ನವದೆಹಲಿ: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಅಂದರೆ 1999ರ ಜುಲೈ 26ರಂದು 60 ದಿನಗಳ ಕಾರ್ಗಿಲ್ ಕದನ ಅಂತ್ಯವಾಗಿತ್ತು. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ.ಭಾರತೀಯ ಸೈನ್ಯದ ಶೌರ್ಯ, …
Read More »ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ…………
ಪ್ರಯಾಗ್‍ರಾಜ್, -ಉತ್ತರಪ್ರದೇಶದ ಆಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ. ಕೊರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ನಡೆಸಲು ಉದ್ದೇಶಿಸಲಾಗಿರುವ ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‍ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಅನ್‍ಲಾಕ್ 2.0 ಉಲ್ಲಂಘನೆ ಕಾರಣವನ್ನು ಮುಂದೊಡ್ಡಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ದೆಹಲಿ ಮೂಲದ ಹಿರಿಯ ವಕೀಲ ಸಾಕೇಶ್ ಗೋಖಲೆ ಕೋರ್ಟ್‍ಗೆ ಮನವಿ …
Read More »ಬಾಬರಿ ಮಸೀದಿ ಧ್ವಂಸ ಪ್ರಕರಣ : ಅಡ್ವಾಣಿ ಹೇಳಿಕೆ ದಾಖಲು
ಲಖನೌ, ಜು.24- ಅಯೋಧ್ಯೆಯಲ್ಲಿನ ಪ್ರಾಚೀನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ಬಿಜೆಪಿ ಧುರೀಣ ಮತ್ತು ಮಾಜಿ ಉಪ ಪ್ರಧಾನಮಂತ್ರಿ ಲಾಲ್‍ಕೃಷ್ಣ ಅಡ್ವಾಣಿ ಅವರ ಹೇಳಿಕೆಗಳನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ. ಅಡ್ವಾಣಿ ಅವರು ವಿಡಿಯೋ ಲಿಂಕ್ ಮೂಲಕ ನೀಡಿದ ಹೇಳಿಕೆಯನ್ನು ವಿಶೇಷ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರ ನೇತೃತ್ವದ ನ್ಯಾಯಾಲಯವು ದಾಖಲಿಸಿಕೊಂಡಿತ್ತು. ನಿನ್ನೆ ಬಿಜೆಪಿ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಷಿ ವಿಡಿಯೋ …
Read More »ಸರಳವಾಗಿ ಸ್ವಾತಂತ್ರ್ಯೋತ್ಸವ ಅಚರಣೆಗೆ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ
ನವದೆಹಲಿ, ಜು.24-ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಸಡಗರ-ಸಂಭ್ರಮಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸುತ್ತೋಲೆಗಳನ್ನು ಹೊರಡಿಸಿ ಅತ್ಯಂತ ಸರಳವಾಗಿ ಮತ್ತು ಜಾಗ್ರತೆಯಿಂದ ರಾಷ್ಟ್ರ ಹಬ್ಬ ಆಚರಿಸುವಂತೆ ತಿಳಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸ್ವಾತಂತ್ರ ದಿನಾಚರಣೆಯಂದು ಅನುಸರಿಸಬೇಕಾದ ಕ್ರಮಗಳ ಕುರಿತು ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅತಿ ಹೆಚ್ಚು ಜನರು ಸೇರಬಾರದು. ಅತ್ಯಂತ …
Read More »ಆ.15ರಂದು ಕೊರೊನಾ ವಾರಿಯರ್ಸ್‍ಗೆ ವಿಶೇಷ ಗೌರವ………
ನವದೆಹಲಿ: ಮಹಾಮಾರಿ ಕೋವಿಡ್-19 ವಿರುದ್ಧ ಮೊದಲ ಸಾಲಿನಲ್ಲಿ ನಿಂತು ಹೋರಾಟ ನಡೆಸಿದ್ದ ಕೊರೊನಾ ವಾರಿಯರ್ಸ್‍ಗೆ ಈ ಬಾರಿಯ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ ಭಾಗವಹಿಸಲು ಅಹ್ವಾನ ನೀಡಲಾಗಿದ್ದು, ಆ ಮೂಲಕ ವೈದ್ಯರು, ಪೌರಕಾರ್ಮಿಕರು, ಪೊಲೀಸರು, ಇತರ ಅಧಿಕಾರಿಗಳಿಗೆ ವಿಶೇಷ ಗೌರವ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ವಿಶೇಷ ಸೇವೆ ಮಾಡಿದ್ದ ವಾರಿಯರ್ಸ್‍ಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು …
Read More »ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ……
ನವದೆಹಲಿ: ಡಿಸೆಂಬರ್ 31ರವರೆಗೆ ವರ್ಕ್ ಫ್ರಂ ಹೋಂ ಮುಂದುವರಿಸುವಂತೆ ಖಾಸಗಿ ಕಂಪನಿಗಳಿಗೆ ಸರ್ಕಾರ ತಿಳಿಸಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಳವಾಗ್ತಿದ್ದಂತೆ ಸರ್ಕಾರದ ಸಲಹೆ ಮೇರೆಗೆ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡುವಂತೆ ತಿಳಿಸಿದ್ದವು. ಐಟಿ ಕಂಪನಿಗಳ ಶೇ.85 ರಷ್ಟು ಉದ್ಯೋಗಿಗಳು ಸದ್ಯ ಮನೆಯಿಂದ ಕೆಲಸ ಮಾಡುತ್ತಿದ್ದಾರೆ.ದೇಶವು ಅನ್‍ಲಾಕ್ ಆಗಿದ್ದರೂ ಕೊರೊನಾ ಆತಂಕ ಮಾತ್ರ ಕಡಿಮೆಯಾಗಿಲ್ಲ. ಸರ್ಕಾರ ಜನದಟ್ಟಣೆ ತಡೆಯುವ ಉದ್ದೇಶದಿಂದ ಐಟಿ, ಬಿಪಿಓ ಸೇರಿದಂತೆ ಖಾಸಗಿ ಕಂಪನಿಗಳು …
Read More »ಭಾರತದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನ – ಬೆಳ್ಳಿ ದರವೂ ಭಾರೀ ಏರಿಕೆ
ನವದೆಹಲಿ: ಭಾರತದಲ್ಲಿ ಚಿನ್ನದ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಇದೆ ಮೊದಲ ಬಾರಿಗೆ ಚಿನ್ನದ ಬೆಲೆ 50 ಸಾವಿರ ರೂ. ಗಡಿ ದಾಟಿದೆ. 10 ಗ್ರಾಂ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬೆಂಗಳೂರಿನಲ್ಲಿ 50,720 ರೂ. ಆಗಿದ್ದರೆ ಚೆನ್ನೈನಲ್ಲಿ 51,380 ರೂ. ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಬೆಂಗಳೂರಿನಲ್ಲಿ 46,520 ರೂ.ಗೆ ಏರಿಕೆ ಆಗಿದ್ದರೆ ಚೆನ್ನೈನಲ್ಲಿ 47,100 ರೂ. ತಲುಪಿದೆ. ಚಿನ್ನದ ಜೊತೆ ಬೆಳ್ಳಿ …
Read More »ವಿದೇಶಗಳಿಂದ ದೆಹಲಿಗೆ ಬರುವವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಕಡ್ಡಾಯ ..
ನವದೆಹಲಿ,ಜು.22- ಕೊರೊನಾ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗಾಗಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾಗಬೇಕು. ಈ ಸಾಂಸ್ಥಿಕ ಕ್ವಾರೆಂಟೈನ್ ವೆಚ್ಚವನ್ನು ಆ ವ್ಯಕ್ತಿಗಳೇ ಪಾವತಿಸಬೇಕಿದೆ. ಏಳು ದಿನಗಳ ಮಟ್ಟಿಗೆ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ …
Read More »35 ಕೋಟಿ ರೂ. ಆಫರ್’- ಕಾಂಗ್ರೆಸ್ ಶಾಸಕನಿಗೆ ಲೀಗಲ್ ನೋಟಿಸ್ ಕೊಟ್ಟ ಸಚಿನ್ ಪೈಲಟ್
ನವದೆಹಲಿ: ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್ ತಮ್ಮ ವಿರುದ್ಧ ಕೇಳಿ ಬಂದಿದ್ದ 35 ಕೋಟಿ ರೂ. ಹಣದ ಆಮಿಷದ ಆರೋಪ ರಹಿತ ಎಂದಿದ್ದು, ಆರೋಪ ಮಾಡಿದ್ದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಅವರಿಗೆ ಲೀಗಲ್ ನೋಟಿಸ್ ನೀಡಿದ್ದಾರೆ. ಸಚಿನ್ ಪೈಲಟ್ ತಮ್ಮನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ 35 ಕೋಟಿ ರೂ. ನೀಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ …
Read More »ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನ………..
ಶ್ರೀನಗರ: ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರೋಡೆಗೆ ಯತ್ನಿಸಿದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇಬ್ಬರು ಯುವಕರು ಆಟಿಕೆ ಬಂದೂಕು ಹಿಡಿದು ನಾಥನುಸಾ ಗ್ರಾಮದ ಗ್ರಾಮೀಣ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಗ್ರಾಹಕರಿಗೆ ಕೈಯಲ್ಲಿರುವ ಗನ್ ಆಟಿಕೆ ಎಂದು …
Read More »
Laxmi News 24×7