Breaking News

ನವದೆಹಲಿ

ಕೊರೊನಾ ಆರ್ಭಟಕ್ಕೆ ರಾಷ್ಟ್ರ ರಾಜಧಾನಿ ತತ್ತರ……….

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ರಣ ಕೇಕೆ ಹಾಕಿ ಆರ್ಭಟಿಸುತ್ತಿದೆ. ದಿನದಿಂದ ದಿನಕ್ಕೆ ಸರ್ಕಾರದ ಕೈ ಮೀರಿ ಸೋಂಕು ಹಬ್ಬುತ್ತಿದೆ. ಒಂದು ಕಡೆ ಆಸ್ಪತ್ರೆಯಲ್ಲಿ ಬೆಡ್ ಸಿಗುತ್ತಿಲ್ಲ. ಮತ್ತೊಂದು ಕಡೆ ಮಣ್ಣಲ್ಲಿ ಶವಗಳನ್ನು ಹೂಳಲು ಜಾಗ ಸಿಗುತ್ತಿಲ್ಲ. ಈ ನಡುವೆ ದೆಹಲಿಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿರುವ ಭೀತಿ ಸೃಷ್ಟಿಯಾಗಿದೆ. ದೆಹಲಿ ರಾಜಕೀಯ ವ್ಯವಸ್ಥೆಯ ಶಕ್ತಿ ಕೇಂದ್ರ. ಕೇಂದ್ರಾಡಳಿತ ಪ್ರದೇಶವಾಗಿರುವ ಈ ರಾಜ್ಯ ಈಗ ಕೊರೊನಾ ವಿಚಾರದಲ್ಲಿ ದೊಡ್ಡ ಸದ್ದು …

Read More »

ತೀವ್ರ ಜ್ವರ, ಗಂಟಲು ನೋವು – ಸಿಎಂ ಕೇಜ್ರಿವಾಲ್‍ಗೆ ಕೊರೊನಾ ಟೆಸ್ಟ್………..

ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಬೆಳಗ್ಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ. ಭಾನುವಾರದಿಂದ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಸಲಹೆ ಹಿನ್ನೆಲೆ ನಾಳೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರಿವಾಲ್ ತೀವ್ರ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕವೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಲು ತಿರ್ಮಾನಿಸಲಾಗಿದೆ.ಕೊರೊನಾ ಹೋರಾಟದ ಮುನ್ನಲೆಯಲ್ಲಿರುವ ಅರವಿಂದ ಕೇಜ್ರಿವಾಲ್, ಪ್ರತಿ ನಿತ್ಯ ಅಧಿಕಾರಗಳ ಸಭೆ ನಡೆಸುತ್ತಿದ್ದಾರೆ. ಜ್ವರ ಕಾಣಿಸಿಕೊಂಡ …

Read More »

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಆಪ್ ಸರ್ಕಾರ…….

ನವದೆಹಲಿ: ಮದ್ಯ ಮಾರಾಟದ ಮೇಲೆ ಹೇರಿದ್ದ ಶೇಕಡಾ 70 ಕೊರೊನಾ ವಿಶೇಷ ಶುಲ್ಕವನ್ನು ದೆಹಲಿ ಸರ್ಕಾರ ಹಿಂಪಡೆದುಕೊಂಡಿದ್ದು, ಬುಧವಾರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆಯಾಗಲಿದೆ. ಕೊರೊನಾ ವಿಶೇಷ ಶುಲ್ಕ ಹಿಂಪಡೆದುಕೊಂಡಿರುವ ಸರ್ಕಾರ ಶೇ.20ರಿಂದ 25ರಷ್ಟು ವ್ಯಾಟ್ ಟ್ಯಾಕ್ಸ್ ಹೇರಲು ನಿರ್ಧಾರ ತೆಗೆದುಕೊಂಡಿದೆ. ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಎರಡು ಮಹತ್ವ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಲಾಕ್‍ಡೌನ್ ಅವಧಿಯಲ್ಲಿ …

Read More »

ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ.

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಜೂನ್ ಮಧ್ಯಭಾಗದ ವೇಳೆಗೆ ಪ್ರತಿ ನಿತ್ಯ 15,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲಿದೆ ಎಂಬ ಆತಂಕಕಾರಿ ವರದಿ ಬಂದಿದೆ. ಇತ್ತೀಚೆಗಷ್ಟೇ ದೆಹಲಿ ಸರ್ಕಾರ ತನ್ನ ಜಿಲ್ಲಾಡಳಿತಗಳಿಗೆ ಕೊರೋನಾ ಚಿಕಿತ್ಸೆಗೆ ಹೆಚ್ಚುವರಿ ಬೆಡ್ ಹುಡುಕಿ ಮತ್ತು ಕೊರೋನಾದಿಂದ ಸತ್ತವರ ಅಂತ್ಯ ಸಂಸ್ಕಾರಕ್ಕಾಗಿ ಸ್ಮಶಾನ ಗುರುತಿಸಿ ಎಂದು ಹೇಳಿತ್ತು. ಈ ನಡುವೆ ಪ್ರತಿನಿತ್ಯವೂ 15 ಸಾವಿರಕ್ಕೂ‌ಹೆಚ್ಚು ಪ್ರಕರಣಗಳು ಪತ್ತೆಯಾಗಲಿವೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಾಯುವ್ಯ ಚೀನಾದ …

Read More »

ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ. ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ ದೇಶಕ್ಕೆ ಶಾಕ್ ನೀಡಿತ್ತು. ದೇಶದ ಹಲವರು ರಾಜ್ಯಗಳಿಂದ ಆಗಮಿಸಿದ್ದ ಜಮಾತ್ ಸದಸ್ಯರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಭಾರತ ಮಾತ್ರವಲ್ಲದೇ ವಿದೇಶದಿಂದ ಆಗಮಿಸಿದ್ದ ಹಲವು ಪ್ರವಾಸಿಗರು ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಮಾಹಿತಿ ಆ ಬಳಿಕ …

Read More »

ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ……………..

ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ. ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಫೇಸ್ …

Read More »

ಪಿಎಂ ಕೇರ್ಸ್ ಫಂಡ್ ಅನುಮಾನ ಮೂಡಿಸಿದೆ, ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸುವಂತೆ ಪಿಐಎಲ್ ಸಲ್ಲಿಕೆ

ನವದೆಹಲಿ: ಪಿಎಂ ಕೇರ್ಸ್ ಫಂಡ್ ಗೆ ಬರುತ್ತಿರುವ ದೇಣಿಗೆ ಮೂಲ ಮತ್ತು ಅದನ್ನು ಯಾವ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂಬ ವಿವರವನ್ನು ವೆಬ್‍ಸೈಟ್ ನಲ್ಲಿ ಪ್ರಕಟಿಸಲು ಸೂಚಿಸುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಪಿಎಂ ಕೇರ್ಸ್ ಮಾಹಿತಿ ಕೋರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಬಳಿಕ ಡಾ.ಎಸ್.ಎಸ್ ಹೂಡಾ ಅವರು ವಕೀಲ ಆದಿತ್ಯ ಹೂಡಾ ಮೂಲಕ ಈ …

Read More »

ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಮಾಹಿತಿ ಆರೋಪ- ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವುದಾಗಿ ಆರೋಪಿಸಿ ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ. ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಘೋಷಣೆ ಮಾಡಿದ್ದಾರೆ. …

Read More »

ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

ನವದೆಹಲಿ: ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ …

Read More »

‘ಆತ್ಮನಿರ್ಭರ’ ಪ್ಯಾಕೇಜ್‍ಗೆ ಕೇಂದ್ರ ಸಂಪುಟ ಸಮ್ಮತಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‍ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇವತ್ತು ಅನುಮೋದನೆ ನೀಡಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ರೈತರು, ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗೋ ಪ್ಯಾಕೇಜ್‍ಗೆ ಒಪ್ಪಿಗೆ ನೀಡಲಾಯಿತು. ರೈತರು ಉತ್ಪನ್ನಗಳನ್ನು ಅವರ ಇಚ್ಛಿತ ಸ್ಥಳಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಎಂಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ …

Read More »