Breaking News

ನವದೆಹಲಿ

ಭಾರತದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನ – ಬೆಳ್ಳಿ ದರವೂ ಭಾರೀ ಏರಿಕೆ

ನವದೆಹಲಿ: ಭಾರತದಲ್ಲಿ ಚಿನ್ನದ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಇದೆ ಮೊದಲ ಬಾರಿಗೆ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ. 10 ಗ್ರಾಂ 24 ಕ್ಯಾರೆಟ್‌ ಶುದ್ಧ ಚಿನ್ನದ ಬೆಲೆ ಬೆಂಗಳೂರಿನಲ್ಲಿ 50,720 ರೂ. ಆಗಿದ್ದರೆ ಚೆನ್ನೈನಲ್ಲಿ 51,380 ರೂ. ತಲುಪಿದೆ. 10 ಗ್ರಾಂ 22 ಕ್ಯಾರೆಟ್‌ ಚಿನ್ನದ ಬೆಲೆ ಬೆಂಗಳೂರಿನಲ್ಲಿ 46,520 ರೂ.ಗೆ ಏರಿಕೆ ಆಗಿದ್ದರೆ ಚೆನ್ನೈನಲ್ಲಿ 47,100 ರೂ. ತಲುಪಿದೆ. ಚಿನ್ನದ ಜೊತೆ ಬೆಳ್ಳಿ …

Read More »

ವಿದೇಶಗಳಿಂದ ದೆಹಲಿಗೆ ಬರುವವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಕಡ್ಡಾಯ ..

ನವದೆಹಲಿ,ಜು.22- ಕೊರೊನಾ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗಾಗಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾಗಬೇಕು. ಈ ಸಾಂಸ್ಥಿಕ ಕ್ವಾರೆಂಟೈನ್ ವೆಚ್ಚವನ್ನು ಆ ವ್ಯಕ್ತಿಗಳೇ ಪಾವತಿಸಬೇಕಿದೆ. ಏಳು ದಿನಗಳ ಮಟ್ಟಿಗೆ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ …

Read More »

35 ಕೋಟಿ ರೂ. ಆಫರ್’- ಕಾಂಗ್ರೆಸ್ ಶಾಸಕನಿಗೆ ಲೀಗಲ್ ನೋಟಿಸ್ ಕೊಟ್ಟ ಸಚಿನ್ ಪೈಲಟ್

ನವದೆಹಲಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ತಮ್ಮ ವಿರುದ್ಧ ಕೇಳಿ ಬಂದಿದ್ದ 35 ಕೋಟಿ ರೂ. ಹಣದ ಆಮಿಷದ ಆರೋಪ ರಹಿತ ಎಂದಿದ್ದು, ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ …

Read More »

ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನ………..

ಶ್ರೀನಗರ: ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರೋಡೆಗೆ ಯತ್ನಿಸಿದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇಬ್ಬರು ಯುವಕರು ಆಟಿಕೆ ಬಂದೂಕು ಹಿಡಿದು ನಾಥನುಸಾ ಗ್ರಾಮದ ಗ್ರಾಮೀಣ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಗ್ರಾಹಕರಿಗೆ ಕೈಯಲ್ಲಿರುವ ಗನ್ ಆಟಿಕೆ ಎಂದು …

Read More »

N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್‌ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …

Read More »

ಚಳಿಗಾಲದಲ್ಲಿ ಹೆಚ್ಚಾಗಲಿದೆ ಕೊರೋನಾ ಅಟ್ಟಹಾಸ,

ನವದೆಹಲಿ, ಜು.20- ಮಾರಣಾಂತಿಕ ಕೊರೊನಾ ವೈರಸ್ ಈಗಾಗಲೇ ದೇಶದಲ್ಲಿ ಸಾಮೂದಾಯಿಕವಾಗಿ ಹರಡಿದೆಯೇ? ಎಂಬ ಪ್ರಶ್ನೆ ಕಾಡುತ್ತಿದೆ. ಈ ನಡುವೆ ಮಳೆ ಮತ್ತು ಚಳಿಗಾಲದ ಸಂದರ್ಭದಲ್ಲಿ ವೈರಸ್ ಹರಡುವ ವೇಗ ಪಾದರಸದಂತೆ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮತ್ತೊಂದು ಆಘಾತಕಾರಿ ವಿಚಾರವನ್ನು ಭುವನೇಶ್ವರ್ ಐಐಟಿ ಮತ್ತು ಏಮ್ಸ್ ಸಂಶೋಧಕರು ಜಂಟಿಯಾಗಿ ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ. ಐಐಟಿ ಭುವನೇಶ್ವರ ಮತ್ತು ಏಮ್ಸ್ ವಿಜ್ಞಾನಿಗಳು ನಡೆಸಿದ ಅಧ್ಯಯನವು ಮಾನ್ಸೂನ್ ಮತ್ತು ಚಳಿಗಾಲದಲ್ಲಿ ಕೊರೊನಾ ವೈರಸ್ ಕೋವಿಡ್ …

Read More »

ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ.: ರಾಹುಲ್ ಗಾಂಧಿ

ನವದೆಹಲಿ: ಕೊರೊನಾ ವೈರಸ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ. ಈ ಭ್ರಮೆ ಶೀಘ್ರದಲ್ಲೇ ಬಯಲಾಗಲಿದ್ದು, ಭಾರತ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಮೂರು ವಿಷಯಗಳ ಕುರಿತು ಗಮನ ಸೆಳೆದಿರುವ ರಾಹುಲ್ ಗಾಂಧಿ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕುರಿತು …

Read More »

ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಭಾರತದ ಕ್ರಿಕೆಟರ್ ಮತ್ತು ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್‍ಡೌನ್‍ನಿಂದ ಕ್ರಿಕೆಟ್‍ನಿಂದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಈ ವೇಳೆ ಸದಾ ಸಾಮಾಜಿಕ ಜಾಲತಣದಲ್ಲಿ ಸಕ್ರಿಯವಾಗಿರುವ ಹರ್ಭಜನ್ ಅವರು, ತಮ್ಮ ಟ್ವಿಟ್ಟರ್ ನಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕರ್ನಾಟಕದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ …

Read More »

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …

Read More »

ಶಾಕಿಂಗ್ ನ್ಯೂಸ್ : ಭಾರತದಲ್ಲಿ ಈಗ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್!

ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ. 12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ …

Read More »