Breaking News

ನವದೆಹಲಿ

N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್‌ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …

Read More »

ಚಳಿಗಾಲದಲ್ಲಿ ಹೆಚ್ಚಾಗಲಿದೆ ಕೊರೋನಾ ಅಟ್ಟಹಾಸ,

ನವದೆಹಲಿ, ಜು.20- ಮಾರಣಾಂತಿಕ ಕೊರೊನಾ ವೈರಸ್ ಈಗಾಗಲೇ ದೇಶದಲ್ಲಿ ಸಾಮೂದಾಯಿಕವಾಗಿ ಹರಡಿದೆಯೇ? ಎಂಬ ಪ್ರಶ್ನೆ ಕಾಡುತ್ತಿದೆ. ಈ ನಡುವೆ ಮಳೆ ಮತ್ತು ಚಳಿಗಾಲದ ಸಂದರ್ಭದಲ್ಲಿ ವೈರಸ್ ಹರಡುವ ವೇಗ ಪಾದರಸದಂತೆ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮತ್ತೊಂದು ಆಘಾತಕಾರಿ ವಿಚಾರವನ್ನು ಭುವನೇಶ್ವರ್ ಐಐಟಿ ಮತ್ತು ಏಮ್ಸ್ ಸಂಶೋಧಕರು ಜಂಟಿಯಾಗಿ ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ. ಐಐಟಿ ಭುವನೇಶ್ವರ ಮತ್ತು ಏಮ್ಸ್ ವಿಜ್ಞಾನಿಗಳು ನಡೆಸಿದ ಅಧ್ಯಯನವು ಮಾನ್ಸೂನ್ ಮತ್ತು ಚಳಿಗಾಲದಲ್ಲಿ ಕೊರೊನಾ ವೈರಸ್ ಕೋವಿಡ್ …

Read More »

ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ.: ರಾಹುಲ್ ಗಾಂಧಿ

ನವದೆಹಲಿ: ಕೊರೊನಾ ವೈರಸ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಬಿಜೆಪಿ ಸುಳ್ಳನ್ನು ಸತ್ಯವೆಂದು ಹೇಳುತ್ತಿದೆ. ಈ ಭ್ರಮೆ ಶೀಘ್ರದಲ್ಲೇ ಬಯಲಾಗಲಿದ್ದು, ಭಾರತ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಮೂರು ವಿಷಯಗಳ ಕುರಿತು ಗಮನ ಸೆಳೆದಿರುವ ರಾಹುಲ್ ಗಾಂಧಿ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಕುರಿತು …

Read More »

ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಭಾರತದ ಕ್ರಿಕೆಟರ್ ಮತ್ತು ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಕರುನಾಡಿನ ಹೆಮ್ಮೆಯ ಮಹಿಳೆ ಸಾಲುಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್‍ಡೌನ್‍ನಿಂದ ಕ್ರಿಕೆಟ್‍ನಿಂದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಈ ವೇಳೆ ಸದಾ ಸಾಮಾಜಿಕ ಜಾಲತಣದಲ್ಲಿ ಸಕ್ರಿಯವಾಗಿರುವ ಹರ್ಭಜನ್ ಅವರು, ತಮ್ಮ ಟ್ವಿಟ್ಟರ್ ನಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈಗ ಕರ್ನಾಟಕದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ …

Read More »

ದೂರವಾಣಿ ಕದ್ದಾಲಿಕೆ ಆರೋಪ: ರಾಜಸ್ಥಾನ ಸರ್ಕಾರದ ವಿವರಣೆ ಕೇಳಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ರಾಜಸ್ಥಾನದ ರಾಜಕೀಯದ ಅನಿಶ್ಚಿತತೆ ಮುಂದುವರಿದಿದೆ. ಬಿಜೆಪಿ ನಾಯಕರ ದೂರವಾಣಿ ಸಂಭಾಷಣೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡಿದೆ ಎಂಬ ಆರೋಪ ತೀವ್ರವಾಗುತ್ತಿದ್ದು, ಈ ಬಗ್ಗೆ ರಾಜಸ್ಥಾನ ಸರ್ಕಾರದ ಬಳಿ ಕೇಂದ್ರ ಗೃಹ ಸಚಿವಾಲಯ ವರದಿ ಕೇಳಿದೆ. ರಾಜಸ್ಥಾನದ ಗೆಹ್ಲೋಟ್ ಸರಕಾರವನ್ನು ಉರುಳಿಸಲು ಬಿಜೆಪಿ ಆಮಿಷವೊಡ್ಡಿದೆ ಎಂಬ ಮಾತುಗಳಿಗೆ ಆಧಾರ ಒದಗಿಸುವಂತಹ ಸಂಭಾಷಣೆಗಳುಳ್ಳ ಆಡಿಯೋ ಕ್ಲಿಪ್ ನ್ನು ಕಾಂಗ್ರೆಸ್ ಬಹಿರಂಗಪಡಿಸಿದ್ದು, ಎರಡು ಎಫ್ ಐಆರ್ ಕೂಡಾ ದಾಖಲಾಗಿದೆ. ಈ ಕುರಿತು ಕೂಡಾ …

Read More »

ಶಾಕಿಂಗ್ ನ್ಯೂಸ್ : ಭಾರತದಲ್ಲಿ ಈಗ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್!

ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ. 12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ …

Read More »

ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು

ನವದೆಹಲಿ : ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರನಾ ವೈರಸ್ ಗೆ ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಪ್ರಯತ್ನ ನಡೆಸಿವೆ. ಈ ನಡುವೆ ಭಾರತ್ ಬಯೋಟೆಕ್ ಮತ್ತು ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ಕೊವಾಕ್ಸಿನ್ ನ ಮಾನವ ಕ್ಲಿನಿಕಲ್ ಪ್ರಯೋಗವು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಾಳೆ ನಡೆಯಲಿದೆ. ನಾಳೆಯಿಂದ ಏಮ್ಸ್ ನಲ್ಲಿ ಕೋವಿಡ್ ಲಸಿಕೆ ಕೊವಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗ ನಡೆಯಲಿದ್ದು, ಆರೋಗ್ಯವಂತ ಮತ್ತು …

Read More »

ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ನವದೆಹಲಿ,  ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …

Read More »

ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …

Read More »

ಕೊರೊನಾ ಜಿಗಿತ: ಒಂದೇ ದಿನ 29,429 ಮಂದಿಗೆ ಸೋಂಕು……

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 29,429 ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,181 ಕ್ಕೇರಿದೆ. ಬರೋಬ್ಬರಿ 582 ಮಂದಿ ಕೊರೊನಾಗೆ ಬಲಿ ಆಗಿದ್ದು, ಒಟ್ಟು ಮೃತರ ಸಂಖ್ಯೆ 24,309ಕ್ಕೇರಿದೆ. ದೇಶದಲ್ಲಿ ಜುಲೈ 1ರಿಂದ ಇಲ್ಲಿಯವರೆಗೂ ಹೆಚ್ಚು ಕಡಿಮೆ ಮೂರು ಲಕ್ಷ ಕೇಸ್ ನಮೂದಾಗಿವೆ. ಆರೂವರೆ ಸಾವಿರ ಮಂದಿ ಹೆಮ್ಮಾರಿಯಿಂದ ಪ್ರಾಣ ಕಳ್ಕೊಂಡಿದ್ದಾರೆ.ನಿನ್ನೆಯವರೆಗೂ 1.20 ಕೋಟಿ ಮಂದಿಗೆ ಕೊರೊನಾ ಟೆಸ್ಟ್ …

Read More »