Breaking News

ನವದೆಹಲಿ

ಉತ್ಪನ್ನದ ಮೂಲ ತೋರಿಸಿʼ – ಚೀನಾಗೆ ಮತ್ತೊಂದು ಹೊಡೆತ

ನವದೆಹಲಿ: ಚೀನಿ ವಸ್ತುಗಳನ್ನು ಬಹಿಷ್ಕರಿಸಿ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.  gem.gov.in ವೆಬ್‌ಸೈಟಿನಲ್ಲಿ ಕಡ್ಡಾಯವಾಗಿ ಉತ್ಪನ್ನ ತಯಾರದ ಮೂಲ ದೇಶದ ಹೆಸರನ್ನು ಪ್ರದರ್ಶಿಸಬೇಕೆಂದು ಸೂಚಿಸಿದೆ. ಈ ನಿರ್ಧಾರ ಪ್ರಕಟವಾಗುವ ಮೊದಲೇ ಅಪ್ಲೋಡ್‌ ಮಾಡಿರುವ ಉತ್ಪನ್ನಗಳಿಗೆ ಶೀಘ್ರವೇ ದೇಶದ ಹೆಸರನ್ನು ಸೇರಿಸಬೇಕು ಎಂದು ಸರ್ಕಾರ ಹೇಳಿದೆ. ಅಷ್ಟೇ ಅಲ್ಲದೇ ಜನರಿಗೆ ಸುಲಭವಾಗಿ ತಿಳಿಯಲು ʻಮೇಕ್‌ ಇನ್‌ ಇಂಡಿಯಾʼ ವಿಭಾಗವನ್ನು ಸೇರಿಸಬೇಕು …

Read More »

ಪತಂಜಲಿ ಕೊರೊನಾ ಔಷಧಿ ಜಾಹೀರಾತಿಗೆ ಆಯುಷ್ ಸಚಿವಾಲಯದ ಬ್ರೇಕ್…………

ನವದೆಹಲಿ: ಕೋವಿಡ್-19 ಸೋಂಕಿಗೆ ಯೋಗಗುರು ಬಾಬಾ ರಾಮ್‍ದೇವ್ ಅವರ ಪತಂಜಲಿ ಸಂಸ್ಥೆ ಆಯುರ್ವೇದ ಔಷಧಿಯನ್ನು ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ ಕೇಂದ್ರ ಆಯುಷ್ ಸಚಿವಾಲಯ ಬ್ರೇಕ್ ಹಾಕಿದ್ದು, ಈ ಕುರಿತು ಜಾಹೀರಾತು ಪ್ರಸಾರ ನಿಲ್ಲಿಸುವಂತೆ ಹೇಳಿದೆ. ಅಲ್ಲದೇ ಔಷಧಿಯ ಕುರಿತ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಪತಂಜಲಿ ಸಂಸ್ಥೆಗೆ ಸೂಚನೆ ನೀಡಿದೆ. ಪತಂಜಲಿ ಸಂಸ್ಥೆಯ ಔಷಧಿಯ ವಿವರಗಳು ಅಥವಾ ಹಕ್ಕುಗಳ ಕುರಿತ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಆಯುಷ್ ಸಚಿವಾಲಯ …

Read More »

ವಿದ್ಯಾರ್ಥಿಗಳು ಕಂಟೈನ್ಮೆಂಟ್ ಝೋನ್‍ಗೆ ಹೋಗಬಹುದು, ಪರೀಕ್ಷೆ ನಡೆಸಬೇಡಿ: ಎನ್‍ಎಸ್‍ಯುಐ ಆಗ್ರಹ

ನವದೆಹಲಿ: ಸಿಬಿಎಸ್‍ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್‍ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, …

Read More »

ನೇಪಾಳದ ಗಡಿಯನ್ನು ವಶಪಡಿಸಿಕೊಂಡಿದೆ ಚೀನಾ- ಬುದ್ಧಿ ಕಲಿಯದ ನೇಪಾಳ

ನವದೆಹಲಿ: ಚೀನಾ ಕೇವಲ ಭಾರತ ಮಾತ್ರವಲ್ಲ ಇತರೆ ನೆರೆ ದೇಶಗಳ ಗಡಿಗಳನ್ನು ಅತಿಕ್ರಮಿಸಿಕೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ನೇಪಾಳದ ಗೂರ್ಖಾದ ಪ್ರದೇಶವನ್ನು ಚೀನಾ ಅತಿಕ್ರಮಿಸಿಕೊಂಡಿರುವ ಕುರಿತು ವರದಿಯಾಗಿದೆ. ಆದರೆ ಇದೆಲ್ಲವನ್ನು ಬಿಟ್ಟು ನೇಪಾಳ ಭಾರತದ ಗಡಿ ಕುರಿತು ಇದೀಗ ಹೆಚ್ಚು ಚರ್ಚೆ ನಡೆಸುತ್ತಿದೆ. ಅಲ್ಲದೆ ನೇಪಾಳದ ಜನರಲ್ಲಿ ಭಾರತ ವಿರೋಧಿ ಅಲೆಯನ್ನು ಎಬ್ಬಿಸುತ್ತಿದೆ. ಮ್ಯಾಪ್‍ನಲ್ಲಿ ರುಯಿ ಗೌನ್ ಪ್ರದೇಶ ನೇಪಾಳಕ್ಕೆ ಒಳಪಟ್ಟಿದೆ. ಆದರೆ ಗೂರ್ಖಾದ ರುಯಿ ಭೋಟ್ ಅಧೀನದಲ್ಲಿದ್ದ ರುಯಿ …

Read More »

ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …

Read More »

ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ

ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …

Read More »

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್,….

ನವದೆಹಲಿ: ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ. ತಪ್ಪು ಮಾಹಿತಿ ಕೊಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ, ಭಾರತದ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿಕೊಂಡು ಗಡಿಭಾಗದಲ್ಲಿ ಮೊನ್ನೆ …

Read More »

ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ.

ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್‌ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್‌ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್‌ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …

Read More »

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …

Read More »

ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ

ನವದೆಹಲಿ: ಗಡಿಯಲ್ಲಿ ಪುಂಡಾಟಿಕೆ ಮಾಡುವ ಚೀನಾಕ್ಕೆ ಸೂಕ್ತ ಉತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಪೂರ್ವ ಲಡಾಕ್‍ನಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮಹತ್ವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾ ಗಡಿಯಲ್ಲಿ ಹೆಚ್ಚುವರಿ ಸೇನೆ ನಿಯೋಜನೆ ಮಾಡಿಕೊಳ್ಳುತ್ತಿದ್ದು, ಮತ್ತೆ ಆಕ್ರಮಣ ಮಾಡುವ ಸಾಧ್ಯತೆಗಳಿದೆ. ಚೀನಾ ಗಡಿಯುದ್ಧಕ್ಕೂ …

Read More »