ನವದೆಹಲಿ: ಮಹಾರಾಷ್ಟ್ರದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ಸೋಂಕಿನಿಂದ ತತ್ತರಿಸಿದೆ. ದೆಹಲಿಯಲ್ಲಿ ಜುಲೈ ಆರಂಭದಿಂದ ಸೋಂಕಿನ ಪ್ರಮಾಣ ತೀವ್ರ ಏರಿಕೆ ಕಂಡು ಬರುತ್ತಿದ್ದು ಸದ್ಯ 80 ಸಾವಿರ ಗಡಿ ದಾಟಿರುವ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಬಿಪಿ(ಇಂಡೋ ಟಿಬೆಟಿಯನ್-ಬಾರ್ಡರ್ ಪೊಲೀಸ್) ಪಡೆ 10 ದಿನದಲ್ಲೇ 10 ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ ಸುಮಾರು 5.5 ಲಕ್ಷ ಮಂದಿಯಲ್ಲಿ ಸೋಂಕು …
Read More »ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ.
ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್‌ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್‌ಇ ಮಂಡಳಿ ಸಪ್ರೀಂಕೋರ್ಟ್‌ಗೆ ತಿಳಿಸಿದೆ. ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು …
Read More »ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …
Read More »ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.
ಹೊಸದಿಲ್ಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …
Read More »ಉತ್ಪನ್ನದ ಮೂಲ ತೋರಿಸಿʼ – ಚೀನಾಗೆ ಮತ್ತೊಂದು ಹೊಡೆತ
ನವದೆಹಲಿ: ಚೀನಿ ವಸ್ತುಗಳನ್ನು ಬಹಿಷ್ಕರಿಸಿ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. gem.gov.in ವೆಬ್‌ಸೈಟಿನಲ್ಲಿ ಕಡ್ಡಾಯವಾಗಿ ಉತ್ಪನ್ನ ತಯಾರದ ಮೂಲ ದೇಶದ ಹೆಸರನ್ನು ಪ್ರದರ್ಶಿಸಬೇಕೆಂದು ಸೂಚಿಸಿದೆ. ಈ ನಿರ್ಧಾರ ಪ್ರಕಟವಾಗುವ ಮೊದಲೇ ಅಪ್ಲೋಡ್ ಮಾಡಿರುವ ಉತ್ಪನ್ನಗಳಿಗೆ ಶೀಘ್ರವೇ ದೇಶದ ಹೆಸರನ್ನು ಸೇರಿಸಬೇಕು ಎಂದು ಸರ್ಕಾರ ಹೇಳಿದೆ. ಅಷ್ಟೇ ಅಲ್ಲದೇ ಜನರಿಗೆ ಸುಲಭವಾಗಿ ತಿಳಿಯಲು ʻಮೇಕ್ ಇನ್ ಇಂಡಿಯಾʼ ವಿಭಾಗವನ್ನು ಸೇರಿಸಬೇಕು …
Read More »ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್…………
ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ …
Read More »ವಿದ್ಯಾರ್ಥಿಗಳು ಕಂಟೈನ್ಮೆಂಟ್ ಝೋನ್‍ಗೆ ಹೋಗಬಹುದು, ಪರೀಕ್ಷೆ ನಡೆಸಬೇಡಿ: ಎನ್‍ಎಸ್‍ಯುಐ ಆಗ್ರಹ
ನವದೆಹಲಿ: ಸಿಬಿಎಸ್‍ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್‍ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, …
Read More »ನೇಪಾಳದ ಗಡಿಯನ್ನು ವಶಪಡಿಸಿಕೊಂಡಿದೆ ಚೀನಾ- ಬುದ್ಧಿ ಕಲಿಯದ ನೇಪಾಳ
ನವದೆಹಲಿ: ಚೀನಾ ಕೇವಲ ಭಾರತ ಮಾತ್ರವಲ್ಲ ಇತರೆ ನೆರೆ ದೇಶಗಳ ಗಡಿಗಳನ್ನು ಅತಿಕ್ರಮಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನೇಪಾಳದ ಗೂರ್ಖಾದ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿರುವ ಕುರಿತು ವರದಿಯಾಗಿದೆ. ಆದರೆ ಇದೆಲ್ಲವನ್ನು ಬಿಟ್ಟು ನೇಪಾಳ ಭಾರತದ ಗಡಿ ಕುರಿತು ಇದೀಗ ಹೆಚ್ಚು ಚರ್ಚೆ ನಡೆಸುತ್ತಿದೆ. ಅಲ್ಲದೆ ನೇಪಾಳದ ಜನರಲ್ಲಿ ಭಾರತ ವಿರೋಧಿ ಅಲೆಯನ್ನು ಎಬ್ಬಿಸುತ್ತಿದೆ. ಮ್ಯಾಪ್‍ನಲ್ಲಿ ರುಯಿ ಗೌನ್ ಪ್ರದೇಶ ನೇಪಾಳಕ್ಕೆ ಒಳಪಟ್ಟಿದೆ. ಆದರೆ ಗೂರ್ಖಾದ ರುಯಿ ಭೋಟ್ ಅಧೀನದಲ್ಲಿದ್ದ ರುಯಿ …
Read More »ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »