಮಾತುಕತೆಗೆ ಸಂಬಂಧಿಸಿದಂತೆ ದೋವಲ್‌ ಮತ್ತು ಅಮೆರಿಕದ …

Read More »

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್‌  ಪೀಠದ ಮೇಲೆ ಕಾಗದ ಹರಿದು ಎಸೆದ 8 ಮಂದಿ ಸಂಸದರನ್ನ ಇಡೀ ಬಜೆಟ್‌ ಅಧಿವೇಶನದಿಂದಲೇ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಸಂಸದರಲ್ಲಿ ಮಾಣಿಕ್ಕಂ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ ಸೇರಿದ್ದಾರೆ. ಈ ಪೈಕಿ 7 ಮಂದಿ ಕಾಂಗ್ರೆಸ್‌ನವರಾಗಿದ್ದು, ವೆಂಕಟೇಸನ್‌ ಸಿಪಿಎಂ ನವರಾಗಿದ್ದಾರೆ. ಇಂದು ಮಧ್ಯಾಹ್ನ 3 …

Read More »

40,000 ಕೋಟಿ ವಂಚನೆ; RCOM ಮಾಜಿ ಅಧ್ಯಕ್ಷನ ಬಂಧಿಸಿದ ಇ.ಡಿ

ನವದೆಹಲಿ: 40 ಸಾವಿರ ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ  ಮಾಜಿ ಅಧ್ಯಕ್ಷ ಪುನೀತ್‌ ಗಾರ್ಗ್‌  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), ಮತ್ತು 420 (ವಂಚನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧಗಳನ್ನು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಪುನೀತ್ ಗಾರ್ಗ್ ಅವರು ಆರ್‌ಸಿಒಎಂ …

Read More »

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಶುಭಹಾರೈಸಿದ್ದಾರೆ. ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು …

Read More »