ನವದೆಹಲಿ: ಕರ್ನಾಟಕ ವಿಧಾನಸಭೆಯ ಮುಂಬರುವ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ಅಂತಿಮಗೊಳಿಸಿದ್ದು, ಮೊದಲ ಪಟ್ಟಿ ಇದೇ 22ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಪಕ್ಷದ ಹಾಲಿ ಶಾಸಕರಿರುವ ಕ್ಷೇತ್ರಗಳೂ ಸೇರಿದಂತೆ 125 ಕ್ಷೇತ್ರಗಳಿಗೆ ಒಬ್ಬ ಸಂಭವನೀಯ ಅಭ್ಯರ್ಥಿಗಳ …
Read More »2023 : ಪಕ್ಷ, ನಾಯಕರ ಮೇಲೆ ಬಿಎಸ್‌ವೈ ಪ್ರಭಾವವನ್ನು ತಗ್ಗಿಸಲು ಬಿಜೆಪಿ ಹೈಕಮಾಂಡ್ ಬಿಗ್ ಪ್ಲ್ಯಾನ್?
ಬೆಂಗಳೂರು, ಮಾರ್ಚ್ 13: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭಾರತೀಯ ಜನತಾ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಲಿಂಗಾಯತ ಪ್ರಬಲ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಭಾವವನ್ನು ಮಿತಿಗೊಳಿಸಲು ಕೇಂದ್ರ ನಾಯಕತ್ವದ ಕ್ರಮವಾಗಿದೆ. ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ತಿಳಿದಿರುವ ನಾಯಕರೊಬ್ಬರು ಇದನ್ನು ‘ಹಿಂದೂಸ್ತಾನ್ ಟೈಮ್ಸ್’ಗೆ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಅನುಭವಿ ರಾಜಕಾರಣಿ ಯಡಿಯೂರಪ್ಪ ಅವರು …
Read More »ಬಂಡೂರಿ ಯೋಜನೆಗೆ 22 ಹೆಕ್ಟೇರ್ ಅರಣ್ಯ ಬಳಕೆ
ನವದೆಹಲಿ: ಮಹದಾಯಿ ಯೋಜನೆಯ ಬಂಡೂರಿ ನಾಲಾ ತಿರುವು ಯೋಜನೆಗೆ 22.80 ಹೆಕ್ಟೇರ್ ಅರಣ್ಯವನ್ನು ಬಳಸಿಕೊಳ್ಳಲು ಅನುಮೋದನೆ ನೀಡುವಂತೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಬಂಡೂರಿ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. …
Read More »ಅಕ್ರಮ ಗಣಿಗಾರಿಕೆ: ವಾರ್ಷಿಕ ₹20 ಸಾವಿರ ಕೋಟಿ ನಷ್ಟ
ಬೆಂಗಳೂರು: ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ಸುಮಾರು ₹ 18 ಸಾವಿರ ಕೋಟಿಯಿಂದ ₹ 20 ಸಾವಿರ ಕೋಟಿಯಷ್ಟು ರಾಜಧನ ವರಮಾನ ನಷ್ಟವಾಗುತ್ತಿದೆ. ಅದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ (ಪಿಎಸಿ) ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಮಹಾಲೇಖಪಾಲರು 2017-18ನೇ ಸಾಲಿನ ವರದಿಯಲ್ಲಿ ಗಣಿ ಗುತ್ತಿಗೆ ಕುರಿತು ಉಲ್ಲೇಖಿಸಿದ್ದ ಅಂಶಗಳ ಕುರಿತು ವಿಧಾನಸಭೆಯಲ್ಲಿ …
Read More »ಪ್ರಹ್ಲಾದ್ ಜೋಶಿ ಮುಂದಿನ ಸಿಎಂ ‘ ಎಂಬ ಹೆಚ್ಡಿಕೆ ಹೇಳಿಕೆಗೆ ಸಿಎಂ ಬೊಮ್ಮಾಯಿ ಟಾಂಗ್
ನವದೆಹಲಿ : ಯಾರಿಗೂ ಬರದ ನ್ಯೂಸ್ ಗಳು ಕುಮಾರಸ್ವಾಮಿಗೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಮುಂದಿನ ಸಿಎಂ ಪ್ರಹ್ಲಾದ್ ಜೋಶಿ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕುಮಾರಣ್ಣನಿಗೆ ಇಂತಹ ಮಾಹಿತಿ ಎಲ್ಲಿಂದ ಬರುತ್ತೋ ಗೊತ್ತಿಲ್ಲ .ಹೆಚ್ಡಿಕೆ ಇಂತಹ ವಿಚಾರಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಸರ್ಕಾರದ ಪ್ರಸ್ತುತ ಕಾರ್ಯಕ್ರಮದ ಬಗ್ಗೆ ಮಾತನಾಡಲಿ ಎಂದರು.ಕುಮಾರಸ್ವಾಮಿ ಮೊದಲು …
Read More »ರೈತರೇ ಗಮನಿಸಿ ; 150 ಡ್ರೋನ್ ಅರ್ಜಿಗಳಿಗೆ ‘ಸಾಲ’ ಮಂಜೂರು,
ದೆಹಲಿ : ಇಂದಿನ ಆಧುನಿಕ ಯುಗದಲ್ಲಿ ತಂತ್ರಗಳು ಮತ್ತು ಯಂತ್ರಗಳ ಬಳಕೆಯಿಂದ ಪ್ರತಿಯೊಂದು ಕೆಲಸವೂ ನಿಮಿಷಗಳಲ್ಲಿ ಮುಗಿಯುತ್ತದೆ. ಈ ಕಾರಣದಿಂದಲೇ ಈಗ ಕೃಷಿಯಲ್ಲೂ ಯಾಂತ್ರೀಕರಣಕ್ಕೆ ಉತ್ತೇಜನ ಸಿಕ್ಕಿದೆ. ಪ್ರತಿಯೊಂದು ರೀತಿಯ ಕೃಷಿ ಕೆಲಸಗಳಿಗೆ ಯಂತ್ರಗಳು ಮತ್ತು ತಂತ್ರಗಳನ್ನ ಕಂಡುಹಿಡಿಯಲಾಗುತ್ತಿದೆ. ಏತನ್ಮಧ್ಯೆ, ಬೆಳೆಗೆ ಸಿಂಪಡಿಸಲು ಮತ್ತು ಮೇಲ್ವಿಚಾರಣೆಗಾಗಿ ಕೃಷಿ ಡ್ರೋನ್ಗಳ ಬಳಕೆಯನ್ನ ಉತ್ತೇಜಿಸಲಾಗುತ್ತಿದೆ. 31 ಮಾರ್ಚ್ 2023 ರ ವೇಳೆಗೆ ಸುಮಾರು 5,000 ಡ್ರೋನ್ಗಳನ್ನ ಲಭ್ಯಗೊಳಿಸುವುದು ಗುರಿಯಾಗಿದೆ. ಕಿಸಾನ್ ಪುಷ್ಕರ್ ಯೋಜನೆಯಡಿ, …
Read More »ಮಹದಾಯಿ ಯೋಜನೆಗೆ ಅನುಮೋದನೆ: ಕೇಂದ್ರ ಜಲಶಕ್ತಿ ಸಚಿವ ಶೇಖಾವತ್‌ಗೆ ಮನವಿ
ನವದೆಹಲಿ: ಮಹದಾಯಿ (ಕಳಸಾ-ಬಂಡೂರಿ) ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಗುರುವಾರ ಮನವಿ ಸಲ್ಲಿಸಿದರು. ಇಲ್ಲಿನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ನಿವಾಸದಲ್ಲಿ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಮಹದಾಯಿ ಯೋಜನೆಯ ಜಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಒಂದು …
Read More »ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು. 24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ …
Read More »ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ
ನವದೆಹಲಿ: ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಒತ್ತಾಯಿಸಿದ್ದಾರೆ. ಹೊಸ ಕರೆನ್ಸಿ ನೋಟುಗಳ ಒಂದು ಬದಿಯಲ್ಲಿ ಮಹಾತ್ಮಾ ಗಾಂಧಿಯವರ (Mahatma Gandhi) ಫೋಟೋ ಮತ್ತು ಇನ್ನೊಂದು ಬದಿಯಲ್ಲಿ ಲಕ್ಷ್ಮಿ ದೇವಿ (Lakshmi) ಮತ್ತು ಗಣೇಶನ (Ganesh) ಫೋಟೋಗಳನ್ನು ಮುದ್ರಿಸಬಹುದು. ಕರೆನ್ಸಿ ನೋಟುಗಳ ಮೇಲೆ ಎರಡು ದೇವರ …
Read More »58 R.T.O.ಸೇವೆಗಳು ಆನ್‌ಲೈನ್; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ
ನವದೆಹಲಿ: ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್‌ಲೈನ್‌ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್ ಲೈಸೆನ್ಸ್, …
Read More »