Breaking News

ನವದೆಹಲಿ

7ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ನೋಯ್ಡಾ ಗಡಿಯಲ್ಲಿ ರೈತರ ಜಮಾವಣೆ

ನವದೆಹಲಿ, ಡಿ.2-ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 7ನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ರೈತರು ನೋಯ್ಡಾ-ಉತ್ತರ ಪ್ರದೇಶ ಗಡಿ ಭಾಗದಲ್ಲಿ ಧರಣಿ ನಡೆಸುತ್ತಿರುವುದರಿಂದ ದೆಹಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ರೈತ ಮುಖಂಡರು ಮತ್ತು ಸರ್ಕಾರದ ನಡುವಿನ ಮಾತುಕತೆ ಮುರಿದು ಬೀಳುತ್ತಿದ್ದಂತೆ ರೈತರು ತಮ್ಮ ಹೋರಾಟ ಮುಂದುವರೆಸಿದ್ದು, ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಉತ್ತರಪ್ರದೇಶ ಸಂಪರ್ಕಿಸುವ ಪ್ರಮುಖ ರಸ್ತೆ ಬಂದ್ ಆಗಿದೆ. ಪಂಜÁಬ್ ಮತ್ತು ಹರಿಯಾಣ ರೈತರು …

Read More »

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.   ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …

Read More »

ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೊಲ್ ಡೀಸೆಲ್ ಬೆಲೆಗೆ ಏನಂತೀರಿ ಇದು ಸರೀನಾ ವೀಕ್ಷಕರು ಕಾಮೆಂಟ್ ಮಾಡಿ ತಿಳಿಸಿ

ನವದೆಹಲಿ: ವಾಹನ ಸವಾರರಿಗೆ ಇಂದೂ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಇಂದು ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ, ಡೀಸೆಲ್ ಬೆಲೆಯಲ್ಲಿ 26 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 81.89 ರೂ. ಇದ್ದರೆ ಡೀಸೆಲ್ ಬೆಲೆ ಲೀಟರ್ ಗೆ 71.86 ರೂ. ಗೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆಯಲ್ಲಿ 19 ಪೈಸೆ …

Read More »

ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ನವದೆಹಲಿ : ಗುರುವಾರ ಬೆಳಿಗ್ಗೆ ದಕ್ಷಿಣ ದೆಹಲಿಯ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದ್ದು ಅದರಲ್ಲಿ ಮಾತನಾಡಿದ ವ್ಯಕ್ತಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬಂದ ಕೂಡಲೇ ಎಚ್ಚೆತ್ತ ಪೆÇಲೀಸ್ ಇಲಾಖೆ ಕರೆ ಬಂದ ಮೂಲಗಳನ್ನು ಪತ್ತೆ ಹಚ್ಚಲು ಶುರುಮಾಡಿದ್ದಾರೆ ಅಷ್ಟೂತ್ತಿಗೆ ಬೆದರಿಕೆ ಕರೆ ಬಂದಿದ್ದು ದೆಹಲಿಯ ದಕ್ಷಿಣಪುರಿ ಪ್ರದೇಶದಿಂದ ಎಂಬುದು ತಿಳಿದುಬಂದಿದೆ ಕೂಡಲೇ ಅಲ್ಲಿಗೆ ಹೋರಾಟ ಪೊಲೀಸರ ತಂಡ …

Read More »

ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ,:ಕುನಾಲ್ ಕಮ್ರಾ

ನವದೆಹಲಿ: ತಾನು ಕ್ಷಮೆ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ, ಸುಪ್ರೀಂಕೋರ್ಟ್ ಕಾರ್ಯವೈಖರಿ ಟೀಕಿಸಿರುವ ಟ್ವೀಟ್‍ಗಳನ್ನು ಡಿಲೀಟ್ ಮಾಡುವುದಿಲ್ಲ ಎಂದು ಸ್ಟಾಂಡ್‍ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಸ್ಪಷ್ಟಪಡಿಸಿದ್ದಾರೆ.   ಅರ್ನಬ್ ಗೋಸ್ವಾಮಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್ ನಿರ್ಧಾರವನ್ನು ಕಾಮ್ರಾ ಟ್ವೀಟ್ ಮಾಡಿ ಟೀಕಿಸಿದ್ದರು. ‘ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ’ ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು 8 ಮಂದಿಗೆ ಅವಕಾಶ ನೀಡಿದ್ದರು. ಕ್ಷಮಾಪಣೆ …

Read More »

ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ. 2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ …

Read More »

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು:

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ. ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.

Read More »