Breaking News

ನವದೆಹಲಿ

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ ಲಡ್ಡು ತುಪ್ಪ ಕಲಬೆರಕೆ  ಪ್ರಕರಣದಲ್ಲಿ ಕೇಂದ್ರ ತನಿಖಾ ದಳ  ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಅಂತಿಮ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದು, ಪವಿತ್ರ ಪ್ರಸಾದವನ್ನು ಕಳಂಕಗೊಳಿಸುವ ಭ್ರಷ್ಟಾಚಾರದ ಜಾಲವನ್ನು ಬಹಿರಂಗಪಡಿಸಿದೆ. ನೆಲ್ಲೂರು ಎಸಿಬಿ ನ್ಯಾಯಾಲಯಕ್ಕೆ ಸಲ್ಲಿಸಲಾದ ಈ ಚಾರ್ಜ್‌ಶೀಟ್‌ನಲ್ಲಿ ಒಟ್ಟು 36 ಮಂದಿ ಪ್ರಮುಖ ಆರೋಪಿಗಳನ್ನು ಹೆಸರು ನಮೂದಿಸಲಾಗಿದೆ. ಇವರಲ್ಲಿ ಡೈರಿ ಮಾಲೀಕರು, ಮಾಜಿ ಟಿಟಿಡಿ ಅಧಿಕಾರಿಗಳು ಸೇರಿದ್ದಾರೆ. 15 ತಿಂಗಳುಗಳ ಕಾಲ 12 …

Read More »

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

ನವದೆಹಲಿ: 18ನೇ ರೋಜಗಾರ್ ಮೇಳ  ಹಿನ್ನೆಲೆ ಇಂದು ದೇಶಾದ್ಯಂತದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 61,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ  ಅವರು ವಿತರಿಸಿದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿತ್ತು. ದೇಶದ 45 ವಿವಿಧ ಸ್ಥಳಗಳಲ್ಲಿ ಯುವಕರು ಭಾಗವಹಿಸಿದ್ದರು. ಈ ರೋಜಗಾರ್ ಮೇಳದ ಮೂಲಕ ಆರಂಭದಿಂದ ಇಲ್ಲಿಯವರೆಗೆ ಒಟ್ಟು 11 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ …

Read More »

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಹಿಮಪಾತ  ಹೆಚ್ಚಾಗಿದ್ದು, ಶ್ರೀನಗರದ ವಿಮಾನ ನಿಲ್ದಾಣದಲ್ಲಿ ಹಿಮ ತೆರವು ಕಾರ್ಯ ನಡೆಯುತ್ತಿದೆ. ಏಪ್ರನ್ ಮತ್ತು ಟ್ಯಾಕ್ಸಿ ವೇ ಗಳಲ್ಲಿನ ಹಿಮ ತೆರವು ಮಾಡಿ ವಿಮಾನಗಳ ಹಾರಾಟಕ್ಕೆ ಪರೀಕ್ಷೆಗಳು ನಡೆಯುತ್ತಿವೆ. ಶೀಘ್ರದಲ್ಲೇ ವಾಣಿಜ್ಯ ಬಳಕೆಗೆ ವಿಮಾನ ನಿಲ್ದಾಣ ಮುಕ್ತವಾಗುವ ನಿರೀಕ್ಷೆಯಿದೆ. ಇನ್ನು ಹಿಮಾಚಲ ಪ್ರದೇಶದಲ್ಲೂ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, 600 ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಮನಾಲಿಯಲ್ಲಿ, …

Read More »

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಿದ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಇದು ಕೇವಲ ಆಚರಣೆ ಅಲ್ಲ. ಸಂವಿಧಾನ ಜಾರಿಗೆ ಬಂದ ದಿನವನ್ನು ಗೌರವಿಸುವ ಅಭೂತಪೂರ್ವ ದಿನ. 1950 ಜನವರಿ 26ರಂದು ಭಾರತೀಯರೆಲ್ಲರೂ ಹೆಮ್ಮೆಯಿಂದ ಆಚರಿಸುವ ದಿನ. ರಾಜಪ್ರಭುತ್ವವನ್ನ ತ್ಯಜಿಸಿ ಪ್ರಜಾಪ್ರಭುತ್ವಕ್ಕೆ ಬದಲಾದ ದಿನ. ಹೀಗಾಗಿ ಪ್ರತಿಯೊಬ್ಬ ಭಾರತೀಯನಿಗೂ ಈ ದಿನ ಅತ್ಯಂತ ಮಹತ್ವದ ದಿನ. ಈ ಬಾರಿ ಜನವರಿ 26ರಂದು ಭಾರತೀಯರೆಲ್ಲರೂ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಿದ್ದಾರೆ. …

Read More »

‘ಸತ್ಯ ಮರೆಮಾಚಲು ಮೋದಿ ಸರ್ಕಾರ ಯತ್ನ’: ಖರ್ಗೆ ಗರಂ

ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಆಘಾತ ತಂದ ಘಟನೆಯಾಗಿದೆ ಎಂದು ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗ  ಎಂದು ಕಿಡಿಕಾರಿದ್ದಾರೆ. ದೆಹಲಿ ಕಾಲ್ತುಳಿತ ಕ್ಕೆ ‘ಸಂಪೂರ್ಣ ಅವ್ಯವಸ್ಥೆ’ ಕಾರಣ ಎಂದು ಗರಂ ಆದ್ರು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ದೆಹಲಿ ರೈಲು ನಿಲ್ದಾಣದಲ್ಲಿ “ಅತ್ಯಂತ ದುಃಖಕರ” ಮತ್ತು “ಹೃದಯ ವಿದ್ರಾವಕ” ಘಟನೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸಾವಿನ ಪ್ರಕರಣದಲ್ಲಿ …

Read More »

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವರಿಗೆ ಆಹ್ವಾನ

ನವದೆಹಲಿ: ಕರ್ನಾಟಕದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿ ಬುಧವಾರ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಎಂದು ಆಹ್ವಾನ ನೀಡಿದರು. ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಪಾಟೀಲ್ ಅವರು; ತಾವು ತಪ್ಪದೇ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಹಾಗೂ ಈ ನಿಟ್ಟಿನಲ್ಲಿ ತಮ್ಮ ಸಹಕಾರ ಅಗತ್ಯ ಬೇಕಿದೆ ಎಂದು ಅವರು …

Read More »

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

ನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು ಬಿರುಸುಗೊಂಡಿವೆ. ಈ ಬಾರಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್​ ಹಾಗೂ ಬಿಜೆಪಿ ಸೀಟು ಹಂಚಿಕೆ ಸಂಬಂಧ ಚರ್ಚೆ ನಡೆಸಿವೆ. ಇದರ ಮಧ್ಯೆ ಈ ಬಾರಿಯೂ ಸಹ ಮಂಡ್ಯ(Mandya) ರಾಜಕಾರಣ ಮುನ್ನೆಲೆಗೆ ಬಂದಿದೆ. ಮಂಡ್ಯವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳುವಂತೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಗಿಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಇಂದು(ಫೆ.08) ನವದೆಹಲಿಯಲ್ಲಿ ಬಿಜೆಪಿ …

Read More »

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ (BJP) ಸರ್ಕಾರದ ಸರ್ವಾಧಿಕಾರ. ಈ ಹಿನ್ನೆಲೆ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಂದಾಗಬೇಕು ಎಂದು ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ.   ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷ ಇಂಡಿಯಾ ಬಣ (INDIA bloc) ನವದೆಹಲಿಯ ಜಂತರ್ …

Read More »

ಗುಜರಾತ್​ ಕ್ಯಾಪ್ಟನ್ಸಿ ಬಿಟ್ಟು ಮತ್ತೆ ಮುಂಬೈ ಪಾಲಾಗ್ತಾರಾ ಹಾರ್ದಿಕ್ ಪಾಂಡ್ಯ​?

ಮುಂಬೈ, ಮಹಾರಾಷ್ಟ್ರ: ಟೀಂ ಇಂಡಿಯಾ ಟಿ 20 ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಮುಂಬೈ ತಂಡಕ್ಕೆ ಮರಳುತ್ತಾರಾ?, ಗುಜರಾತ್ ಟೈಟಾನ್ಸ್ ನಾಯಕತ್ವವನ್ನು ಬಿಟ್ಟುಕೊಡಲು ಅವರು ಸಿದ್ಧರಿದ್ದೀರಾ?, ಮೊದಲ ಸೀಸನಲ್ಲೇ ಟ್ರೋಫಿ ತಂದುಕೊಟ್ಟಿದ್ದ ನಾಯಕನನ್ನು ಕೈಬಿಡಲು ಗುಜರಾತ್ ಒಪ್ಪಿಕೊಂಡಿದೆಯೇ? ಐಪಿಎಲ್ ಫ್ರಾಂಚೈಸಿಗಳು ಆಟಗಾರರನ್ನು ವಿನಿಮಯ ಮಾಡಿಕೊಳ್ಳುವ ಟ್ರೇಡಿಂಗ್ ವಿಂಡೋ ಮುಗಿಯಲು ಇನ್ನೊಂದು ದಿನ ಬಾಕಿ ಇರುವಂತೆಯೇ ಹಾರ್ದಿಕ್ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಹಾರ್ದಿಕ್​ ಪಾಂಡ್ಯ ಮುಂಬೈ ಇಂಡಿಯನ್ಸ್​ಗೆ ಮರಳಲಿದ್ದಾರೆ ಎಂಬ ವರದಿಗಳಿವೆ. ಆದರೆ …

Read More »

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಅಂಬರೀಶ್ ಹುಟ್ಟೂರಾದ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಗೆ ಪತ್ನಿ, ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ಕೊಟ್ಟು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಲತಾ ಅವರ ಜೊತೆ ಹಿರಿಯ ನಟ ದೊಡ್ಡಣ್ಣ, ರಾಕ್​ಲೈನ್ ವೆಂಕಟೇಶ್ ಸಹ ಭಾಗಿಯಾಗಿದ್ದರು. ಮಾಧ್ಯಮದವರ ಜೊತೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಇಂದು ಅಂಬರೀಶ್ …

Read More »