Breaking News

ನವದೆಹಲಿ

ಗೃಹಿಣಿಯರಿಗೆ ಗುಡ್‌ ನ್ಯೂಸ್:‌ ಇಳಿಕೆಯಾಗಿದೆ ಅಡುಗೆ ಎಣ್ಣೆ ಬೆಲೆ

ಕಳೆದ ಒಂದು ತಿಂಗಳಿನಿಂದ ಅಡುಗೆ ಎಣ್ಣೆ ಬೆಲೆಗಳು ಕುಸಿಯುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಲವೆಡೆ ಅಡುಗೆ ಎಣ್ಣೆ ಬೆಲೆಗಳಲ್ಲಿ 20%ನಷ್ಟು ಇಳಿಕೆ ಕಂಡುಬಂದಿದೆ. ಅಡುಗೆ ಎಣ್ಣೆ ಬೆಲೆಗಳ ಇಳಿಕೆಯ ವಿವರ ಇಂತಿದೆ   1. ಪಾಮ್‌ ಎಣ್ಣೆಯ ಬೆಲೆ ಮೇ 7ರಂದು ರೂ.142/ಕೆಜಿ ಇದ್ದಿದ್ದು ಇಂದಿಗೆ 115 ರೂ./ಕೆಜಿಗೆ ಇಳಿದಿದೆ. 2. ಸೂರ್ಯಕಾಂತಿ ಎಣ್ಣೆಯ ಬೆಲೆಯು ಮೇ 5ರಂದು 188ರೂ./ಕೆಜಿ ಇಂದ 157 ರೂ./ಕೆಜಿಗೆ ಇಳಿದಿದೆ. 3. ಸೋಯಾ …

Read More »

ಲಸಿಕೆ ಕೊರತೆ ಮುಚ್ಚಿ ಹಾಕಲು ಲಸಿಕೆ ನಡುವೆ ಅಂತರ ಹೆಚ್ಚಿಸಿದ ಸರ್ಕಾರ

ನವದೆಹಲಿ: ಕೊವಿಶೀಲ್ಡ್ ಲಸಿಕೆ 2ನೇ ಡೋಸ್ ನಡುವಿನ ಅಂತರ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸಿ ಟ್ವೀಟ್ ಮಾಡಿದ್ದಾರೆ. ಲಸಿಕೆ ಕೊರತೆ ಮತ್ತು ನಿಷ್ಕ್ರಿಯತೆ ಮುಚ್ಚಿ ಹಾಕಲು ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ ಭಾರತಕ್ಕೆ ಶೀಘ್ರವಾಗಿ, ಸಂಪೂರ್ಣ ಲಸಿಕೆ ನೀಡಬೇಕು. ಹಲವರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ. ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ …

Read More »

ನಾಯಕತ್ವ ಬದಲಾವಣೆ ಚರ್ಚೆ | ದೆಹಲಿಗೆ ಅರವಿಂದ ಬೆಲ್ಲದ್; ವರಿಷ್ಠರ ಭೇಟಿ ಸಾಧ್ಯತೆ

ನವದೆಹಲಿ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ದೌಡಾಯಿಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಬೆಲ್ಲದ್ ಅವರ ದೆಹಲಿಯ ದಿಢೀರ್‌ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಬೆಲ್ಲದ್ ಅವರು ಸಚಿವ ಸಿ.ಪಿ. ಯೋಗೇಶ್ವರ್ ಅವರೊಂದಿಗೆ ಮೇ ಮೂರನೇ ವಾರ ದೆಹಲಿಗೆ ಬಂದಿದ್ದರು. ಆಗ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಬೇಕೆಂಬ ಅವರ ಪ್ರಯತ್ನಗಳು ಫಲಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಬೆಲ್ಲದ್ …

Read More »

ಒಂದೆಡೆ ಕಾಂಗ್ರೆಸ್ ಪ್ರತಿಭಟನೆ; ಮುಂಬಯಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 102 ರೂಪಾಯಿಗೆ ಏರಿಕೆ!

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಶುಕ್ರವಾರವೂ(ಜೂನ್ 11) ಮತ್ತೆ ಇಂಧನ ಬೆಲೆ ಏರಿಕೆಯಾಗಿದ್ದು, ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 102 ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳ ಬೆಲೆ ಅಧಿಸೂಚನೆ ಪ್ರಕಾರ, ಶುಕ್ರವಾರ ಪೆಟ್ರೋಲ್ ಬೆಲೆ ಲೀಟರ್ ಗೆ 25-29 ಪೈಸೆ ಮತ್ತು ಡೀಸೆಲ್ ಲೀಟರ್ ಗೆ 27-30 ಪೈಸೆ ಹೆಚ್ಚಿಸಿರುವುದಾಗಿ ತಿಳಿಸಿದೆ. …

Read More »

ನವದೆಹಲಿ : 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲ್ಲ; ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ

ನವದೆಹಲಿ : ಹೆಮ್ಮಾರಿ ಸೋಂಕಿಗೆ ಹೆದರದವರಿಲ್ಲ. ಡೆಡ್ಲಿ ಸೋಂಕಿನ 3ನೇ ಅವತಾರ ಮಕ್ಕಳಿಗೆ ಮಾರಕ ಎನ್ನುವ ಮಾತುಗಳು ಎಲ್ಲೇಡೆ ಸಾಮಾನ್ಯವಾಗದೆ. ಈ ಆತಂಕಕ್ಕೆ ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ತೆರೆ ಎಳೆದಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೋಟ್ಯಾಂತರ ಪೋಷಕರಲ್ಲಿ ನೆಮ್ಮದಿ ತಂದಿದೆ. ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ಗುಲೆರಿಯಾ ಹೇಳಿದ್ದಾರೆ. ಆದರೆ ಮುಂಜಾಗ್ರತ ಕ್ರಮವಾಗಿ ಮಾಸ್ಕ್ …

Read More »

COVID ಪಾಸಿಟಿವಿಟಿ ರೇಟ್ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟಿದೆ?

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​ಡೌನ್​ ವಿಧಿಸಿದೆ. ಜೂನ್ 7 ರ ವರೆಗೆ ಇದ್ದ ಲಾಕ್​ಡೌನ್​ನನ್ನು ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇನ್ನು ಒಂದು ವಾರ ವಿಸ್ತರಿಸಿದೆ. ಜೊತೆಗೆ ಯಾವ ಯಾವ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.5 ಕ್ಕೆ ಬರುತ್ತದೋ ಆ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಳಿದ್ದಾರೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ …

Read More »

ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭ

ಬೆಂಗಳೂರು – ಕೊರೋನಾ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲ ಮಾಡಲಾಗುತ್ತಿದೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸ್ಟ್ರಿಕ್ಟ್ ರಜಿಸ್ಟ್ರಾರ್ ಹಾಗೂ ಸಬ್ ರಜಿಸ್ಟ್ರಾರ್ ಕಚೇರಿ ಆರಂಭಿಸಲು ಸರಕಾರ ಅನುಮತಿ ನೀಡಿದೆ.                     ಕೋವಿಡ್ ಮಾರ್ಗದರ್ಶಿ ನಿಯಮಗಳನ್ನು ಪಾಲಿಸಿ ನೋಂದಣಾಧಿಕಾರಿ ಕಚೇರಿ ಕಾರ್ಯಾರಂಭ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ …

Read More »

ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರದ ತೀರ್ಮಾನ: ಈಶ್ವರಪ್ಪ

ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ದರ ಏರಿಸುವುದು, ಇಳಿಸುವುದು ಕೇಂದ್ರ ಸರಕಾರದ ತೀರ್ಮಾನ. ಯಾಕೆ ಏನು, ಏನು ಕಥೆ ಎಂದು ನನಗೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೆಲವು ಸಂದರ್ಭದಲ್ಲಿ ಏರಿಸುತ್ತಾರೆ, ಕೆಲವು ಸಂದರ್ಭದಲ್ಲಿ ಇಳಿಸುತ್ತಾರೆ. ಕೇವಲ ಪೆಟ್ರೋಲ್ ಡೀಸೆಲ್ ಅಷ್ಟೇ ಅಲ್ಲ. ಎಲ್ಲಾ ಪದಾರ್ಥಗಳಿಗೆ ಈ ವ್ಯವಸ್ಥೆ ಇರುತ್ತೆದೆ. ಕಾರಣಗಳು ಕೇಂದ್ರದ ಅರ್ಥ ಸಚಿವರಿಗೆ ಗೊತ್ತಿರುತ್ತದೆ. ಆಡಳಿತ …

Read More »

ಜೂನ್ 7ರಿಂದ ದೆಹಲಿಯಲ್ಲಿ ಮಾರುಕಟ್ಟೆ, ಮೆಟ್ರೋ ಸಂಚಾರ ಆರಂಭ: ಕೇಜ್ರಿವಾಲ್

ದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು, ಆದರೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ(ಜೂನ್ 05) ತಿಳಿಸಿದ್ದಾರೆ.   ಜೂನ್ 7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಪುನರಾರಂಭಗೊಳ್ಳಲಿದೆ. ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡಾ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಜ್ರಿವಾಲ್ …

Read More »

ಸೀಜ್ ಮಾಡಲಾದ ಸಾವಿರಾರು ವಾಹನಗಳಿಂದ ಮೈದಾನ ಫುಲ್

ಕಲಬುರಗಿ: ಕೊರೊನಾ ನಿಯಂತ್ರಿಸಲು, ರಾಜ್ಯಾದ್ಯಂತ ಲಾಕ್​​ಡೌನ್ ಜಾರಿಯಲ್ಲಿದೆ. ಅಗನತ್ಯವಾಗಿ ಹೊರಗಡೆ ಓಡಾಡದಂತೆ ಜನರಿಗೆ ಸೂಚನೆ ನೀಡಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಸುಖಾಸುಮ್ಮನೆ ಹೊರಗಡೆ ಓಡಾಡುವ ಸಾವಿರಾರು ವಾಹನಗಳನ್ನ ಪೊಲೀಸರು ಸೀಜ್ ಮಾಡ್ತಿದ್ದಾರೆ. ಕಲಬುರಗಿಯಲ್ಲಿ ಹೀಗೆ ಜಪ್ತಿ ಮಾಡಲಾದ ವಾಹನಗಳಿಂದ ಇಡೀ ಮೈದಾನವೇ ತುಂಬಿಹೋಗಿದೆ.   ಅನಗತ್ಯವಾಗಿ ಹೊರಬಂದವರ ಬೈಕ್ ಹಾಗೂ ಕಾರ್​ಗಳನ್ನ ಸೀಜ್ ಮಾಡಿರುವ ಪೊಲೀಸರು, ಅವುಗಳನ್ನ ಡಿಎಆರ್ ಮೈದಾನದಲ್ಲಿ ಪಾರ್ಕ್‌ ಮಾಡ್ತಿದ್ದಾರೆ. ಜಪ್ತಿಯಾದ ಬೈಕ್, ಕಾರ್, ಆಟೋಗಳನ್ನ ಪ್ರತಿದಿನ …

Read More »