Breaking News

ನವದೆಹಲಿ

₹ 100ರ ಗಡಿ ದಾಟಿದ ಪೆಟ್ರೋಲ್‌ ದರ

ರಾಜಸ್ಥಾನದಲ್ಲಿ ₹ 100ರ ಗಡಿ ದಾಟಿದ ಪ್ರೀಮಿಯಂ ಪೆಟ್ರೋಲ್‌ ದರ   ನವದೆಹಲಿ: ದೇಶದಾದ್ಯಂತ ಬುಧವಾರವೂ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆ ಆಗಿದೆ. ಬ್ರ್ಯಾಂಡೆಡ್‌ ಅಥವಾ ಪ್ರೀಮಿಯಂ ಪೆಟ್ರೋಲ್‌ ದರವು ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಬುಧವಾರ ಒಂದು ಲೀಟರ್‌ಗೆ ₹ 100ರ ಗಡಿ ದಾಟಿದೆ. ದೆಹಲಿಯಲ್ಲಿ ಪ್ರೀಮಿಯಂ ಪೆಟ್ರೋಲ್‌ ದರ ಲೀಟರಿಗೆ ₹ 89.10 ಇದ್ದರೆ ಮುಂಬೈನಲ್ಲಿ ₹ 95.61ರಷ್ಟಾಗಿದೆ. ಬೆಲೆ ಏರಿಕೆ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದೆಹಲಿಯಲ್ಲಿ …

Read More »

ಸೇನೆಯ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ

ನವದೆಹಲಿ, ಜನವರಿ 26: 140 ವಾಯು ರಕ್ಷಣಾ ರೆಜಿಮೆಂಟ್ ನ ಸುಧಾರಿತ ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಕ್ಯಾಪ್ಟನ್ ಪ್ರೀತಿ ಚೌಧರಿ ಮುನ್ನಡೆಸಿದ್ದಾರೆ. ಇಂದು ಪಥಸಂಚಲನದಲ್ಲಿ ಭಾಗವಹಿಸಿದ ಏಕೈಕ ಮಹಿಳಾ ರೆಜಿಮೆಂಟ್ ಕಮಾಂಡರ್ ಕ್ಯಾಪ್ಟನ್ ಪ್ರೀತಿ ಚೌಧರಿ ಆಗಿದ್ದಾರೆ. ಸ್ಚಿಲ್ಕ ಶಸ್ತ್ರಾಸ್ತ್ರ ವ್ಯವಸ್ಥೆ ಆಧುನಿಕ ರಾಡಾರ್ ಮತ್ತು ಡಿಜಿಟಲ್ ಅಗ್ನಿ ನಿಯಂತ್ರಣ ಕಂಪ್ಯೂಟರ್ ನ್ನು ಹೊಂದಿದೆ. ಇಂದು ಮಹಿಳೆಯರು ಕೂಡ ದೇಶದ ಮಿಲಿಟರಿಯ ಮೂರೂ ಪಡೆಗಳಲ್ಲಿ ತಮ್ಮ ಶಕ್ತಿ, ಸಾಮರ್ಥ್ಯ, ಪ್ರತಿಭೆಯನ್ನು …

Read More »

10ನೇ ತರಗತಿ ಪಾಸಾದವರಿಗೆ ಆರ್​ಬಿಐನಲ್ಲಿ ಉದ್ಯೋಗವಕಾಶ

ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ. 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ …

Read More »

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ …

Read More »

ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ

    ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …

Read More »

ದೇಶಾದ್ಯಂತ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮ ನಿಗದಿ

ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ …

Read More »

ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್

                        ನವದೆಹಲಿ  : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …

Read More »

‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ’: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಸಾಗುತ್ತಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಪಟ್ಟು ಸಡಿಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ‘ಇನ್ನೂ ಸಮಯವಿದೆ, ಮೋದಿಜಿ, ಅನ್ನದಾತರನ್ನು ಬೆಂಬಲಿಸಿ, ಬಂಡವಾಳಶಾಹಿಗಳನ್ನು ತೊಳಗಿಸಿ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.ಈ ಸಂಬಂಧ ಸಂಸತ್ತಿನಲ್ಲಿ 2015 ಎಪ್ರಿಲ್‌ನಲ್ಲಿ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ಬಿಡುಗಡೆ …

Read More »

3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ

ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್​ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್‌ಲೈನ್​​​​​ ಅನ್ನು ಗೇಲ್ …

Read More »

ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ

ನವದೆಹಲಿ,ಡಿ.30- ಸರ್ಕಾರ ತನ್ನ ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವವರೆಗೂ ರೈತರ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಕೇಂದ್ರ ರೈತರೊಂದಿಗೆ 6ನೇ ಸುತ್ತಿನ ಮಾತುಕತೆ ನಡೆಸಲು 40ಕ್ಕೂ ಹೆಚ್ಚು ರೈತ ಒಕ್ಕೂಟಗಳನ್ನು ಆಹ್ವಾನಿಸಿದೆ. ಇಂದು ದೆಹಲಿಯ ವಿಜ್ಞಾನ ಭವನಕ್ಕೆ ಎರಡು ಬಸ್‍ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ , ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯದ ಹೊರತು ನಮ್ಮ ಹೋರಾಟ ನಿಲ್ಲುವುದಿಲ್ಲ. ಕೇಂದ್ರ ತನ್ನ ನಿಲುವನ್ನು ಬದಲಿಸಿಕೊಳ್ಳುವುದೊಂದೆ ಮಾರ್ಗ …

Read More »