ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್‌ನ್ನು ಮುಂದೂಡಲು ಐಸಿಸಿ ಚಿಂತನೆ ನಡೆಸಿದ ಬೆನ್ನಲ್ಲೇ ಬಿಸಿಸಿಐ ಐಪಿಎಲ್ ಆಡಿಸಲು ಮುಂದಾಗುತ್ತಿದೆ. ಹೌದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲಿ ಕ್ರಿಕೆಟ್ ನಡೆಸುವ ಸಂಬಂಧ ರಾಜ್ಯದ ಕ್ರಿಕೆಟ್ ಮಂಡಳಿಗಳಿಗೆ ಪತ್ರ ಬರೆದು ನಿಮ್ಮ ಅಭಿಪ್ರಾಯ ತಿಳಿಸುವಂತೆ ಕೇಳಿಕೊಂಡಿದ್ದಾರೆ. ಈ ವರ್ಷ ಐಪಿಎಲ್ ಆಯೋಜಿಸಲು ಬಿಸಿಸಿಐ ವಿವಿಧ ಆಯ್ಕೆಗಳನ್ನು ಹುಡುಕುತ್ತಿದೆ. ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲೂ ನಡೆಸುವ ಬಗ್ಗೆ …
Read More »15 ದಿನದಲ್ಲಿ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಿಕೊಡಿ : ಸುಪ್ರೀಂ ಆದೇಶ
ನವದೆಹಲಿ,ಜೂ.9- ದೇಶಾದ್ಯಂತ ಲಾಕ್‍ಡೌನ್ ಜಾರಿಯಾದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ 15 ದಿನದಲ್ಲಿ ಕಳುಹಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಯೋಜನೆ ಹಾಗೂ ನಿರಾಶ್ರಿತರ ತಾಣಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್‍ಕೃಷ್ಣ ಕೌಲ್ ಮತ್ತು ಎಂ.ಆರ್.ಷಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ …
Read More »ದೆಹಲಿಯಲ್ಲಿ ಕೊರೊನಾ ಸ್ಫೋಟ – ಜುಲೈ ಅಂತ್ಯಕ್ಕೆ 5.5 ಲಕ್ಷ ಜನರಿಗೆ ಸೋಂಕು……….
ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ವೇಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದೆಂದು ಡಿಸಿಎಂ ಮನೀಶ್ ಸಿಸೋಡಿಯಾ ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ …
Read More »ದೆಹಲಿಯಲ್ಲಿ ಕೊರೊನಾ ಸ್ಫೋಟ – ಜುಲೈ ಅಂತ್ಯಕ್ಕೆ 5.5 ಲಕ್ಷ ಜನರಿಗೆ ಸೋಂಕು………..
ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ವೇಗಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದೆಂದು ಡಿಸಿಎಂ ಮನೀಶ್ ಸಿಸೋಡಿಯಾ ಭವಿಷ್ಯ ನುಡಿದಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆ ಲೆಫ್ಟಿನೆಂಟ್ ಗವರ್ನರ್ ಅನೀಲ್ ಬೈಜಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯಂದ್ರ ಜೈನ್ ಹಾಗೂ ದೆಹಲಿ …
Read More »ಹದ್ದು ಮೀರಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಸಭೆ
ನವದೆಹಲಿ,ಜೂ.9- ದೇಶದೆಲ್ಲೆಡೆ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಆತಂಕ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇಂದು ಮಹತ್ವದ ಸಭೆ ನಡೆಸಿ ಹೆಮ್ಮಾರಿಯ ಪರಿಣಾಮಕಾರಿ ನಿಗ್ರಹಕ್ಕಾಗಿ ಅಗತ್ಯವಾಗಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಿತು. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ನೇತೃತ್ವದಲ್ಲಿ ಸಚಿವರ ಸಮೂಹದ ಸಭೆ ಜರುಗಿತು. ಈ ಸಭೆಯಲ್ಲಿ ಕೊರೊನಾ ಉಲ್ಭಣದ ಬಗ್ಗೆ ಆತಂಕ ವ್ಯಕ್ತಪಡಿಸಿ ಈ ಮಹಾಮಾರಿಯನ್ನು ನಿಯಂತ್ರಿಸುವ ಮಾರ್ಗೋಪಾಯಗಳ ಬಗ್ಗೆ ಗಹನ …
Read More »ಮತ್ತೆ ಪೆಟ್ರೋಲ್ ಬೆಲೆ ಹೆಚ್ಚಳ…..
ನವದೆಹಲಿ: ಭಾನುವಾರ, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆ ಹೆಚ್ಚಿಸಿದ್ದ ತೈಲ ಕಂಪನಿಗಳು ಇಂದೂ ಕೂಡ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಲೀಟರ್ ಪೆಟ್ರೋಲ್ಗೆ 54 ಪೈಸೆ ಹಾಗೂ ಡೀಸೆಲ್ಗೆ 58 ಪೈಸೆ ಹೆಚ್ಚಳವಾಗಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಪರಿಣಾಮ, 82 ದಿನಗಳ ಲಾಕ್‍ಡೌನ್ ವಿರಾಮದ ಬಳಿಕ ಭಾನುವಾರದಿಂದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಏರಿಕೆ ಮಾಡುತ್ತಾ ಬಂದಿವೆ. ರಾಷ್ಟ್ರ …
Read More »ಕೊರೊನಾ ಆರ್ಭಟಕ್ಕೆ ರಾಷ್ಟ್ರ ರಾಜಧಾನಿ ತತ್ತರ……….
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ರಣ ಕೇಕೆ ಹಾಕಿ ಆರ್ಭಟಿಸುತ್ತಿದೆ. ದಿನದಿಂದ ದಿನಕ್ಕೆ ಸರ್ಕಾರದ ಕೈ ಮೀರಿ ಸೋಂಕು ಹಬ್ಬುತ್ತಿದೆ. ಒಂದು ಕಡೆ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ. ಮತ್ತೊಂದು ಕಡೆ ಮಣ್ಣಲ್ಲಿ ಶವಗಳನ್ನು ಹೂಳಲು ಜಾಗ ಸಿಗುತ್ತಿಲ್ಲ. ಈ ನಡುವೆ ದೆಹಲಿಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿರುವ ಭೀತಿ ಸೃಷ್ಟಿಯಾಗಿದೆ. ದೆಹಲಿ ರಾಜಕೀಯ ವ್ಯವಸ್ಥೆಯ ಶಕ್ತಿ ಕೇಂದ್ರ. ಕೇಂದ್ರಾಡಳಿತ ಪ್ರದೇಶವಾಗಿರುವ ಈ ರಾಜ್ಯ ಈಗ ಕೊರೊನಾ ವಿಚಾರದಲ್ಲಿ ದೊಡ್ಡ ಸದ್ದು …
Read More »ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ …
Read More »ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಆಪ್ ಸರ್ಕಾರ…….
ನವದೆಹಲಿ: ಮದ್ಯ ಮಾರಾಟದ ಮೇಲೆ ಹೇರಿದ್ದ ಶೇಕಡಾ 70 ಕೊರೊನಾ ವಿಶೇಷ ಶುಲ್ಕವನ್ನು ದೆಹಲಿ ಸರ್ಕಾರ ಹಿಂಪಡೆದುಕೊಂಡಿದ್ದು, ಬುಧವಾರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆಯಾಗಲಿದೆ. ಕೊರೊನಾ ವಿಶೇಷ ಶುಲ್ಕ ಹಿಂಪಡೆದುಕೊಂಡಿರುವ ಸರ್ಕಾರ ಶೇ.20ರಿಂದ 25ರಷ್ಟು ವ್ಯಾಟ್ ಟ್ಯಾಕ್ಸ್ ಹೇರಲು ನಿರ್ಧಾರ ತೆಗೆದುಕೊಂಡಿದೆ. ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಎರಡು ಮಹತ್ವ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ …
Read More »ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ.
ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ. ಇತ್ತೀಚೆಗಷ್ಟೇ ದೆಹಲಿ ಸರ್ಕಾರ ತನ್ನ ಜಿಲ್ಲಾಡಳಿತಗಳಿಗೆ ಕೊರೋನಾ ಚಿಕಿತ್ಸೆಗೆ ಹೆಚ್ಚುವರಿ ಬೆಡ್ ಹುಡುಕಿ ಮತ್ತು ಕೊರೋನಾದಿಂದ ಸತ್ತವರ ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನ ಗುರುತಿಸಿ ಎಂದು ಹೇಳಿತ್ತು. ಈ ನಡುವೆ ಪ್ರತಿನಿತ್ಯವೂ 15 ಸಾವಿರಕ್ಕೂಹೆಚ್ಚು ಪ್ರಕರಣಗಳು ಪತ್ತೆಯಾಗಲಿವೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಾಯುವ್ಯ ಚೀನಾದ …
Read More »
Laxmi News 24×7