Breaking News
Home / ನವದೆಹಲಿ

ನವದೆಹಲಿ

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

ನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು ಬಿರುಸುಗೊಂಡಿವೆ. ಈ ಬಾರಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಹಾಗೂ ಬಿಜೆಪಿ ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಿವೆ. ಇದರ ಮಧ್ಯೆ ಈ ಬಾರಿಯೂ ಸಹ ಮಂಡ್ಯ(Mandya) ರಾಜಕಾರಣ ಮುನ್ನೆಲೆಗೆ ಬಂದಿದೆ. ಮಂಡ್ಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಗಿಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಇಂದು(ಫೆ.08) ನವದೆಹಲಿಯಲ್ಲಿ ಬಿಜೆಪಿ …

Read More »

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ (BJP) ಸರ್ಕಾರದ ಸರ್ವಾಧಿಕಾರ. ಈ ಹಿನ್ನೆಲೆ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ.   ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಇಂಡಿಯಾ ಬಣ (INDIA bloc) ನವದೆಹಲಿಯ ಜಂತರ್ …

Read More »

ಗುಜರಾತ್​ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ​?

ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, ಗುಜರಾತ್ ಟೈಟಾನ್ಸ್ ನಾಯಕತ್ವವನ್ನು ಬಿಟ್ಟುಕೊಡಲು ಅವರು ಸಿದ್ಧರಿದ್ದೀರಾ?, ಮೊದಲ ಸೀಸನಲ್ಲೇ ಟ್ರೋಫಿ ತಂದುಕೊಟ್ಟಿದ್ದ ನಾಯಕನನ್ನು ಕೈಬಿಡಲು ಗುಜರಾತ್ ಒಪ್ಪಿಕೊಂಡಿದೆಯೇ? ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್​ ಪಾಂಡ್ಯ ಮುಂಬೈ ಇಂಡಿಯನ್ಸ್​ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ …

Read More »

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್​ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ …

Read More »

ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ನಂತರ ಮೇ 11 ರಂದು ತೀರ್ಪು ಕಾಯ್ದಿರಿಸಿತ್ತು. ಮುುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ …

Read More »

ಗಾಂಧಿ ಜಯಂತಿ: ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ, ಖರ್ಗೆ

ನವದೆಹಲಿ: ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್​ಘಾಟ್​ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದರು.       ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನ್​ಕರ್​, ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ …

Read More »

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ

ನಾಳೆ ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ …

Read More »

ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ.. 244 ಕೋಟಿ ರೂ. ಆದಾಯ ಸಂಗ್ರಹ

ಬೆಂಗಳೂರು : ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ- ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹ ಆಗಿರುವುದು ಹೊಸ ದಾಖಲೆಯಾಗಿದೆ.   ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ …

Read More »

ಕೃಷ್ಣ ಜನ್ಮಭೂಮಿ – ಈದ್ಗಾ ಆವರಣದ ಸಮೀಕ್ಷೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ – ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.   ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ, ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಸಿವಿಲ್ ಪ್ರೊಸೀಜರ್ ಕೋಡ್​ನ …

Read More »

ಬೆಳಗಾವಿಯ ಬಿಜೆಪಿಯಿಂದ ಅದ್ಧೂರಿ ವಿಜಯೋತ್ಸವ

ಸಂಸತ್ತಿನ ಹೊಸ ಕಟ್ಟಡದೊಂದಿಗೆ ದೇಶದ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ದೊಡ್ಡ ಹೆಜ್ಜೆ ಇಟ್ಟಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಿದೆ. ಇಂದು ಬೆಳಗಾವಿಯಲ್ಲಿ ಐತಿಹಾಸಿಕ ನಿರ್ಧಾರವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಗರದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪರಸ್ಪರ ಸಿಹಿ ತಿನ್ನಿಸುವ ಮೂಲಕ …

Read More »