Breaking News
Home / ನವದೆಹಲಿ (page 2)

ನವದೆಹಲಿ

ದೆಹಲಿಯಲ್ಲಿ ಖಾಸಗಿ ಕಂಪನಿಯ​ ಹಿರಿಯ ಮ್ಯಾನೇಜರ್​ಗೆ ಗುಂಡಿಕ್ಕಿ ಹತ್ಯೆ

ನವದೆಹಲಿ: ಖಾಸಗಿ ಆನ್​ಲೈನ್​ ಶಾಪಿಂಗ್​ ವೆಬ್​ಸೈಟ್​ವೊಂದರ​ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹರ್​ಪ್ರೀತ್​ ಗಿಲ್​ (36) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಸಂಬಂಧಿ ಗೋವಿಂದ್​ ಸಿಂಗ್​ ಎಂಬುವವರು ಕೂಡ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಭಜನಪುರ ಪ್ರದೇಶದ ಸುಭಾಷ್ ವಿಹಾರ ಪ್ರದೇಶದಲ್ಲಿ ಕಳೆದ ರಾತ್ರಿ 11.20ರ ಸುಮಾರಿಗೆ ಐವರು ದುಷ್ಕರ್ಮಿಗಳ ತಂಡ …

Read More »

ವಿಶ್ವಕಪ್​ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಅವರು ಈ ವರ್ಷ ನ್ಯೂಜಿಲ್ಯಾಂಡ್​ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ. ನ್ಯೂಜಿಲ್ಯಾಂಡ್​​​​ನಲ್ಲಿ ಜಸ್ಪ್ರಿತ್ ಬುಮ್ರಾಗೆ ಸರ್ಜರಿ: ಈ ಕ್ರಮದಲ್ಲಿ ಟೀಂ ಇಂಡಿಯಾಗೆ ಶೀಘ್ರದಲ್ಲೇ …

Read More »

ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ

ನವದೆಹಲಿ : ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇದುವರೆಗೂ ಸುಮಾರು 39ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ, ಭೂ ಕುಸಿತದಿಂದ ಅಪಾರ ಹಾನಿ ಉಂಟಾಗಿದೆ. ಉತ್ತರಾಖಂಡ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಸೇರಿದಂತೆ ವಿವಿಧೆಡೆ ಭಾರತೀಯ ಸೇನೆ ಮತ್ತು ಎನ್​ಡಿಆರ್​ಎಫ್​ ತಂಡಗಳು ಭರದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್​ ಮತ್ತು ಹರಿಯಾಣದಲ್ಲಿ ಒಟ್ಟು 9 …

Read More »

ಮಳೆ ಕೊರತೆ.. ಅಕ್ಕಿ ಬೆಲೆಯೂ ಆಗಲಿದೆ ದುಬಾರಿ

ನವದೆಹಲಿ: ದೇಶದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಇದಕ್ಕೆ ಕಾರಣ ಹೆಚ್ಚಿದ ಮಾರುಕಟ್ಟೆ ಮತ್ತು ಕಡಿಮೆ ಪೂರೈಕೆ ಆಗಿದೆ. ಸದ್ಯ ಇದರ ಬೆನ್ನಲ್ಲೇ ಜನರು ಮತ್ತೊಂದು ಅಗತ್ಯ ಆಹಾರ ಸಾಮಗ್ರಿಯ ಬರ ಎದುರಿಸುವಂತೆ ಆಗಲಿದೆ. ಅಚ್ಚರಿ ಆದರೂ ಹೌದು, ಮಳೆ ಕೊರತೆ ಮತ್ತು ಕಡಿಮೆ ಬಿತ್ತನೆಯಿಂದಾಗಿ ಅಕ್ಕಿ ಇಳುವರಿ ಕಡಿಮೆಯಾಗಿದೆ. ಇದರ ಕೊರತೆ ಎದುರಾಗುವ ದಿನ ಸನ್ನಿಹಿತವಾಗಿದೆ ಎಂದು ಮೋತಿಲಾಲ್​ ಒಸ್ವಾಲ್​ ಫೈನಾನ್ಸ್​ ಸರ್ವೀಸ್​ ವರದಿಯಲ್ಲಿ ತಿಳಿಸಿದೆ. ಜಾಗತಿಕವಾಗಿ ಅಕ್ಕಿ …

Read More »

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ. ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು …

Read More »

212 ವಿಧಾನಸಭೆ ಕ್ಷೇತ್ರಗಳು, 61 ಲೋಕಸಭೆ ಕ್ಷೇತ್ರಗಳ ಖರ್ಗೆ ಕಣ್ಣು.. ನಾಳೆ ಹೊಸ ಅಭಿಯಾನಕ್ಕೆ ಚಾಲನೆ

ನವದೆಹಲಿ: ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಸಾಂಪ್ರದಾಯಿಕ ದಲಿತ ಮತಬ್ಯಾಂಕ್‌ ತನ್ನತ್ತ ಸೆಳೆಯಲು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ 212 ಆಯ್ದ ವಿಧಾನಸಭೆ ಕ್ಷೇತ್ರಗಳು ಮತ್ತು 61 ಸಂಸದೀಯ ಕ್ಷೇತ್ರಗಳಲ್ಲಿ ಈ ಸಮುದಾಯವನ್ನು ಸಜ್ಜುಗೊಳಿಸಲು ಜುಲೈ 5ರಂದು ಅಭಿಯಾನ ಆರಂಭಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ತನ್ನ ಪ್ರಜಾಪ್ರಭುತ್ವದ ರುಜುವಾತುಗಳು ಹಾಗೂ ಅಂತರ್ಗತ ರಾಜಕೀಯದ ಸೂಚಕವಾಗಿ ದಲಿತ ನಾಯಕ ಖರ್ಗೆ ಅವರನ್ನು ಪಕ್ಷದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡಿತ್ತು. ಅಧಿಕಾರ ವಹಿಸಿಕೊಂಡ …

Read More »

ಬಿಜೆಪಿ ಸಜ್ಜುಗೊಳಿಸಲು ಅಮಿತ್ ಶಾ, ನಡ್ಡಾ, ಸಂತೋಷ್ ಚಾಲನೆ: ಯುವ ನಾಯಕರ ಪಡೆ ಕಟ್ಟಲು ಸಿದ್ಧತೆ

ನವದೆಹಲಿ: ಮುಂಬರುವ ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸಜ್ಜಾಗುತ್ತಿದೆ. ಇದಕ್ಕೂ ಮುನ್ನ ಪಕ್ಷದ ಸಂಘಟನೆಯಲ್ಲಿ ಸಂಭವನೀಯ ಬದಲಾವಣೆಗಳು ತರುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಹಿರಿಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ಮೂವರು ಪ್ರಮುಖ ನಾಯಕರು ಸಂಘ ಪರಿವಾರದ ಸದಸ್ಯರೊಂದಿಗೆ ಮಹತ್ವದ …

Read More »

ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳ ಹರಸಾಹಸ

ನವದೆಹಲಿ: ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿವೆ. ಈ ನಡುವೆ ಅಲ್ಲಿನ ಹಿಂಸಾಚಾರ ಕೊನೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮುಂದುವರೆಸಿದೆ. ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಷ್ಟ್ರರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟಗೆ ಸಭೆ ಆರಂಭವಾಗಲಿದೆ. ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ಘಟನೆಗಳು ನಡೆಯುತ್ತಿರುವುದರಿಂದ, ಶಾಂತಿ ಭಂಗ ತಡೆಯುವ ಪ್ರಯತ್ನದಲ್ಲಿ …

Read More »

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಕಾಂಗ್ರೆಸ್ ಮೊದಲ ಪಟ್ಟಿ ಯುಗಾದಿಗೆ?

ನವದೆಹಲಿ: ಕರ್ನಾಟಕ ವಿಧಾನಸಭೆಯ ಮುಂಬರುವ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ಅಂತಿಮಗೊಳಿಸಿದ್ದು, ಮೊದಲ ಪಟ್ಟಿ ಇದೇ 22ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಪಕ್ಷದ ಹಾಲಿ ಶಾಸಕರಿರುವ ಕ್ಷೇತ್ರಗಳೂ ಸೇರಿದಂತೆ 125 ಕ್ಷೇತ್ರಗಳಿಗೆ ಒಬ್ಬ ಸಂಭವನೀಯ ಅಭ್ಯರ್ಥಿಗಳ …

Read More »

2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್‌ ಬಿಗ್‌ ಪ್ಲ್ಯಾನ್‌?

ಬೆಂಗಳೂರು, ಮಾರ್ಚ್‌ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್‌ ಟೈಮ್ಸ್‌’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …

Read More »